checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಮಚ್ಚು ಅಚ್ಚುಗವಾಗಿ ಒಪ್ಪಿದ ಪರಿಯ ನೋಡಾ.
ಎಚ್ಚಡೆ ಗರಿದೋರದಂತಿರಬೇಕು.
ಅಪ್ಪಿದಡೆ ಅಸ್ಥಿಗಳು ನಗ್ಗುನುಸಿಯಾಗಬೇಕು.
ಬೆಚ್ಚಡೆ ಬೆಸುಗೆಯರಿಯದಂತಿರಬೇಕು. ಮಚ್ಚು ಒಪ್ಪಿತ್ತು,
ಚೆನ್ನಮಲ್ಲಿಕಾರ್ಜುನನ ಸ್ನೇಹ ತಾಯೆ
320.05 181
A181
ಅಕ್ಕಮಹಾದೇವಿ ಚೆನ್ನಮಲ್ಲಿಕಾರ್ಜುನ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಎಲುವೊಡೆದು, ತನು ಕರಗಿ, ಮನವು ಝಜ್ಜರಂಬೋಗಿ,
ಲಿಂಗದಲ್ಲಿ ನೀರು ನೀರಾಗಿ ಬೆರೆಸಲಿಬೇಕು,
ಜಂಗಮದಲ್ಲಿ ವಾರಿಕಲ್ಲಾಗಿ ಕರಗಲಿಬೇಕು.
ಸರ್ವಾಂಗ ಪುಳಕಂಗಳೊಡೆದು ಕಡಲುಗಳಾಗಿ,
ನಿರ್ವಾಣ ನಿಜಪದವೆಂದಪ್ಪುದೋ ಉಳಿಯುಮೇಶ್ವರಾ?
1632.06 182
A182
ಉಳಿಯುಮೇಶ್ವರಚಿಕ್ಕಣ್ಣ ಉಳಿಯುಮೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಇಂಬಿನ ಚುಂಬನ ಅಮೃತಾಹಾರ, ಆಲಿಂಗನವೆ ಆಭರಣ,
ಸೋಂಕೆ ವಸ್ತ್ರ, ನೋಟವೆ ಕೂಟ,
ಒಡನಾಟವೆ ಅಷ್ಟಭೋಗವೆನಗೆ.
ಉರಿಲಿಂಗದೇವನ ಕೂಟವೆ ಪರಾಪರ ವಾಙ್ಮನಾತೀತ ಪರಮಸುಖ.
1226.06 183
A183
ಉರಿಲಿಂಗದೇವ ಉರಿಲಿಂಗದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಪಟ್ಟವ ಕಟ್ಟಿದ ಬಳಿಕ ಲಕ್ಷಣವನರಸುವರೆ
ಲಿಂಗದೇವನ ಪೂಜಿಸಿ ಕುಲವನರಸುವರೆ, ಅಯ್ಯಾ
ಕೂಡಲಸಂಗಮದೇವ
ಭಕ್ತಕಾಯ ಮಮಕಾಯವೆಂದನಾಗಿ
138.01 184
A184
ಬಸವಣ್ಣ ಕೂಡಲಸಂಗಮದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಭವಿತನಕ್ಕೆ ಹೇಸಿ ಭಕ್ತನಾದ ಬಳಿಕ
ಭವಿಯೊಡನೆ ಸಂಗವು ಭಂಗವೆಂದರಿಯರು.
ಭವಿಯೊಡನೆ ಸಂಗವ ಮಾಡುವರು
ಕೂಡಲಚೆನ್ನಸಂಗಯ್ಯ ಅವರತ್ತಲೂ ಅಲ್ಲ ಇತ್ತಲೂ ಅಲ್ಲ.
34.03 185
A185
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಶ್ರೀಗುರುಕರುಣಕಟಾಕ್ಷದಲ್ಲಿ ಉತ್ಪತ್ಯವಾದ ಅಜಾತಂಗೆ
ಜಾತಿಸೂತಕ, ಜನನಸೂತಕ, ಪ್ರೇತಸೂತಕ, ರಜಸ್ಸೂತಕವುಂಟೆಂಬವಂಗೆ
ಗುರುವಿಲ್ಲ, ಲಿಂಗವಿಲ್ಲ, ಜಂಗಮವಿಲ್ಲ, ಪ್ರಸಾದವಿಲ್ಲವಯ್ಯಾ
ಕೂಡಲಚೆನ್ನಸಂಗಯ್ಯ.
168.03 186
A186
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಪ್ಪುದೆ
ಗುರುಕಾರುಣ್ಯವ ಹಡೆದ ಭಕ್ತನು ಹಿಂದಣ ಪೂರ್ವಾಶ್ರಯವ ಬೆರಸಿದಡೆ,
ಗುರುದ್ರೋಹ ಲಿಂಗದ್ರೋಹ ಜಂಗಮದ್ರೋಹ
ಆಚಾರದ್ರೋಹ ಪ್ರಸಾದದ್ರೋಹ.
ಇಂತೀ ಪಂಚಮಹಾಪಾತಕಂಗಳು
ಭಕ್ತಂಗಲ್ಲದೆ ಭವಿಗೆಲ್ಲಿಯದೊ
ಗುರುವಿದು, ಲಿಂಗವಿದು, ಜಂಗಮವಿದು
ಆಚಾರವಿದು, ಪ್ರಸಾದವಿದೆಂದರಿಯದಿದ್ದಡೆ
ಕುಂಭಿಪಾತಕ ನಾಯಕನರಕ
ಕೂಡಲಸಂಗಮದೇವಾ.
768.01 187
A187
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಅಂಗದ ಮೇಲೆ ಲಿಂಗಧಾರಣವಾದ ಬಳಿಕ ಮರಳಿ ಭವಿ ನಂಟನೆಂದು
ಬೆರಸಿದರೆ
ಕೊಂಡ ಮಾರಿಂಗೆ ಹೋಹದು ತಪ್ಪದು.
ಹಸಿಯ ಮಣ್ಣಿನಲ್ಲಿ ಮಾಡಿದ ಮಡಕೆ ಅಗ್ನಿಮುಖದಿಂದಾದ ಬಳಿಕ
ಅದು ತನ್ನ ಪೂರ್ವಕುಲವ ಬೆರಸೂದೆ?
«ಅಗ್ನಿದಗ್ಧಘಟಃ ಪ್ರಾಹುರ್ನ ಭೂಯೋ ಮೃತ್ತಿಕಾಯತೇ
ತಚ್ಛಿವಾಚಾರಸಂಗೇನ ನ ಪುನರ್ಮಾನುಷೋ ಭವೇತ್»
ಇದು ಕಾರಣ ಪೂರ್ವ ನಾಸ್ತಿಯಾದ ಭಕ್ತನಪೂರ್ವ,
ಕೂಡಲಚೆನ್ನಸಂಗಮದೇವಾ.
169.03 188
A188
ಚೆನ್ನಬಸವಣ್ಣ ಕೂಡಲಚೆನ್ನಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಶ್ರೀಗುರುಸ್ವಾಮಿ ಶಿಷ್ಯನ ಪೂರ್ವಾಶ್ರಯಮಂ ಕಳೆದು
ಪುನರ್ಜಾತನಂ ಮಾಡಿದ ಬಳಿಕ,
ಪಂಚಭೂತಕಾಯವ ಕಳೆದು
ಪ್ರಸಾದಕಾಯವ ಮಾಡಿದ ಬಳಿಕ,
ವಾಯುಪ್ರಾಣಿಯ ಕಳೆದು
ಲಿಂಗಪ್ರಾಣಿಯ ಮಾಡಿದ ಬಳಿಕ,
ಎಲ್ಲಿಯ ಕುಲಸೂತಕ, ಎಲ್ಲಿಯ ಛಲಸೂತಕ,
ಎಲ್ಲಿಯ ತನುಸೂತಕ ಎಲ್ಲಿಯ ಮನಸೂತಕ
ಎಲ್ಲಿಯ ನೆನಹುಸೂತಕ ಎಲ್ಲಿಯ ಭಾವಸೂತಕ,
_ಇವನೆಂತೂ ಹಿಡಿಯಲಾಗದು, ಸದ್ಭಕ್ತನು.
ಕುಲಸೂತಕವುಳ್ಳನ್ನಕ್ಕರ ಭಕ್ತನಲ್ಲ
ಛಲಸೂತಕವುಳ್ಳನ್ನಕ್ಕರ ಮಹೇಶ್ವರನಲ್ಲ
ತನುಸೂತಕವುಳ್ಳನ್ನಕ್ಕರ ಪ್ರಸಾದಿಯಲ್ಲ
ಮನಸೂತಕವುಳ್ಳನ್ನಕ್ಕರ ಪ್ರಾಣಲಿಂಗಿಯಲ್ಲ
ನೆನಹುಸೂತಕವುಳ್ಳನ್ನಕ್ಕರ ಶರಣನಲ್ಲ
ಭಾವಸೂತಕವುಳ್ಳನ್ನಕ್ಕರ ಐಕ್ಯನಲ್ಲ
ಇಂತೀ ಸೂತಕವ ಮುಂದುಗೊಂಡಿಪ್ಪವರ
ಮುಖವ ನೋಡಲಾಗದು ಗುಹೇಶ್ವರ.
1549.02 189
A189
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಮಣ್ಣ ಮಡಕೆ ಮಣ್ಣಾಗದು ಕ್ರೀಯಳಿದು,
ಬೆಣ್ಣೆ ಕರಗಿ ತುಪ್ಪವಾಗಿ ಮರಳಿ ಬೆಣ್ಣೆಯಾಗದು ಕ್ರೀಯಳಿದು,
ಹೊನ್ನ ಕಬ್ಬುನವಾಗದು ಕ್ರೀಯಳಿದು,
ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಾಗದು ಕ್ರೀಯಳಿದು,
ಕೂಡಲಸಂಗನ ಶರಣನಾಗಿ
ಮರಳಿ ಮಾನವನಾಗ ಕ್ರೀಯಳಿದು.
870.01 190
A190
ಬಸವಣ್ಣ ಕೂಡಲಸಂಗ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಲಿಂಗಲೀಲಾವಿಲಾಸ ಚಾರಿತ್ರ 39613

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  « ಹಿಂದಿನ 1011121314151617181920ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 19 ಈ ಪುಟದಲ್ಲಿ ಪಲಿತಾಂಶಗಳು 181 ರಿಂದ 190 ವರೆಗೆ