checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಉಟ್ಟು-ತೊಟ್ಟು ಪೂಜ್ಯವಾಗಿ ಬಂದ ಜಂಗಮ ವಿಶೇಷವೆಂದು,
ಕಂತೆ-ಬೊಂತೆಯ ಜಂಗಮ ಬಂದಡೆ ಹೀನವೆಂದು
ಕಂಡೆನಾದಡೆ ಪಂಚಮಹಾಪಾತಕ.
ಇದು ಕಾರಣ, ಅನ್ನ-ವಸ್ತ್ರ-ಧನ ಮಾಟದಲ್ಲಿ
ಎರಡಾಗಿ ಕಂಡೆನಾದಡೆ ನರಕದಲ್ಲಿಕ್ಕುವ,
ಕೂಡಲಸಂಗಮದೇವ.
412.01 141
A141
ಬಸವಣ್ಣ ಕೂಡಲಸಂಗಮದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಮನೆದೈವ, ಕುಲದೈವ ಎನಗೆ ನಿಮ್ಮವರಯ್ಯಾ.
ತನು ವಿೂಸಲು, ಮನ ಮೀಸಲು, ನಯನ ವಿೂಸಲು ಎನ್ನ,
ಕೂಡಲಸಂಗಮದೇವಾ, ನಿಮ್ಮ ಶರಣರಿಗೆ
374.01 142
A142
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ನಯನದಾಹಾರವ ಜಂಗಮವ ನೋಡಿಸುವೆನು,
ಶ್ರೋತ್ರದಾಹಾರವ ಜಂಗಮವ ಕೇಳಿಸುವೆನು,
ಘ್ರಾಣದಾಹಾರವ ಜಂಗಮವ ವಾಸಿಸುವೆನು,
ಜಿಹ್ವೆಯಾಹಾರವ ಜಂಗಮವನೂಡಿಸುವೆನು,
ಕವಚದಾಹಾರವ ಜಂಗಮಕ್ಕೆ ಹೊದ್ದಿಸುವೆನು,
ಅಧಿಕ ಪ್ರೇಮ ಪರಿಣಾ[ಮ]ವ ಮಾಡುವೆನು,
ಸಕಲಪದಾರ್ಥಂಗಳ ನೀಡುವೆನು,
ಕೂಡಲಸಂಗಾ ನಿಮ್ಮ ಶರಣರಿಗೆ
430.01 143
A143
ಬಸವಣ್ಣ ಕೂಡಲಸಂಗಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ನಾನು ಆರಂಭವ ಮಾಡುವೆನಯ್ಯಾ, ಗುರುಪೂಜೆಗೆಂದು,
ನಾನು ಬೆವಹಾರವ ಮಾಡುವೆನಯ್ಯಾ, ಲಿಂಗಾರ್ಚನೆಗೆಂದು,
ನಾನು ಪರಸೇವೆಯ ಮಾಡುವೆನಯ್ಯಾ, ಜಂಗಮದಾಸೋಹಕ್ಕೆಂದು.
ನಾನಾವಾವ ಕರ್ಮಂಗಳ ಮಾಡಿದಡೆಯು
ಆ ಕರ್ಮಫಲಭೋಗವ ನೀ ಕೊಡುವೆ ಎಂಬುದ ನಾನು ಬಲ್ಲೆನು.
ನೀ ಕೊಟ್ಟ ದ್ರವ್ಯವ ನಿಮಗಲ್ಲದೆ ಮತ್ತೊಂದಕ್ಕೆ ಮಾಡೆನು,
ನಿಮ್ಮ ಸೊಮ್ಮಿಂಗೆ ಸಲಿಸುವೆನು.
ನಿಮ್ಮಾಣೆ ಕೂಡಲಸಂಗಮದೇವಾ.
709.01 144
A144
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಹೊನ್ನಿನೊಳಗೊಂದೊರೆಯ, ಸೀರೆಯೊಳಗೊಂದೆಳೆಯ
ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ
ನಿಮ್ಮಾಣೆ, ನಿಮ್ಮ ಪ್ರಮಥರಾಣಿ.
ನಿಮ್ಮ ಶರಣರಿಗಲ್ಲದೆಮತೊಂದನರಿಯೆ
ಕೂಡಲಸಂಗಮದೇವಾ
436.01 145
A145
ಬಸವ‌‌ಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಹೊತ್ತಾರೆ ಎದ್ದು ಕಣ್ಣ ಹೊಸೆಯುತ್ತ,
ಎನ್ನ ಒಡಲಿಂಗೆ, ಎನ್ನ ಒಡವೆಗೆಂದು ಎನ್ನ ಮಡದಿ-ಮಕ್ಕಳಿಗೆಂದು,
ಕುದಿದೆನಾದಡೆ ಎನ್ನ ಮನಕ್ಕೆ ಮನವೆ ಸಾಕ್ಷಿ.
ಆಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ
ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ
ಎಂಬ ಶ್ರುತಿಯ ಬಸವಣ್ಣನೋದುವನು,
ಭವಿ ಬಿಜ್ಜಳನ ಗದ್ದುಗೆಯ ಕೆಳಗೆ ಕುಳ್ಳಿರ್ದು
ಓಲೈಸಿಹನೆಂದು ನುಡಿವರಯ್ಯಾ ಪ್ರಮಥರು.
ಕೊಡುವೆನೆ ಉತ್ತರವನವರಿಗೆ ಕೊಡಲಮ್ಮೆ.
ಹೊಲೆಹೊಲೆಯರ ಮನೆಯ ಹೊಕ್ಕಾದಡೆಯೂ
ಸಲೆ ಕೈಕೂಲಿಯ ಮಾಡಿಯಾದಡೆಯೂ,
ನಿಮ್ಮ ನಿಲವಿಂಗೆ ಕುದಿವೆನಲ್ಲದೆ, ಎನ್ನ ಒಡಲವಸರಕ್ಕೆ ಕುದಿದೆನಾದಡೆ
ತಲೆದಂಡ ಕೂಡಲಸಂಗಮದೇವಾ !
710.01 146
A146
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಮಾಡುವಲ್ಲಿ ಎನ್ನ ನಾನರಿದು ಮಾಡಿದೆನಾದಡೆ,
ನೀಡುವಲ್ಲಿ ಎನ್ನ ನಾನರಿದು ನೀಡಿದೆನಾದಡೆ,
ನೀಡುವಲ್ಲಿ ರುಚಿಗೆ ಮನವೆಳೆಸಿ ಹಾರೈಸಿದೆನಾದಡೆ,
ನಿಮಗಂದೆ ದ್ರೋಹವಯ್ಯಾ.
ಮಾಡುವಲ್ಲಿ ನೀಡುವಲ್ಲಿ ಕೂಡೆ ಶುದ್ಧನಲ್ಲದಿರ್ದಡೆ,
ನೀನಂದೆ ಮೂಗ ಕೊಯಿ ಕೂಡಲಸಂಗಮದೇವಾ
1316.01 147
A147
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಅರ್ಥ ಪ್ರಾಣ ಅಭಿಮಾನವನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ.
ಆದಿರುದ್ರನ ಮಗಳು ಆದಿಶಕ್ತಿ,
ಆದಿಶಕ್ತಿಯ ಮಗ ವಿಷ್ಣು,
ವಿಷ್ಣುವಿನ ಅರ್ಧಾಂಗಿ ಲಕ್ಷ್ಮಿ.
ಈ ತೊತ್ತಿನ ತೊತ್ತಿನ ಪಡಿದೊತ್ತನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ.
ಎನ್ನ ಮನದೊಡೆಯ ಮಹಾದೇವಾ,
ನಿಮ್ಮ ಮನವ ನಿಮಗೊಪ್ಪಿಸಿ ಶುದ್ಧ ನಾನು ಕಾಣಾ,
ಕೂಡಲಸಂಗಮದೇವಾ.
831.01 148
A148
ಬಸ‌ವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಮಾಟವಿಲ್ಲದ ಕೂಟವದೇಕೋಳ ಕೂಟವಿಲ್ಲದ ಮಾಟವದೇಕೋ? ಮಾಟಕೂಟವೆರಡರನುವರಿಯಬೇಕು. ಸಟೆಯಿಲ್ಲದೆ ದಿಟ ಘಟಿಸಿ ಸಯವಾಗಬೇಕು. ಕೂಟಮಾಟವೆರಡರ ಅನುಮತದಿಂದವೆ ಭಕ್ತಿ. ಇದೇ [ಕೂಟ] ಕೂಡಲಚೆನ್ನಸಂಗಯ್ಯಾ ನಿಮ್ಮಲ್ಲಿ. 134.03 149
A149
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಮಾಡುವಾತ ನಾನಲ್ಲಯ್ಯಾ, ನೀಡುವಾತ ನಾನಲ್ಲಯ್ಯಾ,
ಬೇಡುವಾತ ನಾನಲ್ಲಯ್ಯಾ, ನಿಮ್ಮ ಕಾರುಣ್ಯವಲ್ಲದೆ.
ಎಲೆ ದೇವಾ, ಮನೆಯ ತೊತ್ತು ಅಲಸಿದಡೆ ಒಡತಿ ಮಾಡಿಕೊಂಬಂತೆ,
ನಿನಗೆ ನೀ ಮಾಡಿಕೊ, ಕೂಡಲಸಂಗಮದೇವಾ.
832.01 150
A150
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  « ಹಿಂದಿನ 1011121314151617181920ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 15 ಈ ಪುಟದಲ್ಲಿ ಪಲಿತಾಂಶಗಳು 141 ರಿಂದ 150 ವರೆಗೆ