checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 250 (ಸಮಗ್ರ ವಚನ ಸಂಪುಟ 2) | ಹಸಿಯ ಬಿಸಿಲನೆ ಕೊಯ್ದು ಪದಾರ್ಥವ ಮಾಡಿ, ಉಸಿರ ಎಸರಲ್ಲಿ ಬಾಗುತ್ತಿಪ್ಪರಯ್ಯಾ! ಇಕ್ಕಲಿಲ್ಲಾರಿಗೆಯು, ಎರೆಯಲಿಲ್ಲಾರಿಗೆಯು ಭಿಕ್ಷಾವೃತ್ತಿಗಳು ಬಂದು ಬೇಡುತ್ತಿಪ್ಪರಯ್ಯಾ. ನಿಮ್ಮ ಒಕ್ಕುದ ಮಿಕ್ಕುದ ಉಡಿಯಲ್ಲಿ ಕಟ್ಟಿಕೊಂಡಿಪ್ಪರಯ್ಯಾ. ಗುಹೇಶ್ವರಾ ನಿಮ್ಮ ಶರಣರು. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 252 ಹಸಿಯ ಬಿಸಿಲನೆ ಕೊಯ್ದು, ಪದಾರ್ಥವ ಮಾಡಿ, ಉಸುರ ಎಸರಲ್ಲಿ ಬಾಗುತ್ತಿಪ್ಪರಯ್ಯಾ! ಇಕ್ಕಲಿಲ್ಲಾರಿಗೆಯೂ, ಎಱೆಯಲಿಲ್ಲಾರಿಗೆಯೂ ಭಿಕ್ಷಾವೃತ್ತಿಗಳು ಬ೦ದು ಬೇಡುತ್ತಿಪ್ಪರಯ್ಯಾ ನಿಮ್ಮ ಒಕ್ಕುದ ಮಿಕ್ಕುದ ನುಡಿಯಲ್ಲಿ ಕಟ್ಟಕೊಂಡಿಪ್ಪರಯ್ಯಾ, -ಗೋಹೇಶ್ವರಾ, ನಿಮ್ಮ ಶರಣರು.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |