checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 193 (ಸಮಗ್ರ ವಚನ ಸಂಪುಟ 3) | ಯತ್ರ ಜೀವಸ್ತ್ರ ಶಿವನೆಂಬ ಬಾಲಭಾಷೆಯ ಕೇಳಲಾಗದು ಶಿವಶಿವಾ ಯತ್ರಜೀವಸ್ತತ್ರ ಶಿವನಾದರೆ ಜೀವಂಗೆ ಮರಣವೇಕೋ? ಯತ್ರ ಜೀವಸ್ತತ್ರ ಶಿವನಾದರೆ ಜನನ ಸ್ಥಿತಿ ಮರಣ ರುಜೆ ಸಂಸಾರ ಬಂಧನವೇಕೋ? ಯತ್ರ ಜೀವಸ್ತತ್ರ ಶಿವನಾದರೆ ಪುಣ್ಯಪಾಪ ಪ್ರಳಯಕಾಲ ಕಲ್ಪಿತವೇಕೊ? ಇದು ಕಾರಣ ಯತ್ರ ಜೀವಸ್ತತ್ರ ಶಿವನಲ್ಲ, ಉತ್ಪತ್ತಿ ಸ್ಥಿತಿ ಪ್ರಳಯರಹಿತನು ಸದ್ಭಕ್ತರಲ್ಲಿಪ್ಪನಲ್ಲದೆ ಮತ್ತೆಲ್ಲಿಯೂ ಇಲ್ಲ, ಕೂಡಲಚೆನ್ನಸಂಗಮದೇವ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 223 «ಯತ್ರ ಜೀವ ತತ್ರ ಶಿವ»ನೆ೦ಬ ಬಾಲಭಾಷೆಯ ಕೇಳಲಾಗದು. ಶಿವ ಶಿವಾ! ಯತ್ರ ಜೀವ ತತ್ರ ಶಿವನಾದಡೆ, ಜೀವಂಗೆ ಜನನ ಮರಣ ರುಜೆ ಸಂಸಾರ ಬ೦ಧನವೇಕೋ? ಯತ್ರ ಜೀವ ತತ್ರ ಶಿವನಾದಡೆ, ಪುಣ್ಯ ಪಾಪ ಪ್ರಳಯ ಕಾಲ ಕಲ್ಪಿತನೇ ಶಿವನು?-ಇದು ಕಾರಣ, ಯತ್ರ ಜೀವ ತತ್ರ ಶಿವನಲ್ಲ. ಉತ್ಪತ್ತಿ ಸ್ಥಿತಿ ಲಯ ಪ್ರಳಯರಹಿತನು ಸದ್ಭಕ್ತರಲ್ಲಿಪ್ಪನಲ್ಲದೆ ಮತ್ತೆಲ್ಲಿಯೂ ಇಲ್ಲ ಕೂಡಲಚೆನ್ನಸಂಗಯ್ಯ
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |