checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 194 (ಸಮಗ್ರ ವಚನ ಸಂಪುಟ 3) | ಸರ್ವಗತಶಿವನೆಂಬುದೀ ಲೋಕವೆಲ್ಲಾ. ಶಿವಶಿವಾ ನಿರ್ಬುದ್ಧಿ ಜನಂಗಳನೇನೆಂಬೆ! ಸರ್ವವೆಲ್ಲವೂ ಶಿವನಾದರೆ ಹಿಂದಣ ಯುಗ ಪ್ರಳಯಂಗಳೇಕಾದವು? ಸರ್ವವೆಲ್ಲವೂ ಶಿವನಾದರೆ ಚೌರಾಸಿಲಕ್ಷ ಜೀವರಾಶಿಗಳೇಕಾದವು? ಸೂತ್ರಧಾರಿ, ನರರಿಗಾಗಿ ಯಂತ್ರವನಾಡಿಸುವಲ್ಲಿ ಹೊರಗಿದ್ದಾಡಿಸುವನಲ್ಲದೆ ತಾನೊಳಗಿದ್ದಾಡಿಸುವನೆ? ಅಹಂಗೆ ಶಿವನು ತನ್ನಾಧೀನವಾಗಿಪ್ಪ ತ್ರಿಜಗದ ಸಚರಾಚರಂಗಳ ತಾನು ಯಂತ್ರವಾಹಕನಾಗಿ ಆಡಿಸುವನಲ್ಲದೆ, ತಾನಾಡುವನೆ? ಸರ್ವಯಂತ್ರವೂ ತಾನಾದರೆ ಸಕಲತೀರ್ಥಕ್ಷೇತ್ರಯಾತ್ರೆಗೆ ಹೋಗಲೇಕೊ ? ಇದು ಕಾರಣ ಸರ್ವವೂ ಶಿವನೆನಲಾಗದು. ಸದಾಚಾರ ಸದ್ಭಕ್ತಿ ಸನ್ನಿಹಿತ ಲಿಂಗಜಂಗಮದೊಳಗಿಪ್ಪ, ಮತ್ತೆಲ್ಲಿಯೂ ಇಲ್ಲ, ಕೂಡಲಚೆನ್ನಸಂಗಯ್ಯಾ |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 221 ಸರ್ವಗತ ಶಿವನೆಂಬುದೀ ಲೋಕವೆಲ್ಲಾ. ಶಿವ ಶಿವಾ! ನಿರ್ಬುದ್ಧಿ ಜನಂಗಳನೇನೆಂಬೆ? ಸರ್ವವೂ ಶಿವನಾದಡೆ, ಹಿಂದಣ ಯುಗ ಪ್ರಳಯಂಗಳೇಕಾದವು? ಚೌರಾಸಿಲಕ್ಷ ಜೀವರಾಶಿಗಳೇಕಾದವು? ಸೂತ್ರಧಾರಿ, ನರರೊಳಗೆ ಯಂತ್ರವನಾಡಿಸುವಲ್ಲಿ, ಹೊಱಗಾಗಿರ್ದಾಡಿಸುವನಲ್ಲದೆ, ತಾನೊಳಗಿದ್ದಾಡಿಸುವನೆ? ಆ ಹಾಂಗೆ ಶಿವನು ತನ್ನಾಧೀನವಾಗಿಪ್ಪ ತ್ರಿಜಗ ಸಚರಾಚರಂಗಳೆಂಬ ಯಂತ್ರವನು ಯಂತ್ರವಾಹಕನಾಗಿ ಆಡಿಸುವನಲ್ಲದೆ; ತಾನಾಡುವನೆ? ಸರ್ವ ಯಂತ್ರವು ತಾನಾದಡೆ, ಸಕಲ ತೀರ್ಥ ಕ್ಷೇತ್ರ ಯಾತ್ರೆಗೆ ಹೋಗಲೇಕೋ?-ಇದು ಕಾರಣ ಸರ್ವವೂ ಶಿವನೆನಲಾಗದು. [ಮತ್ತೆಲ್ಲಹನೆಂದಡೆ] ಸದಾಚಾರ ಸದ್ಭಕ್ತಿ ಸನ್ನಿಹಿತ ಲಿಂಗ ಜಂಗಮದೊಳಿಪ್ಪು ಮತ್ತೆಲ್ಲಿಯೂ ಇಲ್ಲ ಕೂಡಲಚೆನ್ನಸಂಗಯ್ಯ
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |