ವಚನ ಆಕರಗಳು (15ನೆ ಶತಮಾನ)
ಹರವ ನದಿಯ ತೆರನ ಹೋಲಬಲ್ಲಡೆ ಭಕ್ತಿ,
ಕೂಡೆ ಸಯದಾನವ ನೀಡಬಲ್ಲಡೆ ಭಕ್ತಿ,
ನೀಡಿ ಮಿಕ್ಕುದ ಕಾಯ್ದುಕೊಂಡಿರಬಲ್ಲಡೆ
ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವ |
524.01 |
151 A151 |
ಬಸವಣ್ಣ | ಕೂಡಲಸಂಗಮದೇವ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಮಾಡುವಂತಿರಬೇಕು ಮಾಡದಂತಿರಬೇಕು.
ಮಾಡುವ ಮಾಟದೊಳಗೆ ತಾನಿಲ್ಲದಂತಿರಬೇಕು.
ಕೂಡಲಸಂಗಮದೇವರ
ನೆನೆವುತ್ತ ನೆನೆವುತ್ತ ನೆನೆಯದಂತಿರಬೇಕು.
|
1314.01 |
152 A152 |
ಬಸವಣ್ಣ | ಕೂಡಲಸಂಗಮದೇವ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ತನುವ ಕೊಟ್ಟು ತನು ಬಯಲಾಯಿತ್ತು,
ಮನವ ಕೊಟ್ಟು ಮನ ಬಯಲಾಯಿತ್ತು,
ಧನವ ಕೊಟ್ಟು ಧನ ಬಯಲಾಯಿತ್ತು,
ಈ ತ್ರಿವಿಧವನು ಕೊಟ್ಟು ಕೂಡಲಚೆನ್ನಸಂಗಯ್ಯನಲ್ಲಿ
ಬಸವಣ್ಣಂಗೆ ಬಯಲಸಮಾಧಿಯಾಯಿತ್ತು. |
1258.03 |
153 A153 |
ಚೆನ್ನಬಸವಣ್ಣ | ಕೂಡಲಚೆನ್ನಸಂಗಯ್ಯ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಭಿತ್ತಿಯಿಲ್ಲದ ಚಿತ್ತಾರದಂತೆ
ಭಕ್ತಿಯಿಲ್ಲದ ಪ್ರಮಥನಾಗಿದ್ದೆನಯ್ಯಾ
ಸತ್ಯವಿಲ್ಲದ ಶರಣನಾಗಿದ್ದೆನಯ್ಯಾ
ಗೆರೆಯಿಲ್ಲದ ಕೋಲಲ್ಲಿ ಉದ್ದರೆಯನಿಕ್ಕಿದ
ಭಂಡದ ಹರದನಂತಾದೆನಯ್ಯಾ ಕೂಡಲಸಂಗಮದೇವಾ. |
939.01 |
154 A154 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
| ಆದಂತೆ ಆಗಲಿ, ಮಾದಂತೆ ಮಾಣಲಿ ಎನಲಾಗದು,
ನೇಮದಾತಂಗೆ ಛಲ ಬೇಕು, ಛಲ ಬೇಕು.
ಹಿಡಿದುದ ಬಿಡಲಾಗದಯ್ಯಾ.
ಹುಲಿಗೆರೆಯ ವರದ ಸೋಮನಾಥನು
ಮನಮುಟ್ಟಿದ ಧೀರಂಗಲ್ಲದೆ ಸೋಲುವನಲ್ಲ. |
294.06 |
155 A155 |
ಅಗ್ಘವಣಿಹೊನ್ನಯ್ಯ | ಹುಲಿಗೆರೆಯ ವರದ ಸೋಮನಾಥ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಲಂಚವಂಚನಕ್ಕೆ ಕೈಯಾನದಭಾಷೆ.
ಬಟ್ಟೆಯಲ್ಲಿ ಹೊನ್ನು ವಸ್ತ್ರ ಬಿದ್ದಿದ್ದರೆ
ನಾನು ಕೈ ಮುಟ್ಟಿ ಎತ್ತಿದೆನಾದರೆ
ನಿಮ್ಮಾಣೆ ನಿಮ್ಮ ಪ್ರಮಥರಾಣೆ.
ಅದೇನು ಕಾರಣವೆಂದರೆ, ನೀವಿಕ್ಕಿದ ಭಿಕ್ಷದಲ್ಲಿಪ್ಪೆನಾಗಿ.
ಇಂತಲ್ಲದೆ ನಾನು ಅಳಿಮನವ ಮಾಡಿ
ಪರದ್ರವ್ಯಕ್ಕೆ ಆಸೆ ಮಾಡಿದೆನಾದರೆ,
ನೀನಾಗಲೆ ಎನ್ನ ನರಕದಲ್ಲಿ ಅದ್ದಿ ನೀನೆದ್ದು ಹೋಗಾ ಶಂಭುಜಕ್ಕೇಶ್ವರಾ. |
1229.05 |
156 A156 |
ಸತ್ಯಕ್ಕ | ಶಂಭುಜಕ್ಕೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ನಾಳೆ ಬಪ್ಪುದು ನಮಗಿಂದೆ ಬರಲಿ,
ಇಂದು ಬಪ್ಪುದು ನಮಗೀಗಲೆ ಬರಲಿ,
ಇದಕಾರಂಜುವರು, ಇದಕಾರಳುಕುವರು
`ಜಾತಸ್ಯ ಮರಣಂ ಧ್ರುವಂ' ಎಂದುದಾಗಿ
ನಮ್ಮ ಕೂಡಲಸಂಗಮದೇವರು ಬರೆದ ಬರೆಹವ ತಪ್ಪಿಸುವಡೆ
ಹರಿಬ್ರಹ್ಮಾದಿಗಳಿಗಳವಲ್ಲ. |
697.01 |
157 A157 |
ಬಸವಣ್ಣ | ಕೂಡಲಸಂಗಮದೇವ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಕಳಹೋದಡೆ ಕನ್ನದುಳಿಯ ಹಿಡಿವೆ,
ಬಂದಿವಿಡಿದಡೆ ನಿಮ್ಮಿಂದ ಮುಂದೆ ನಡೆವೆನು.
ಮನಭೀತಿ ಮನಶಂಕೆಗೊಂಡೆನಾದಡೆ
ನಿಮ್ಮಾಣೆ, ನಿಮ್ಮ ಪುರಾತನರಾಣೆ.
ಆಳ್ದರ ನಡೆ ಸದಾಚಾರವೆನ್ನದಿರ್ದಡೆ,
ಕಟ್ಟಾಳು ಶಿಷ್ಟತನಕ್ಕೆ ಹೋಹ ಕಷ್ಟವ ನೋಡಾ,
ಕೂಡಲಸಂಗಮದೇವಾ. |
698.01 |
158 A158 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಅಡಿಗಡಿಗೆ ಬಂದಡರುತಿರ್ಪೆ.
ಕಡುಛಲ ನಿನಗೆ ಬೇಡ ಕಂಡಾ !
ಮೃಡನೆ, ಎನ್ನೊಡನೆ ನೀ ತೊಡರಿ ಸಸಿನೆ ಹೋಗಲಿರಯೆ.
ಎಂತೆಂದಡೆ ನಾನಂಜುವನಲ್ಲ.
ಸಂತತ ಘಾಸಿ ಮಾಡದೆ,
ಕಂತುಹರ ಅಭಯಕರ, ಎನ್ನ ನೇಮಕ್ಕೆ ಅಡ್ಡ ಬರುತ್ತಿರದಿರು.
ಒಡವೆ ಸವೆದರೊಡಲನೊಡ್ಡುವೆ.
ಕಡಗುವಡೊಮ್ಮೆ ಹಳಚಿ ನೋಡು.
ಬಡವನ ಕೈಯ ಕಡುಹ ನೋಡೆನ್ನೊಡೆಯ
ಸಂಗಪ್ರಿಯ ಚೆನ್ನಬಂಕೇಶ್ವರಾ. |
710.09 |
159 A159 |
ಸುಂಕದಬಂಕಣ್ಣ | ಸಂಗಪ್ರಿಯ ಚೆನ್ನಬಂಕೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಕಟ್ಟಿದೆನೊರೆಯ, ಬಿಟ್ಟೆ ಜನ್ನಿಗೆಯರ,
ಮುಟ್ಟಿ ಬಂದಿರಿದಡೆ ಓಸರಿಸುವನಲ್ಲ.
ಓಡದಿರು ಓಡದಿರು,
ನಿಮ್ಮ ಶರಣರ ಮನೆಯ ಬಿರಿದಿನ ಅಂಕಕಾರ.
ಓಡದಿರು, ಓಡದಿರು, ಎಲೆ ಎಲೆ ದೇವಾ,
ಎಲೆ ಎಲೆ ಸ್ವಾಮಿ, ಎಲೆ ಎಲೆ ಹಂದೆ
ಕೂಡಲಸಂಗಮದೇವಾ. |
701.01 |
160 A160 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 11 12 13 14 15 16 17 18 19 20 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 16 ಈ ಪುಟದಲ್ಲಿ ಪಲಿತಾಂಶಗಳು 151 ರಿಂದ 160 ವರೆಗೆ |
|
|