checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 709 (ಸಮಗ್ರ ವಚನ ಸಂಪುಟ 1) | ನಾನು ಆರಂಭವ ಮಾಡುವೆನಯ್ಯಾ, ಗುರುಪೂಜೆಗೆಂದು, ನಾನು ಬೆವಹಾರವ ಮಾಡುವೆನಯ್ಯಾ, ಲಿಂಗಾರ್ಚನೆಗೆಂದು, ನಾನು ಪರಸೇವೆಯ ಮಾಡುವೆನಯ್ಯಾ, ಜಂಗಮದಾಸೋಹಕ್ಕೆಂದು. ನಾನಾವಾವ ಕರ್ಮಂಗಳ ಮಾಡಿದಡೆಯು ಆ ಕರ್ಮಫಲಭೋಗವ ನೀ ಕೊಡುವೆ ಎಂಬುದ ನಾನು ಬಲ್ಲೆನು. ನೀ ಕೊಟ್ಟ ದ್ರವ್ಯವ ನಿಮಗಲ್ಲದೆ ಮತ್ತೊಂದಕ್ಕೆ ಮಾಡೆನು, ನಿಮ್ಮ ಸೊಮ್ಮಿಂಗೆ ಸಲಿಸುವೆನು. ನಿಮ್ಮಾಣೆ ಕೂಡಲಸಂಗಮದೇವಾ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 144 ಆನು ಆರಂಬವ ಮಾಡುವೆನಯ್ಯಾ-ಗುರುಪೂಜೆಗೆಂದು. ಆನು ವ್ಯವಹಾರವ ಮಾಡುವೆನಯ್ಯಾ-ಲಿಂಗಾರ್ಚನೆಗೆಂದು. ಆನು [ಪರ]ಸೇವೆಯ ಮಾಡುವೆನಯ್ಯ- ಜಂಗಮದಾಸೋಹಕ್ಕೆಂದು. ನಾನಾವ ಕರ್ಮವ ಮಾಡಿದಡೆಯೂ ಆ ಕರ್ಮಫಲ ನೀ ಕೊಡುವೆಯೆಂಬುದನು ನಾನು ಬಲ್ಲೆ. ನೀ ಕೊಟ್ಟ ದ್ರವ್ಯವನು ನಿನಗಲ್ಲದೆ ಮತ್ತೊಂದು ಕ್ರೀಯ ಮಾಡೆನು. ನಿಮ್ಮ ಸೊಮ್ಮಿಂಗೆ ಸಲಿಸುವೆನು. ನಿಮ್ಮಾಣೆ ಕೂಡಲಸಂಗಮದೇವಾ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |