checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 246 (ಸಮಗ್ರ ವಚನ ಸಂಪುಟ 7) | ಭಕ್ತನ ಮಠಕ್ಕೆ ಜಂಗಮ ಬಂದು, ಆ ಭಕ್ತ ಮಾಡಿದಂತೆ ಭಕ್ತಿಯ ಮಾಡಿಸಿಕೊಂಡು, ಕ್ಷಮಿಸಬಲ್ಲಡೆ ಜಂಗಮ ಆ ಕ್ಷಮೆಯೊಳಗೆ ಮಗ್ನನಾಗಬಲ್ಲಡೆ ಭಕ್ತ. ಉಪಾಧಿಯಾಗಿ ಹೇಳಿ ಮಾಡಿಸಿಕೊಂಬನ್ನಬರ ಭೂತಪ್ರಾಣಿ: ಬಂದ ಪರಿಯಲ್ಲಿ ಪರಿಣಾಮಿಸಬಲ್ಲಡೆ ಲಿಂಗಪ್ರಾಣಿ. ಬೇಡಿದಲ್ಲದೆ ಮಾಡೇನೆಂಬೆನ್ನಕ್ಕರ ಫಲದಾಯಕ |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 88 ಭಕ್ತನ ಮಠಕ್ಕೆ ಜಂಗಮ ಬ೦ದು, ಆ ಭಕ್ತ ಮಾಡಿದಂತೆ ಭಕ್ತಿಯ ಮಾಡಿಸಿಕೊಂಡು, ಕ್ಷಮಿಸಬಲ್ಲಡೆ ಜಂಗಮ; ಆ ಕ್ಷಮೆಯೊಳಗೆ ಮಗ್ನನಾಗಬಲ್ಲಡೆ ಭಕ್ತ ಉಪಾಧಿಯಾಗಿ ಹೇಳಿ ಮಾಡಿಸಿಕೊಂಬನ್ನಬರ ಭೂತಪ್ರಾಣಿ; ಬಂದ ಪರಿಯಲ್ಲಿ ಪರಿಣಾಮಿಸಬಲ್ಲಡೆ ಲಿಂಗಪ್ರಾಣಿ. ಬೇಡಿದಲ್ಲದೆ ಮಾಡೆನೆಂಬನ್ನಕ್ಕರ ಫಲದಾಯಕ; ಬಂದ ಜಂಗಮದ ಇಂಗಿತಾಕಾರನಱಿದ, ಬೇಡದ ಮುನ್ನವೆ ಮಾಡಬಲ್ಲಡೆ ಸದ್ ಭಕ್ತನೆಂಬೆನು. ಬೇಡದ ಮುನ್ನವೆ ಮಾಡುವ ಭಕ್ತನು, ಬೇಡದೆ ಮಾಡಿಸಿಕೊಂಬ ಜ೦ಗಮವು-ಇಂತೀ ಎರಡಱ ಸಮ್ಮೇಳ ಸನ್ನಿಧಿಯಲ್ಲಿದ್ದು ನಾನು ಸುಖಿಯಾದೆನು ಕಾಣಾ ಮಹಾಲಿಂಗ ಗಜೇಶ್ವರಾ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |