checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ಲಿಂಗಲೀಲಾವಿಲಾಸಚಾರಿತ್ರ, ಕಲ್ಲುಮಠದ ಪ್ರಭುದೇವ ಪು ಸಂ‖ ವಚನ ಸಂಖ್ಯೆ 50‖10 ಒಂದೆರಡಾದುದನಾರೂ ಅಱಿಯರು ಆಒಂದು ಒಂದೆಯಾಯಿತ್ತು, ತ್ರಿತತ್ತ್ವವವಾಯಿತ್ತು, ವೇದಾತೀತವಾಯಿತ್ತು, ಭರಿತವಾಯಿತ್ತು, ಪ್ರಾದೇಶಿಕವಾಯಿತ್ತು, ಭಕ್ತಿಗೆ ಸಾಧ್ಯವಾಯಿತ್ತು. ಅದಕ್ಕೆ ಆಧಾರ ದೇಹವಾಯಿತ್ತು. ಅದು ಅಷ್ಟವಿಗ್ರಹ ಸ್ವರೂಪವಾಗಿರುತ್ತಿಪ್ಪುದು. ಮತ್ತಿದ್ದ ಒಂದು ಮಾಯಾಶಕ್ತಿಯಂ ಕೂಡಿ, ಗುಣತ್ರಯಂಗಳಂ ಕೂಡಿ, ನಾನಾತ್ಮನೆನಿಸಿಕೊಂಡು ವಿಷಯಾತ್ಮ ಇಂದ್ರಿಯಾತ್ಮ ಭೂತಾತ್ಮ ಜೀವಾತ್ಮ ಪರಮಾತ್ಮನೆನಿಸಿಕೊಂಡು, ಪ್ರಾಣಾದಿವಾಯುಗಳಂ ಕೂಡಿಕೊಂಡು ಜಡಪ್ರಕೃತಿಗಳಂ ಹೊತ್ತುಕೊಂಡು ಸಂಕಲ್ಪ_ವಿಕಲ್ಪವೆಂಬ ಉಭಯ ಕರ್ಮಂಗಳಂ ಕಲ್ಪಿಸಿ ನಾನಾಯೋನಿ ಪ್ರಾಪ್ತವಾಗುತ್ತಿರ್ದು, ಲೋಕಾದಿ ಲೋಕಂಗಳೊಳು ತೊಳಲಿ ಬಳಲಿ ತನ್ನ ಮೊದಲ ಕೂಡುವ ಪ್ರಕಾರಮಂ ಬಯಸಿ ನಾನಾ ಪಥದಿಂದ ಅಱಸಿ ಹರಿವುತ್ತಿಪ್ಪರಖಿಳ ಜೀವಿಗಳೆಲ್ಲರು. ಇದ ಬೆರಸದೆ ಬೆರಸಿದ ಸಂಗನಬಸವಣ್ಣನ ನೆನೆದವಂಗೆ ಶರಣೆಂದು ಶುದ್ಧನಾದೆನು ಕಾಣಾ ಗುಹೇಶ್ವರಾ. ಗಮನಿಸಿ:
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |