checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಹಿತವಿದೆ ಸಕಲಲೋಕದ ಜನಕ್ಕೆ,
ಮತವಿದೆ ಶ್ರುತಿಪುರಾಣಾಗಮದ,
ಗತಿಯಿದೆ, ಭಕುತಿಯ ಬೆಳಗಿನುನ್ನತಿಯಿದೆ.
ಶ್ರೀ ವಿಭೂತಿಯ ಧರಿಸಿದಡೆ ಭವವ ಪರಿವುದು
ದುರಿತಸಂಕುಳವನೊರಸುವುದು
ಹರನ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯದಲ್ಲಿರಿಸುವುದು.
ನಿರುತವಿದು ನಂಬು ಮನುಜಾ,
ಜನನಭೀತಿ ಈ ವಿಭೂತಿ.
ಮರಣಭಯದಿಂದ ಅಗಸ್ತ್ಯ ಕಾಶ್ಯಪ ಜಮದಗ್ನಿಗಳು
ಧರಿಸಿದರಂದು ನೋಡಾ. ಶ್ರೀಶೈಲ ಚೆನ್ನಮಲ್ಲಿಕಾರ್ಜುನನ ಒಲಿವ ವಿಭೂತಿ.
424.05 51
A51
ಅಕ್ಕಮಹಾದೇವಿ ಚೆನ್ನಮಲ್ಲಿಕಾರ್ಜುನ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಮುನ್ನ ಮಾಡಿದ ಪಾಪವೆಂತು ಹೋಹುದೆಂದು ಚಿಂತಿಸಬೇಡ.
ಕಹಿ ಸೋರೆಯ ಕಾಯ ತಂದು ವಿಭೂತಿಯ ತುಂಬಿದಡೆ
ಸಿಹಿಯಾಗದೆ ಮೂರು ದಿವಸಕ್ಕಯ್ಯಾ
ಹಲವು ಕಾಲ ಕೊಂದ ಸೂನೆಗಾರನ ಕತ್ತಿಯಾದಡೇನು
ಪರುಷ ಮುಟ್ಟಲಿಕೆ ಹೊನ್ನಾಗದೆ ಅಯ್ಯಾ
ಲಲಾಟದಲ್ಲಿ ವಿಭೂತಿ ಬರೆಯಲಿಕೆ ಪಾಪ ಪಲ್ಲಟವಾಗದೆ
ಕೂಡಲಸಂಗಮದೇವಾ
73.01 52
A52
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಒಪ್ಪುವ ವಿಭೂತಿಯ ನೊಸಲಲ್ಲಿ ಧರಿಸಿ, ದೃಷ್ಟಿವಾ[ರಿ] ನಿಮ್ಮನೋಡಲೊಡನೆ ಬೆಟ್ಟದಷ್ಟು ತಪ್ಪುಳ್ಳಡೆಯೂ ಮುಟ್ಟಲಮ್ಮವು ನೋಡಾ. ದುರಿತ ಅನ್ಯಾಯವ ಪರಿಹರಿಸಬಲ್ಲಡೆ 'ಓಂ ನಮಃ ಶಿವಾಯ' ಶರಣೆಂಬುದೆ ಮಂತ್ರ. ಅದೆಂತೆಂದಡೆ 'ನಮಃ ಶಿವಾಯೇತಿ ಮಂತ್ರಂ ಯಃ ಕರೋತಿ ತ್ರಿಪುಂಡ್ರಕಂ ಸಪ್ತಜನ್ಮಕೃತಂ ಪಾಪಂ ತತ್‍ಕ್ಷಣಾದೇವ ನಶ್ಯತ್ಬಿ' ಇಂತೆಂದುದಾಗಿ, ಸಿಂಹದ ಮರಿಯ ಸೀಳ್ನಾಯಿ ತಿಂಬಡೆ ಭಂಗವಿನ್ನಾರದೊ ಚೆನ್ನಮಲ್ಲಿಕಾರ್ಜುನಾ ? 126.05 53
A53
ಅಕ್ಕಮಹಾದೇವಿ ಚೆನ್ನಮಲ್ಲಿಕಾರ್ಜುನ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ನೀರಿಂಗೆ ನೈದಿಲೆಯೆ ಶೃಂಗಾರ,
ಸಮುದ್ರಕ್ಕೆ ತೆರೆಯೆ ಶೃಂಗಾರ,
ನಾರಿಗೆ ಗುಣವೆ ಶೃಂಗಾರ,
ಗಗನಕ್ಕೆ ಚಂದ್ರಮನೆ ಶೃಂಗಾರ,
ನಮ್ಮ ಕೂಡಲಸಂಗನ ಶರಣರಿಗೆ
ನೊಸಲ ವಿಭೂತಿಯೆ ಶೃಂಗಾರ
74.01 54
A54
ಬಸವಣ್ಣ ಕೂಡಲಸಂಗಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಅಡ್ಡ ವಿಭೂತಿಯಿಲ್ಲದವರ ಮುಖಹೊಲ್ಲ, ನೋಡಲಾಗದು.
ಲಿಂಗದೇವನಿಲ್ಲದಠಾವು ನರವಿಂಧ್ಯ, ಹೊಗಲಾಗದು.
ದೇವಭಕ್ತರಿಲ್ಲದೂರು ಸಿನೆ ಹಾಳು,
ಕೂಡಲಸಂಗಮದೇವಾ.
87.01 55
A55
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಸನ್ಯಾಸಿಯಾದಡೂ ತ್ರಿಸಂಧ್ಯಾಕಾಲದಲ್ಲಿ
ಶ್ರೀವಿಭೂತಿಯ ಧರಿಸಬೇಕೆಂದುದು ವೇದ.
ಬಳಿಕಲೊಂದು ದಿವ್ಯಸ್ಥಾನದೊಳಗೆ ಶಿವಧ್ಯಾನದಲಿರಬೇಕೆಂದುದು ವೇದ.
ಅದೆಂತೆಂದಡೆ :
ಯತೀನಾಂ ಭಸ್ಮಂ ತ್ರಿಸಂಧ್ಯಾಯಾಮುದ್ಧೂಲಯೇತ್
ದಿವ್ಯಸ್ಥಾನೇ ಶಿವಂ ಧ್ಯಾಯೇತ್

ಎಂದುದಾಗಿ, ಬಸವಪ್ರಿಯ ಕೂಡಲಚೆನ್ನಸಂಗಯ್ಯಾ
ಶ್ರೀವಿಭೂತಿಯೆ ಪರಮಗತಿ ಸಾಧನ.
360.09 56
A56
ಸಂಗಮೇಶ್ವರದಅಪ್ಪಣ್ಣ ಬಸವಪ್ರಿಯ ಕೂಡಲಚೆನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಶ್ರೀವಿಭೂತಿಯ ಹೂಸದವರ,
ಶ್ರೀರುದ್ರಾಕ್ಷಿಯ ಧರಿಸದವರ,
ನಿತ್ಯಲಿಂಗಾರ್ಚನೆಯ ಮಾಡದವರ,
ಜಂಗಮವೇ ಲಿಂಗವೆಂದರಿಯದವರ,
ಸದ್ಭಕ್ತರ ಸಂಗದಲ್ಲಿರದವರ ತೋರದಿರು.
ಕೂಡಲಸಂಗಮದೇವಾ, ಸೆರಗೊಡ್ಡಿ ಬೇಡುವೆನು
455.01 57
A57
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಶ್ರೀವಿಭೂತಿ ರುದ್ರಾಕ್ಷಿಯಿದ್ದವರ ಲಿಂಗವೆಂಬೆ,
ಇಲ್ಲದವರ ಭವಿಯೆಂಬೆ.ಕೂಡಲಸಂಗಮದೇವಾ,
ಸದುಭಕ್ತರ ನೀನೆಂಬೆ.
452.01 58
A58
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಅಡ್ಡ ತ್ರಿಪುಂಡ್ರದ, ಮಣಿಮಕುಟವೇಷದ
ಶರಣರ ಕಂಡಡೆ ನಂಬುವುದೆನ್ನ ಮನವು,
ನಚ್ಚುವುದೆನ್ನ ಮನವು, ಸಂದೇಹವಿಲ್ಲದೆ.
ಇವಿಲ್ಲದವರ ಕಂಡಡೆ ನಂಬೆ ಕೂಡಲಸಂಗಮದೇವಾ
88.01 59
A59
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಸದ್ಯೋಜಾತ ವಾಮದೇವ ತತ್ಪುರುಷ ಅಘೋರ ಈಶಾನ್ಯವೆಂಬ
ಪಂಚಬ್ರಹ್ಮವೇ ಮೊದಲಾದ ಪಂಚಮುಖದ ರುದ್ರಾಕ್ಷಿ.
ಆ ರುದ್ರಾಕ್ಷಿಯ ಹಸ್ತ ತೋಳು ಕರ್ಣ ಕಂಠ
ಮಸ್ತಕದಲ್ಲಿ ಧರಿಸಿಪ್ಪ ಶಿವಭಕ್ತನೇ ರುದ್ರನು.
ಆತನ ದರ್ಶನದಿಂದ ಭವರೋಗ ದುರಿತ ಇರಲಮ್ಮವು ನೋಡಾ.
`ಓಂ ಅತ ಏವ ರುದ್ರಾಕ್ಷಧಾರಣಾತ್ ರುದ್ರಃ'
1607.07 60
A60
ಉರಿಲಿಂಗಪೆದ್ದಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  12345678910ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 6 ಈ ಪುಟದಲ್ಲಿ ಪಲಿತಾಂಶಗಳು 51 ರಿಂದ 60 ವರೆಗೆ