checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 4 (ಸಮಗ್ರ ವಚನ ಸಂಪುಟ 1) | ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ. ಪ್ರಥಮಭವಾಂತರದಲ್ಲಿ ಶಿಲಾದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿ ಎನನ್ನಿರಿಸಿಕೊಂಡಿರ್ದಿರಯ್ಯಾ. ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿರಿಸಿಕೊಂಡಿರ್ದಿರಯ್ಯಾ. ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಲೀಲಾವಿನೋದದಿಂದಿರಿಸಿಕೊಂಡಿರ್ದಿರಯ್ಯಾ. ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಮನಃಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ಸರ್ವಕಾಲಸಂಹಾರವ ಮಾಡಿಸುತ್ತಿರ್ದಿರಯ್ಯಾ. ಆರನೆಯ ಭವಾಂತರದಲ್ಲಿ ವೃಷಭನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ. ಏಳನೆಯ ಭವಾಂತರದಲ್ಲಿ ಬಸವದಣ್ಣಾಯಕನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಒಕ್ಕುದ ಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಇದು ಕಾರಣ ಕೂಡಲಸಂಗಮದೇವಾ, ನೀವು ಬರಿಸಿದ ಭವಾಂತರದಲ್ಲಿ ನಾನು ಬರುತಿರ್ದೆನಯ್ಯಾ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 14 ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದೆ ಇದ್ದರೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ನಿಮ್ಮ ಪ್ರಸಾದಕ್ಕಲ್ಲದೆ ಬಾಯಿದೆಱೆಯೆನಯ್ಯಾ. ಪ್ರಥಮ ಭವಾ೦ತರದಲ್ಲಿ ಶಿಲಾದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು, ನಿಮ್ಮ ಭೃತ್ಯನ ಮಾಡಿ ಎನ್ನನಿರಿಸಿಕೊಂಡಿದ್ದಿರಯ್ಯಾ ಎರಡನೆಯ ಭವಾಂತರದಲಿ ಸ್ಕಂದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು, ನಿಮ್ಮ ಕಾರುಣ್ಯವ ಮಾಡಿಕೊಂಡಿದ್ದಿರಯ್ಯಾ ಮೂಱನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು, ನಿಮ್ಮ ಲೀಲಾವಿನೋದದಿಂದಿರಿಸಿ ಕೊ೦ಡಿದ್ದಿರಯ್ಯಾ. ನಾಲ್ಕನೆಯ ಭವಾ೦ತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು, ನಿಮ್ಮ ಮನಃಪ್ರೇರಕನಾಗಲೆಂದಿರಿಸಿ ಕೊಂಡಿದ್ದಿರಯ್ಯಾ ಐದನೆಯ ಭವಾ೦ತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು, ಸರ್ವಕಾಲ ಸಂಹಾರವ ಮಾಡಿಸುತ್ತಿದ್ದಿರಯ್ಯಾ ಆಱನೆಯ ಭವಾ೦ತರದಲ್ಲಿ ವೃಷಭನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು, ನಿಮಗೇಱಲು ವಾಹನವಾಗಲೆಂದಿರಿಸಿಕೊ೦ಡಿದ್ದಿರಯ್ಯಾ ಏಳನೆಯ ಭವಾಂತರದಲ್ಲಿ ಬಸವನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮೊಕ್ಕುದ ಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿದ್ದಿರಯ್ಯಾ ಇದು ಕಾರಣ, ಕೂಡಲಸಂಗಮದೇವಾ, ನೀವು ಬರಿಸಿದ ಭವಾ೦ತರದಲ್ಲಿ ನಾನು ಬರುತಿದ್ದೆನಯ್ಯಾ.
×
ಪಠ್ಯಗಳಲ್ಲಿನ ವ್ಯತ್ಯಾಸ
| ||||||
| ಮಹದೇವಯ್ಯನ 'ಶೂನ್ಯ ಸಂಪಾದನೆ', ವಚನ ಸಂ 1311 ನಿಮ್ಮ ಪ್ರಮಥರಾಣೆ! ನಿಮ್ಮ ಪ್ರಸಾದಕಲ್ಲದೆ ಬಾಯ್ದೆಱೆಯೆನಯ್ಯ! ಅದೆಂತೆಂದರೆ; ಪ್ರಥಮ ಭವಾಂ೦ತರದಲ್ಲಿ-ಶಿಲಾದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು, ನಿಮ್ಮ ಭೃತ್ಯನ ಮಾಡಿಕೊಂಡಿದ್ದಿರಯ್ಯ ಎರಡನೆಯ ಭವ ಆಂತರದಲ್ಲಿ-ಸ್ಕಂದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು, ಕರೆದು, ಕಾರುಣ್ಯವ ಮಾಡಿಕೊಂಡಿದ್ದಿರಯ್ಯ. ಮೂಜನೆಯ ಭವಾಂತರದಲ್ಲಿ-ನೀಲಲೋಹಿತನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು, ನಿಮ್ಮ ಲೀಲಾವಿನೋದದಿಂದಿರಿಸಿಕೊ೦ಡಿದ್ದಿರಯ್ಯ. ನಾಲ್ಕನೆಯ ಭವಾ೦ತರ ದಲ್ಲಿ- ಮನೋಹರನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು ನಿಮ್ಮ ಮನಃ ಪ್ರೇರಕನಾಗಲೆಂದಿರಿಸಿಕೊಂಡಿರುತ್ತಿದ್ದಿರಯ್ಯ... ಐದನೆಯ ಭವಾಂತರದಲ್ಲಿ-ಕಾಲಲೋಚನನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು, ಸರ್ವಕಾಲ ಸಂಹಾರವ ಮಾಡಿಸುತ್ತಿದ್ದಿರಯ್ಯ. ಆಱನೆಯ ಭವಾ೦ತರದಲ್ಲಿ-ವೃಷಭನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು, ನಿಮಗೇಱುವ ವಾಹನವಾಗಿರಿಸಿಕೊ೦ಡಿದ್ದಿರಯ್ಯ. ಏಳನೆಯ ಭವಾ೦ತರದಲ್ಲಿ- ಬಸವದಣ್ಣಾಯಕನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು, ನಿಮ್ಮ ಒಕ್ಕು ಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊ೦ಡಿದ್ದಿರಯ್ಯ. ಇದು ಕಾರಣ, ಕೂಡಲಸಂಗಮದೇವ, ನೀ ಬರಿಸಿದ ಭವಾ೦ತರದಲ್ಲಿ ಬರುತ್ತಿದ್ದೆನಯ್ಯ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |