ವಚನ ಆಕರಗಳು (15ನೆ ಶತಮಾನ)
ಒಡೆಯರ ಸಹಪಙ್ಞ್ತಯಲ್ಲಿ ಪರಿಯಾಣ
ಅಡ್ಡಣಿಗೆಯನಿರಿಸಿಕೊಂಡು ಉಂಬ ಸಮಗ್ರಾಹಕನಲ್ಲ.
ನಿಮ್ಮ ಶರಣರ ಪಾದೋದಕಕ್ಕಲ್ಲದೆ ಕೈಯಾನೆ.
ನಿಮ್ಮ ಶರಣರ ಪ್ರಸಾದಕ್ಕಲ್ಲದೆ ಬಾಯ್ದೆರೆಯೆ.
ನಿಮ್ಮ ಲಾಂಛನಧಾರಿಯ ಮನೆಯ ಪ್ರತಿಭೃತ್ಯನಾಗಿರಿಸಯ್ಯಾ ನೀನೆನ್ನ
ರೇಕಣ್ಣಪ್ರಿಯ ನಾಗಿನಾಥಾ.
|
144.08 |
241 A241 |
ಬಹುರೂಪಿಚೌಡಯ್ಯ | ರೇಕಣ್ಣಪ್ರಿಯ ನಾಗಿನಾಥಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ದಾಸಿಯ ವರ್ಗದಲ್ಲಿಪ್ಪೆನು ಶಿವಶರಣರ ಮನೆಯಲ್ಲಿ.
ಅವರೊಕ್ಕುದನುಂಡು, ಮಿಕ್ಕುದ ಕಾಯ್ದುಕೊಂಡಿಪ್ಪ ಕಾರಣ
ಕಾಲ ಮುಟ್ಟಲಮ್ಮನು, ಕಲ್ಪಿತ ತೊಡೆುತ್ತು.
ಭವಬಂಧನ ಹಿಂಗಿತ್ತು, ಕರ್ಮ ನಿರ್ಮಳವಾಗಿತ್ತು.
ಅವರ ತೊತ್ತಿನ ತೊತ್ತಿನ ಪಡಿದೊತ್ತಿನ ಮಗನೆಂದು
ಕೂಡಲಸಂಗಮದೇವನು `ಇತ್ತ ಬಾ ಎಂದು ಎತ್ತಿಕೊಂಡನು. |
473.01 |
242 A242 |
ಬಸವಣ್ಣ | ಕೂಡಲಸಂಗಮದೇವ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಗುರುಪ್ರಸಾದವ ಕೊಂಬರೆ, ನಾಚುವದು ಮನ.
ಲಿಂಗಪ್ರಸದಾವ ಕೊಂಬರೆ, ನಾಚುವದು ಮನ.
ಜಂಗಮಪ್ರಸಾದವ ಕೊಂಬರೆ, ನಾಚುವದು ಮನ.
ಸಮಯಪ್ರಸಾದವ ಕೊಂಬರೆ, ನಾಚುವದು ಮನ.
ಸೂಳೆಯ ಬೊಜಗನ ಎಂಜಲ ತಿಂಬರೆ, ನಾಚದು ಮನ.
ಮಹಂತ ಸಕಳೇಶ್ವರಯ್ಯನು ಮೂಗ ಕೊಯ್ಯದೆ
ಮಾಣನು. |
420.09 |
243 A243 |
ಸಕಳೇಶಮಾದರಸ | ಸಕಳೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಲಿಂಗಪ್ರಸಾದಿಗಳಲ್ಲದವರ ಸಂಗ
ಭಂಗವೆಂದುದು ಗುರುವಚನ.
ಲಿಂಗಪ್ರಸಾದಿಗಳಲ್ಲದವರ ಸಂಗಗ
ಪಂಚಮಹಾಪಾತಕವೆಂದುದು ಲಿಂಗವಚನ.
ಆಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ
ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ
ಇಂತೆಂದುದಾಗಿ ಕೂಡಲಸಂಗಮದೇವಾ,
ನಿಮ್ಮ ಶರಣರಿಗೆ ಶರಣೆಂದು ಶುದ್ಧನಯ್ಯಾ. |
782.01 |
245 A245 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಒಡಲುಗೊಂಡು ಹುಟ್ಟಿದ ಘಟ್ಟಕ್ಕೆ ಅಷ್ಟೋತ್ತರಶತವ್ಯಾಧಿ.
ಅದಕ್ಕೆ ನಾನಾ ಔಷಧಿಯ ತಂದು ಹೊರೆವರು,
ಆ ಪರಿಯ ನಾನದ ಹೊರಿಯೆನು.
ಅದೇನು ಕಾರಣವೆಂದೆಡೆ :
ಭವರೋಗವೈದ್ಯ, ಭವಹರನೆಂಬ ಬಿರಿದು ನಿಮ್ಮದಾಗಿ.
ಇದು ಕಾರಣ ಕೂಡಲಸಂಗಮದೇವಾ,
ನಿಮ್ಮ ಪುರಾತನರ ಪ್ರಸಾದವಲ್ಲದೆ ಕೊಂಡಡೆ ನಿಮ್ಮಾಣೆ. |
1110.01 |
246 A246 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಸಯದಾನವ ತಂದು ನೀಡುವೆನಲ್ಲದೆ
ಸಂಬಂಧಿ ನಾನಲ್ಲಯ್ಯಾ.
ಕರ್ತಂಗೆ ಭೃತ್ಯಾಚಾರವ ಮಾಡಿ
ಒಕ್ಕುದ ಕೊಂಡಿಪ್ಪೆನಯ್ಯಾ.
ಭೋಗಾದಿಭೋಗವ ಸಮವಾಗಿ ಭೋಗಿಸಲು
ಅಘೋರನರಕದಲ್ಲಿಕ್ಕುವ ಕೂಡಲಸಂಗಮದೇವ. |
783.01 |
247 A247 |
ಬಸವಣ್ಣ | ಕೂಡಲಸಂಗಮದೇವ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಬಿಡದೆ ಬಾಗಿಲ ಎಂಜಲ ಕಾದುಪ್ಪೆನು, ಕಿಂಕರನು.
ಕಿಂಕರರ ಮನೆಯಲ್ಲಿ ಕಿಂಕಿಲವನು ಆನು ಹಾರುತ್ತಿಪ್ಪೆನು,
ನಮ್ಮ ಕೂಡಲಸಂಗನ ಶರಣರ
ಒಕ್ಕುದ ಮಿಕ್ಕುದನುಂಬ ಕಿಂಕರ ನಾನು |
466.01 |
248 A248 |
ಬಸವಣ್ಣ | ಕೂಡಲಸಂಗ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಭವಭವದಲ್ಲಿ ನಿಮ್ಮ ಜಂಗಮವೆ ಶರಣಯ್ಯಾ.
ಅವರುಂಡು ಮಿಕ್ಕುದ ಉಡುಗಿ,
ಒಕ್ಕಪ್ರಸಾದವನಾಯ್ದುಕೊಂಬ ಮರುಳ ನಾನಯ್ಯಾ.
ನಮ್ಮ ಕೂಡಲಸಂಗನ ಶರಣರ ರಿಣವ ನಾ ಹಿಂಗಲಾರೆ |
472.01 |
249 A249 |
ಬಸವಣ್ಣ | ಕೂಡಲಸಂಗ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಕಿವಿಯ ಸೂತಕ ಹೋಯಿತ್ತು, ಸದ್ಗುರುವಿನ ವಚನದಿಂದ,
ಕಂಗಳ ಸೂತಕ ಹೋಯಿತ್ತು, ಸದ್ಭಕ್ತರ ಕಂಡೆನಾಗಿ.
ಕಾಯದ ಸೂತಕ ಹೋಯಿತ್ತು, ನಿಮ್ಮ ಚರಣವ ಮುಟ್ಟಿದೆನಾಗಿ.
ಬಾಯ ಸೂತಕ ಹೋಯಿತ್ತು. ನಿಮ್ಮ ಒಕ್ಕುದ ಕೊಂಡೆನಾಗಿ.
ನಾನಾ ಸೂತಕ ಹೋಯಿತ್ತು, ನಿಮ್ಮ ಶರಣರ ಅನುಭಾವಿಯಾಗಿ.
ಕೂಡಲಸಂಗಮದೇವಾ ಕೇಳಯ್ಯಾ
ಎನ್ನ ಮನದ ಸೂತಕ ಹೋಯಿತ್ತು, ನೀವಲ್ಲದಿಲ್ಲೆಂದರಿದೆನಾಗಿ. |
781.01 |
250 A250 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 21 22 23 24 25 26 27 28 29 30 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 25 ಈ ಪುಟದಲ್ಲಿ ಪಲಿತಾಂಶಗಳು 241 ರಿಂದ 250 ವರೆಗೆ |
|
|