ವಚನ ಆಕರಗಳು (15ನೆ ಶತಮಾನ)
ಸಜ್ಜನ ಸದ್ಭಾವಿ ಅನ್ಯರಲ್ಲಿ ಕೈಯ್ಯಾಂತು ಬೇಡ,
ಲಿಂಗವ ಮುಟ್ಟಿ ಕೈಮೀಸಲು.
ಕಂಗಳಲ್ಲಿ ಒಸೆದು ನೋಡ ಪರವಧುವ.
ಮನದಲ್ಲಿ ನೆನೆಯನನ್ಯವ, ಮಾನವ ಸೇವೆಯ ಮಾಡ, ಲಿಂಗವ ಬೇಡ,
ಲಿಂಗದ ಹಂಗನೊಲ್ಲ, ಕೂಡಲಚೆನ್ನಸಂಗಾ ನಿಮ್ಮ ಶರಣ |
219.03 |
161 A161 |
ಚೆನ್ನಬಸವಣ್ಣ | ಕೂಡಲಚೆನ್ನಸಂಗಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಕಾಯದ ಕಳವಳಕ್ಕಂಜಿ, «ಕಾಯಯ್ಯಾ» ಎನ್ನೆನು,
ಜೀವನೋಪಾಯಕ್ಕೆ «ಈಯಯ್ಯಾ» ಎನ್ನೆನು.
«ಯದ್ ಭಾವಂ ತದ್ ಭವತಿ» ಉರಿ ಬರಲಿ, ಸಿರಿ ಬರಲಿ
ಬೇಕು ಬೇಡೆನ್ನೆನಯ್ಯಾ.
ಆ ನಿಮ್ಮ ಹಾರೆನು, ಮಾನವರ ಬೇಡೆನು.
ಆಣೆ ನಿಮ್ಮಾಣೆ, ಕೂಡಲಸಂಗಮದೇವಾ.
|
696.01 |
162 A162 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ನೀವಿರಿಸಿದ ಮನದಲ್ಲಿ ನಾನಂಜೆನಯ್ಯಾ,
ಮನವು ಮಹಾಘನಕ್ಕೆ ಶರಣುಗತಿವೊಕ್ಕುದಾಗಿ.
ನೀವಿರಿಸಿದ ಧನದಲ್ಲಿ ನಾನಂಜೆನಯ್ಯಾ,
ಧನವು ಸತಿಸುತಮಾತಾಪಿತರಿಗೆ ಸವೆಯದಾಗಿ.
ನೀವಿರಿಸಿದ ತನುವಿನಲ್ಲಿ ನಾನಂಜೆನಯ್ಯಾ,
ತನುವು ಸರ್ವಾರ್ಪಿತದಲ್ಲಿ ನಿಯತಪ್ರಸಾದಭೋಗಿಯಾಗಿ.
ಇದು ಕಾರಣ, ವೀರಧೀರಸಮಗ್ರನಾಗಿ
ನಿಮಗಾನಂಜೆ, ಕೂಡಲಸಂಗಮದೇವಾ. |
730.01 |
163 A163 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಹಲ್ಲು ಹತ್ತಿ ನಾಲಗೆ ಹೊರಳದಿದ್ದಲ್ಲಿ
ಮನವೆರಡಾದಡೆ ಆಣೆ, ನಿಮ್ಮಾಣೆ.
ಮಾಡುವ ನೇಮಕ್ಕೆ ಛಲವಿಲ್ಲದಿದ್ದಡೆ ಆಣೆ, ನಿಮ್ಮಾಣೆ.
ಕೂಡಲಸಂಗಮದೇವ ಎನ್ನ ಮನವ ನೋಡಲೆಂದಟ್ಟಿದಡೆ
ಪ್ರಸಾದವಲ್ಲದೆ ಕೊಂಡೆನಾದಡೆ ಆಣೆ, ನಿಮ್ಮಾಣೆ ! |
731.01 |
164 A164 |
ಬಸವಣ್ಣ | ಕೂಡಲಸಂಗಮದೇವ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಅರ್ಥವನರ್ಥವ ಮಾಡಿ ಕೋಳಾಹಳಂಗೆಯ್ಯುತ್ತಿರಲಿ,
ಹುಟ್ಟಿದ ಮಕ್ಕಳ ನವಖಂಡವ ಮಾಡಿ ಕಡಿವುತ್ತಿರಲಿ,
ಮುಟ್ಟುವ ಸ್ತ್ರೀಯ ಕಣ್ಣಮುಂದೆ
ಅಭಿಮಾನಂಗೊಂಡು ನೆರೆವುತ್ತಿರಲಿ,
ಇಂತೀ ತ್ರಿವಿಧವೂ ಹೊರಗಣವು.
ಇನ್ನೆನ್ನಂಗದ ಮೇಲೆ ಬರಲಿ, ಹಿಡಿಖಂಡವ ಕೊಯ್ಯಲಿ,
ಇಕ್ಕುವ ಶೂಲ ಪ್ರಾಪ್ತಿಸಲಿ,
ಹಾಕೊಂದೆಸೆ ಹನ್ನೊಂದೆಸೆಯಾಗಿ ಮಾಡುತ್ತಿರಲಿ.
ಮತ್ತೆಯೂ ಲಿಂಗಾರಾಧನೆಯ ಮಾಡುವೆ,
ಜಂಗಮಾರಾಧನೆಯ ಮಾಡುವೆ, ಪ್ರಸಾದಕ್ಕೆ ತಪ್ಪೆ.
ಇಂತಪ್ಪ ಭಾಷೆ ಕಿಂಚಿತ್ತು ಹುಸಿಯಾದಡೆ
ನೀನಂದೆ ಮೂಗ ಕೊಯಿ, ಕೂಡಲಸಂಗಮದೇವಾ. |
707.01 |
165 A165 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಜಾಗ್ರಸ್ವಪ್ನಸುಷುಪ್ತಿಯಲ್ಲಿ ಮತ್ತೊಂದ ನೆನೆದಡೆ ತಲೆದಂಡ, ತಲೆದಂಡ !
ಹುಸಿಯಾದಡೆ, ದೇವಾ ತಲೆದಂಡ, ತಲೆದಂಡ !
ಕೂಡಲಸಂಗಮದೇವಾ,
ನೀವಲ್ಲದೆ ಅನ್ಯವ ನೆನೆದಡೆ ತಲೆದಂಡ, ತಲೆದಂಡ !
|
694.01 |
166 A166 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಒಣಗಿಸಿ ಎನ್ನ ಘಣಘಣಲನೆ ಮಾಡಿದಡೆಯೂ,
ಹರಣವುಳ್ಳನ್ನಕ್ಕ ನಿಮ್ಮ ಚರಣದ ನೆನೆವುದ ಮಾಣೆ, ಮಾಣೆ.
ಶರಣೆಂಬುದ ಮಾಣೆ, ಮಾಣೆ.
ಕೂಡಲಸಂಗಮದೇವಯ್ಯಾ, ಎನ್ನ ಹೆಣನ ಮೇಲೆ
ಕಂಚಿಟ್ಟುಂಡಡೆಯೂ ಮಾಣೆ, ಮಾಣೆ. |
693.01 |
167 A167 |
ಬಸವಣ್ಣ | ಕೂಡಲಸಂಗಮದೇವ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಎನಿಸೆನಿಸೆಂದಡೆ ನಾ ಧೃತಿಗೆಡೆನಯ್ಯಾ.
ಎಲುದೋರಿದಡೆ, ನರ ಹರಿದಡೆ, ಕರುಳು ಕುಪ್ಪಳಿಸಿದಡೆ
ನಾ ಧೃತಿಗೆಡೆನಯ್ಯಾ.
ಶಿರಹರಿದು ಅಟ್ಟೆ ನೆಲಕ್ಕೆ ಬಿದ್ದಡೆ
ನಾಲಗೆ ಕೂಡಲಸಂಗಾ ಶರಣೆನುತ್ತಿದ್ದಿತ್ತಯ್ಯಾ |
692.01 |
168 A168 |
ಬಸವಣ್ಣ | ಕೂಡಲಸಂಗಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಅಮೃತಸಾಗರದೊಳಗಿರ್ದು ಆಕಳ ಚಿಂತೆ ಏಕೆ?
ಮೇರುಮಧ್ಯದೊಳಗಿರ್ದು ಜರಗ ತೊಳೆವ ಚಿಂತೆ ಏಕೆ?
ಗುರುವಿನೊಳಗಿರ್ದು ತತ್ವವಿದ್ಯೆಯ ಚಿಂತೆ ಏಕೆ?
ಪ್ರಸಾದದೊಳಗಿರ್ದು ಮುಕ್ತಿಯ ಚಿಂತೆ ಏಕೆ?
ಕರಸ್ಥಲದೊಳಗೆ ಲಿಂಗವಿರ್ದ ಬಳಿಕ,
ಮತ್ತಾವ ಚಿಂತೆ ಏಕೆ ಹೇಳಾ ಗುಹೇಶ್ವರಾ? |
103.02 |
169 A169 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಸುರರು ಕಿನ್ನರರು ಕಿಂಪುರುಷರೆಂಬವರನಾರು ಬಲ್ಲರು
ಎನ್ನ ಚಿತ್ತವು ನಿಮ್ಮ ಮೇಲೆ ಸಂಗಯ್ಯಾ,
ಎನ್ನ ಚಿತ್ತವು ನಿಮ್ಮ ಮೇಲೆ ಲಿಂಗಯ್ಯಾ.
ಕೂಡಲಸಂಗಮದೇವಾ
ಅನ್ಯವೆಂಬುದನರಿಯೆನಯ್ಯಾ |
496.01 |
170 A170 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 11 12 13 14 15 16 17 18 19 20 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 17 ಈ ಪುಟದಲ್ಲಿ ಪಲಿತಾಂಶಗಳು 161 ರಿಂದ 170 ವರೆಗೆ |
|
|