checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 1553 (ಸಮಗ್ರ ವಚನ ಸಂಪುಟ 6) | ಶಿವ ಜಗವಾಗಲ್ಲ, ಶಿವ ಜಗವಾಗದಿರಲೂ ಬಲ್ಲ. ಶಿವ ರೂಪಾಗಬಲ್ಲ, ಶಿವ ರೂಪಾಗದಿರಲೂ ಬಲ್ಲ. ಶಿವ ಅಜಾಂಡಕೋಟಿಗಳ ಮಾಡಬಲ್ಲ, ಮಾಡದಿರಲೂ ಬಲ್ಲ. ಶಿವ ಕೆಡಿಸಬಲ್ಲ, ಕೆಡಿಸದಿರಲೂ ಬಲ್ಲ. ಶಿವ ಜಂಗಮವಾಗಿ ಪೂಜಿಸಬಲ್ಲ. ಶಿವ ಲಿಂಗವಾಗಿ ತಾನೇ ಪೂಜೆಯ ಕೊಳಲೂ ಬಲ್ಲ. ಶಿವ ಹೊರಗಾಗಿ ಮತ್ತನ್ಯವಿಲ್ಲವೆಂಬ ವೇದ ಉಂಟೇ ? ಎಂದೆಡೆ ಉಂಟು. ಅಥರ್ವವೇದ: `ಶಿವೋ ಉಮಾ ಪಿತರೌ ಎಂದುದಾಗಿ ದೇವನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನು, ನಮಗೆಲ್ಲ ಮಾತಾಪಿತನು. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 228 ಶಿವ ಜಗವಾಗಬಲ್ಲ, ಜಗವಾಗದಿರಲೂ ಬಲ್ಲ. ಶಿವ ರೂಪಾಗಬಲ್ಲ, ರೂಪಾಗದಿರಲೂ ಬಲ್ಲ. ಶಿವನಜಾಂಡಕೋಟಿಗಳ ಮಾಡಬಲ್ಲ, ಮಾಡದಿರಲೂ ಬಲ್ಲ. ಶಿವನು ಕೆಡಿಸಬಲ್ಲ, ಕೆಡಿಸದಿರಲೂ ಬಲ್ಲ. ಶಿವ ಜ೦ಗಮವಾಗಿ ಶಿವನ ಪೂಜಿಸಬಲ್ಲ, ಶಿವ ಲಿಂಗವಾಗಿ ತಾನೆ ಪೂಜೆಗೊಳಬಲ್ಲ. ಶಿವ ಹೊಱಗಾಗಿ ಮತ್ತನ್ಯವಿಲ್ಲವೆಂಬ ವೇದವು೦ಟೇ ಎಂದಡೆ, ಉಂಟು. ಅಥರ್ವಣವೇದ: «ಶಿವೋ ವಾ ಉಮೇನ ಪಿತರಾ ಪಿತೃದೇವೋ | ಭವತಿ ಪಿತರಾ ತಸ್ಯ ಮಹಿ.» ಎಂದುದಾಗಿ, ಶಿವನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನು ನಮಗೆಲ್ಲಾ ಮಾತಾಪಿತನು.
×
ಪಠ್ಯಗಳಲ್ಲಿನ ವ್ಯತ್ಯಾಸ
| ||||||
| ಲಿಂಗಲೀಲಾವಿಲಾಸಚಾರಿತ್ರ, ಕಲ್ಲುಮಠದ ಪ್ರಭುದೇವ ಪು ಸಂ‖ ವಚನ ಸಂಖ್ಯೆ 49‖08 ಶಿವ ಜಗವಾಗಬಲ್ಲ, ಶಿವ ಜಗವಾಗದಿರಲೂ ಬಲ್ಲ. ಶಿವ ರೂಪಾಗಬಲ್ಲ, ಶಿವ ರೂಪಾಗದಿರಲೂ ಬಲ್ಲ. ಶಿವನಜಾಂಡಕೋಟಿಗಳ ಮಾಡಬಲ್ಲ, ಮಾಡದಿರಲೂ ಬಲ್ಲ. ಶಿವ ಕೆಡಿಸಬಲ್ಲ, ಕೆಡಿಸದಿರಲೂ ಬಲ್ಲ. ಶಿವ ಜಂಗಮವಾಗಿ ಶಿವನ ಪೂಜಿಸಬಲ್ಲ. ಶಿವ ಲಿಂಗವಾಗಿ ತಾನೇ ಪೂಜಿಸಿಕೊಳ್ಳಬಲ್ಲ. ಶಿವ ಹೊಱಗಾಗಿ ಅನ್ಯವಿಲ್ಲವೆಂಬ ವೇದವುಟೇ? ಇಲ್ಲ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವಕೆಲ್ಲ ಮಾತಾಪಿತನು. ಗಮನಿಸಿ:
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |