checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 710 (ಸಮಗ್ರ ವಚನ ಸಂಪುಟ 1) | ಹೊತ್ತಾರೆ ಎದ್ದು ಕಣ್ಣ ಹೊಸೆಯುತ್ತ, ಎನ್ನ ಒಡಲಿಂಗೆ, ಎನ್ನ ಒಡವೆಗೆಂದು ಎನ್ನ ಮಡದಿ-ಮಕ್ಕಳಿಗೆಂದು, ಕುದಿದೆನಾದಡೆ ಎನ್ನ ಮನಕ್ಕೆ ಮನವೆ ಸಾಕ್ಷಿ. ಆಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ ಎಂಬ ಶ್ರುತಿಯ ಬಸವಣ್ಣನೋದುವನು, ಭವಿ ಬಿಜ್ಜಳನ ಗದ್ದುಗೆಯ ಕೆಳಗೆ ಕುಳ್ಳಿರ್ದು ಓಲೈಸಿಹನೆಂದು ನುಡಿವರಯ್ಯಾ ಪ್ರಮಥರು. ಕೊಡುವೆನೆ ಉತ್ತರವನವರಿಗೆ ಕೊಡಲಮ್ಮೆ. ಹೊಲೆಹೊಲೆಯರ ಮನೆಯ ಹೊಕ್ಕಾದಡೆಯೂ ಸಲೆ ಕೈಕೂಲಿಯ ಮಾಡಿಯಾದಡೆಯೂ, ನಿಮ್ಮ ನಿಲವಿಂಗೆ ಕುದಿವೆನಲ್ಲದೆ, ಎನ್ನ ಒಡಲವಸರಕ್ಕೆ ಕುದಿದೆನಾದಡೆ ತಲೆದಂಡ ಕೂಡಲಸಂಗಮದೇವಾ ! |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 143 ಹೊತ್ತಾಱೆ ಎದ್ದು, ಕಣ್ಣ ಹೊಸೆವುತ್ತ, ಎನ್ನ ಒಡಲಿಂಗೊಡವೆಗೆ ಮಡದಿಮಕ್ಕಳಿಗೆಂದು ಕುದಿದೆನಾದಡೆ, ಎನ್ನ ಮನಕ್ಕೆ ಮನವೇ ಸಾಕ್ಷಿ. ಭವಿ ಬಿಜ್ಜಳನ ಗದ್ದುಗೆಯ ಕೆಳಗೆ ಕುಳ್ಳಿರ್ದು ಓಲೈಸಿಹನೆಂಬರು. «ಸಾಕ್ಷಿ: ಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ» -ಎಂಬ ಶ್ರುತಿಯ ಬಸವಣ್ಣನೋದುವನೆಂಬರು. ಕೊಡುವೆನೇ ಉತ್ತರವ? ಕೊಡಲಮ್ಮೆ-ಪ್ರತ್ಯುತ್ತರ ನಾಯಕ ನರಕವೆಂಬುದುಂಟಾಗಿ. ಹೊಲೆ ಹೊಲೆಯರ ಮನೆಯ ಹೊಕ್ಕು ಸಲೆ ಕೈಕೂಲಿಯ ಮಾಡಿಯಾದಡೆಯೂ ನಿಮ್ಮ ನಿಲವಿಂಗೆ ಕುದಿವೆನಲ್ಲದೆ, ಎನ್ನೊಡಲವಸರಕ್ಕೆ ಕುದಿದೆನಾದಡೆ ತಲೆದಂಡ ತಪ್ಪದು; ನಾಯಕನರದಲ್ಲಿಕ್ಕು ಕೂಡಲಸಂಗಮದೇವಾ.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |