ವಚನ ಆಕರಗಳು (15ನೆ ಶತಮಾನ)
ಪರಮಾತ್ಮನ ಪ್ರತಿಲಹರಿಯಿಂದ ಅಂತರಾತ್ಮನುತ್ಪತ್ಯ.
ಅಂತರಾತ್ಮನ ಪ್ರತಿಲಹರಿಯಿಂದ ಜೀವಾತ್ಮನುತ್ಪತ್ತ.
ಅಂತಪ್ಪ ಜೀವಾಂತರಾತ್ಮಾದಿಗಳು ಅಂಗ ಪ್ರಾಣವಾದಲ್ಲಿಒಂದೆಯೆನಿಸಿದರು.
ಆ ಒಂದೆಯೆಂಬ ತಾಮಸ ಜೀವನು
ಅಂಗನೆಯರ ಸಂಗ ಮೊದಲಾದ ನಾನಾ ದುಃಖಗಳಲ್ಲಿ ನೋವುತ್ತ,
ನಾನಾಯೋನಿಗಳಲ್ಲಿ ಜನಿಸುತ್ತ,
ರೌರವ ನರಕ ಆಳುತ್ತಮುಳುಗುತ್ತಲಿಹನು.
ಆ ಪರಮಾತ್ಮನು ಜೀವಾತ್ಮನ ಶಿರೋಮಧ್ಯದಲ್ಲಿರ್ದು
ನಾಹಂಎನ್ನದೆಸೋಹಂಎನ್ನುತ್ತ
ಸಿಮ್ಮಲಿಗೆಯ ಚನ್ನರಾಮನೆಂಬ ಅಖಂಡ ಲಿಂಗದೊಳಗೆ ನಿತ್ಯತ್ವವನೆಯ್ದಿ
ಎಡೆಬಿಡುವಿಲ್ಲದೆ ಪರಮಸಂತೋಷದೊಳಿದ್ದಿತ್ತು.
|
646.07 |
311 B46 |
ಚಂದಿಮರಸ | ಸಿಮ್ಮಲಿಗೆಯ ಚನ್ನರಾಮ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 57‖03
|
ಜಗತ್ತೆಂಬ ಯಂತ್ರದ ಹಾಹೆ ಹೇಂಗೆಂದರಿಯಲು
ಅಜ್ಞಾನವೆಂಬ ತುಷದ ಚೋಹವ ತೊಡಿಸಿ,
ಅಹಂ ಮಮತೆಯೆಂಬ ಸೊಕ್ಕನಿಕ್ಕಿ, ಬಾರದ ಭವದ ಬಟ್ಟೆಯಲ್ಲಿ ಬರಿಸಿ,
ಕಾಣದ ಕರ್ಮ ದುಃಖವ ಕಾಣಿಸಿ, ಉಣ್ಣದ ಅಪೇಯವನುಣಿಸಿ,
ಮಾರಾರಿ ವಿನೋದಿಸಿದೆಯಯ್ಯಾ, ಕೂಡಲಸಂಗಮದೇವಾ. |
1193.01 |
312 B47 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 58‖04
|
ನುವಿಕಾರ, ಮನವಿಕಾರ, ಜನನಮರಣಸ್ಥಿತಿ ಕಾರಣ,
ಹೊನ್ನ ತೋರಿದೆ, ಜಗದ ಕಣ್ಣ ಮೊದಲಿಗೆ.
ಹೆಣ್ಣ ಸುಳಿಸಿದೆ, ಜಗದ ಕಣ್ಣ ಮೊದಲಿಗೆ.
ಮಣ್ಣ ಹರಹಿದೆ, ಜಗದ ಕಣ್ಣ ಮೊದಲಿಗೆ.
ತನುವ ತಪ್ಪಿಸಿ, ಜಗವ ಸಂಸಾರಕ್ಕೊಪ್ಪಿಸಿ,
ನುಣ್ಣನೆ ಹೋದನುಪಾಯದಿ ದೇವರಾಯಸೊಡ್ಡಳ.
|
765.09 |
313 B48 |
ಸೊಡ್ಡಳ ಬಾಚರಸ | ಸೊಡ್ಡಳ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 58‖05
|
ವಾರಿ ಬಲಿದು ವಾರಿಕಲ್ಲಾದಂತೆ ಶೂನ್ಯವೆ ಸ್ವಯಂಭುವಾಯಿತ್ತು.
ಆ ಸ್ವಯಂಭುಲಿಂಗದಿಂದಾಯಿತ್ತು ಮೂರ್ತಿವತ್ತು,
ಆ ಮೂರ್ತಿಯಿಂದಾಯಿತ್ತು ವಿಶ್ವೋತ್ಪತ್ತಿ,
ಆ ವಿಶ್ವೋತ್ಪತ್ತಿಯಿಂದಾಯಿತ್ತು ಸಂಸಾರ,
ಆ ಸಂಸಾರದಿಂದಾಯಿತ್ತು ಮರವೆ.
ಆ ಮರವೆಯೆಂಬ ಮಹಾಮಾಯೆ ವಿಶ್ವವ ಮುಸುಕಿದಲ್ಲಿ
ನಾ ಬಲ್ಲೆ, ಬಲ್ಲಿದರೆಂಬ ಅರುಹಿರಿಯರೆಲ್ಲಾ
ತಾಮಸಕ್ಕೊಳಗಾಗಿ ಮೀನಕೇತನನ ಬಲೆಗೆ ಸಿಲುಕಿ
ಮಾಯೆಯ ಬಾಯ ತುತ್ತಾದರಲ್ಲಾ ! ಗುಹೇಶ್ವರಾ.
|
1524.02 |
314 B49 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 58‖06
|
ಕೃತಯುಗದಲ್ಲಿ ನಾನು ಭಕ್ತಿ ಕಾರಣ
ಸ್ಥೂಲಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ.
ತ್ರೇತಾಯುಗದಲ್ಲಿ ನಾನು ಭಕ್ತಿ ಕಾರಣ
ಶೂನ್ಯಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ.
ದ್ವಾಪರದಲ್ಲಿ ನಾನು ಭಕ್ತಿ ಕಾರಣ
ಅನಿಮಿಷನೆಂಬ ಗಣೇಶ್ವರನಾಗಿರ್ದೆನಯ್ಯಾ.
ಕಲಿಯುಗದಲ್ಲಿ ನಾನು ಭಕ್ತಿ ಕಾರಣ
ಅಲ್ಲಮಪ್ರಭುವೆಂಬ ಗಣೇಶ್ವರ (ಜಂಗಮ?)ನಾಗಿರ್ದೆ
ಕಾಣಾ ಗುಹೇಶ್ವರಾ. |
1130.02 |
316 C4 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 6
|
ಹಳ್ಳದೊಳಗೊಂದು ಹುಳ್ಳಿ ಬರುತ್ತಿರಲು, ನೊರೆ ತೆರೆಗಳು ತಾಗಿದುವಲ್ಲಾ !
ಸಂಸಾರವೆಂಬ ಸಾಗರದೊಳಗೆ ಸುಖದುಃಖಗಳು ತಾಗಿದವಲ್ಲಾ !
ಇದಕ್ಕಿದು ಮೂರ್ತಿಯಾದ ಕಾರಣ ಪ್ರಳಯವಾಯಿತ್ತು ಗುಹೇಶ್ವರಾ. |
47.02 |
317 C6 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 8
|
ಆಯಿತ್ತೆ ಉದಯಮಾನ, ಹೋಯಿತ್ತೆ ಅಸ್ತಮಾನ.
ಅಳಿದವಲ್ಲಾ ನೀರಲಾದ ನಿರ್ಮಿತಂಗಳೆಲ್ಲವು !
ಕತ್ತಲೆಗವಿಯಿತ್ತು ಮೂರು ಲೋಕದೊಳಗೆ.
ಇದರಚ್ಚುಗವೇನು ಹೇಳಾ ಗುಹೇಶ್ವರಾ?
|
41.02 |
318 C7 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 9
|
ಸಂಸಾರವೆಂಬ ಹೆಣ ಬಿದ್ದಿದ್ದಡೆ, ತಿನಬಂದ ನಾಯ ಜಗಳವ ನೋಡಿರೆ !
ನಾಯ ಜಗಳವ ನೋಡಿ ಹೆಣ[ನೆದ್ದು] ನಗುತ್ತಿದೆ.
ಗುಹೇಶ್ವರನೆಂಬ ಲಿಂಗವಲ್ಲಿಲ್ಲ ಕಾಣಿರೆ. |
46.02 |
319 C8 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 10
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 31 32 33 34 35 36 37 38 39 40 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 32 ಈ ಪುಟದಲ್ಲಿ ಪಲಿತಾಂಶಗಳು 311 ರಿಂದ 320 ವರೆಗೆ |
|
|