checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಊರ ಮಧ್ಯದ ಕಣ್ಣ ಕಾಡಿನೊಳಗೆ, ಬಿದ್ದೈದಾವೆ ಐದು ಹೆಣನು.
ಬಂದು ಬಂದು ಅಳುವರು.
ಬಳಗ ಘನವಾದ ಕಾರಣ ಹೆಣನೂ ಬೇಯದು ಕಾಡೂ ನಂದದು.
ಮಾಡ ಉರಿಯಿತ್ತು ಗುಹೇಶ್ವರಾ.
26.02 331
C20
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 22
ಕೆಂಡದ ಗಿರಿಯ ಮೇಲೊಂದು, ಅರಗಿನ ಕಂಬವಿದ್ದಿತ್ತು ನೋಡಯ್ಯಾ.
ಅರಗಿನ ಕಂಬದ ಮೇಲೆ ಹಂಸೆಯಿದ್ದಿತ್ತು.
ಕಂಭ ಬೆಂದಿತ್ತು ಹಂಸೆ ಹಾರಿತ್ತು ಗುಹೇಶ್ವರಾ
605.02 332
C21
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 23
ಭೂತ ಭೂತವ ಕೂಡಿ ಅದ್ಭುತವಾಯಿತ್ತು,
ಕಿಚ್ಚು ಕೋಡಿತ್ತು, [ನೀರು] ನೀರಡಿಸಿತ್ತು_ಅದ್ಭುತವಾಯಿತ್ತು !
ಉರಿ, ಪವನದೋಷದೊಳಡಗಿರ್ದು
ವಾಯುವಿಮ್ಮಡಿಸಿತ್ತ ಕಂಡೆ, ಗುಹೇಶ್ವರಾ.
32.02 333
C22
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 24
ಅಂಗದ ಕೊನೆಯ ಮೇಲಣ ಕೋಡಗ ಕೊಂಬಿಗೆ ಹಾರಿತ್ತು,
ಅಯ್ಯಾ ಇದು ಸೋಜಿಗ !
ಕಯ್ಯ ನೀಡಲು ಮೈಯೆಲ್ಲವನು ನುಂಗಿತ್ತು
ಒಯ್ಯನೆ ಕರೆದಡೆ ಮುಂದೆ ನಿಂತಿತ್ತು
ಮುಯ್ಯಾಂತಡೆ ಬಯಲಾಯಿತ್ತು_ಗುಹೇಶ್ವರಾ
31.02 334
C23
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 25
ಹಿರಿದಪ್ಪ ಜಲಧಿಯ ಮಡುವಿನೊಳಗೆ,
ಕರಿಯ ಕಬ್ಬಿಲ ಜಾಲವ ಬೀಸಿದ ನೋಡಯ್ಯಾ.
ಅರಿದ ತಲೆ ಐದು, ಅರಿಯದ ತಲೆ ಐದು, ಕರಿಯ ತಲೆ ಐದು,
ಮುಂದೈದಾವೆ ನೋಡಯ್ಯಾ.
ಕರಿಯ ಕಬ್ಬಿಲ ಜಾಲವ ಹೊತ್ತುಕೊಂಡು ಹೋದಡೆ
ನೇತ್ರದಲೋಕುಳಿಯಾಡಿತ್ತ ಕಂಡೆನು ಗುಹೇಶ್ವರಾ.
37.02 335
C24
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 26
ಭೂಮಿಯ ಕಠಣವನು, ಆಕಾಶದ ಮೃದುವನು; ತಿಳಿವ ಗಮನ
ಅಲ್ಲಿಯೇ ನಿಂದಿತ್ತು.
ಉದಕದೊಳಗೆ ಹುಟ್ಟಿದ ತೃಷ್ಣೆ ಉದಕವನರಸಿತ್ತಲ್ಲಾ!
ಒಳಗೆ ಸತ್ತು ಹೊರಗೆ ಆಡುತ್ತದೆ !
ಗುಹೇಶ್ವರ ಬೆರಗಾಗಿ ಅಲ್ಲಿಯೇ ನಿಂದನು.
19.02 336
C25
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 27
ಹುಲಿಯ ತಲೆಯ ಹುಲ್ಲೆ, ಹುಲ್ಲೆಯ ತಲೆಯ ಹುಲಿ
ಈ ಎರಡರ ನಡು ಒಂದಾಯಿತ್ತು ! ಹುಲಿಯಲ್ಲ ಹುಲ್ಲೆಯಲ್ಲ.
ಕೆಲದಲೊಂದು ಬಂದು ಮೆಲುಕಾಡಿತ್ತು ನೋಡಾ.
ತಲೆಯಿಲ್ಲದ ಮುಂಡ ತರಗೆಲೆಯ ಮೆದ್ದಡೆ,
ಎಲೆ ಮರೆಯಾಯಿತ್ತು ಕಾಣಾ, ಗುಹೇಶ್ವರಾ.
39.02 337
C26
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 28
ಅರಗಿನ ಪುತ್ಥಳಿಯನುರಿ ಕೊಂಡಡೆ, ಉದಕ ಬಾಯಾರಿ ಬಳಲುತ್ತಿದೆ
[ಅಗೆಯಿಂ ಭೋ ಬಾವಿಯನಗೆಯಿಂ ಭೋ]
ಬಾವಿಯನಗೆದಾತ ಸತ್ತ, ಬಾವಿ ಬತ್ತಿತ್ತು ಇದು ಕಾರಣ,
ಮೂರು ಲೋಕವು ಬರುಸೂರೆವೋಯಿತ್ತು ಗುಹೇಶ್ವರಾ.
30.02 338
C27
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 29
ಇಲ್ಲದಲ್ಲಿ ಇಲ್ಲವಿದ್ದಿತ್ತು.
ಇಲ್ಲವೆಂಬುದು ಉಂಟು ನೋಡಾ.
ಉಂಟೆಂದಲ್ಲಿ `ಇಲ್ಲ' ಉಂಟಾಯಿತ್ತು.
ಉಂಟೆಂದು ತಿಳಿದಡೆ ಅದೆ `ಇಲ್ಲ'.
ಆ `ಇಲ್ಲ'ದಲ್ಲಿ ಒಂದು ತಲೆ ಉದಿಸಿತ್ತು.
ಆ ತಲೆಯೊಳಗೆ ಮೂರು ಲಿಪಿಯ ಕಂಡೆ.
ಲಿಪಿಯೊಳಗೊಂದು ಧ್ವನಿಯ ಕಂಡೆ.
ಧ್ವನಿಯ ಬಣ್ಣ ತಲೆಯೆತ್ತದ ಮುನ್ನ,
ಐದು ಬಾಯ ರಕ್ಕಸಿ ಆಗುಳಿಸಿ ನುಂಗಿದಳು.
ಆ ರಕ್ಕಸಿಗೆ ಕೋಡಗ ಹುಟ್ಟಿ, ಕೋಣನ ಕೊರಳ ಕಚ್ಚಿತ್ತ ಕಂಡೆ.
ಕೋಣನ ಕೋಡಗ ಮುರಿದು ಈಡಾಡಿದಡೆ ಕೋಡಗ ಸಿಕ್ಕಿತ್ತು.
ಅಡವಿಯ ಸುಟ್ಟು ಆಕಾಶವ ಹೊಕ್ಕು
ಗುಹೇಶ್ವರಲಿಂಗದಲ್ಲಿ ಗುರುಕಾರುಣ್ಯವ ಪಡೆದನು
937.02 339
C28
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 30
ಇವಳ (ಅವಳ?) ನೋಟವೆನ್ನ ಮತ್ರ್ಯಕ್ಕೆ ತಂದಿತ್ತಯ್ಯಾ.
ಇವಳ ಕೂಟ ಸವಿಯನವಗಡಿಸಿ ಕಾಡಿತ್ತಯ್ಯಾ.
ಇವಳ ಬೇಟದ ಬೇರ ಹರಿದಲ್ಲಿ
ತ್ರಿಪುರ ಹಾಳಾದುದ ಕಂಡೆನು.
ಉರಿಯ ಮೇಲೆ ಉರಿ ಎರಗಿದಡೆ
ತಂಪು ಮೂಡಿತ್ತ ಕಂಡೆನು.
ಕರಿಯ ಬೇಡನ ಕಸ್ತುರಿಯ ಮೃಗ ನುಂಗಿದಡೆ
ಹಿರಿಯ ಹೆಂಡತಿ ಓಲೆಗಳೆದುದ ಕಂಡೆನು.
ಕಾರಿರುಳ ಕೋಟೆಯಲಿ ಕಲಿಯ ಕಾಳೆಗವ ಗೆಲಿದು
ಹೂಳಿರ್ದ ನಿಧಾನವ ಕಂಡೆನು ಕಾಣಾ ಗುಹೇಶ್ವರಾ.
940.02 340
C29
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 31

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  « ಹಿಂದಿನ 1031323334353637383940ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 34 ಈ ಪುಟದಲ್ಲಿ ಪಲಿತಾಂಶಗಳು 331 ರಿಂದ 340 ವರೆಗೆ