checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 770 (ಸಮಗ್ರ ವಚನ ಸಂಪುಟ 1) | ಹೊಲೆಯುಂಟೆ ಲಿಂಗವಿದ್ದೆಡೆಯಲ್ಲಿ ಕುಲವುಂಟೆ ಜಂಗಮವಿದ್ದೆಡೆಯಲ್ಲಿ ಎಂಜಲುಂಟೆ ಪ್ರಸಾದವಿದ್ದೆಡೆಯಲ್ಲಿ ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ. ನಿಷ್ಕಳಂಕ ನಿಜೈಕ್ಯ ತ್ರಿವಿಧನಿರ್ಣಯ, ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದಿಲ್ಲ. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 99 ಹೊಲೆಯುಂಟೆ, ಲಿಂಗವಿದ್ದೆಡೆಯಲ್ಲಿ? ಕುಲವುಂಟೆ, ಜಂಗಮವಿದ್ದೆಡೆಯಲ್ಲಿ? ಎ೦ಜಲುಂಟೆ, ಪ್ರಸಾದವಿದ್ದೆಡೆಯಲ್ಲಿ? ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ. ನಿಃಕಳ ನಿಜೈಕ್ಯ ತ್ರಿವಿಧ ನಿರ್ಣಯ ಕೂಡಲಚೆನ್ನಸಂಗಾ, ನಿಮ್ಮ ಶರಣಂಗಲ್ಲದಿಲ್ಲ.
×
ಪಠ್ಯಗಳಲ್ಲಿನ ವ್ಯತ್ಯಾಸ
| ||||||
| ಲಿಂಗಲೀಲಾವಿಲಾಸಚಾರಿತ್ರ, ಕಲ್ಲುಮಠದ ಪ್ರಭುದೇವ ಪು ಸಂ‖ ವಚನ ಸಂಖ್ಯೆ 22‖06 ಹೊಲೆಯುಂಟೇ ಲಿಂಗವಿದ್ದೆಡೆಯಲ್ಲಿ? ಕುಲವುಂಟೀ ಜಂಗಮನಿದ್ದೆಡೆ ಯಲ್ಲಿ? ಎಂಜಲುಂಜಟೆ ಪ್ರಸಾದವಿದೆಡೆಯಲ್ಲಿ? ಅಪವಿತ್ರದ ನುಡಿಯ ನುಡಿವ ಸೂತಕವೇ ಪಾತಕ. ನಿಃಕಳಂಕ ನಿಜೈಕ್ಯ ತ್ರಿವಿಧ ನಿರ್ಣಯ ಗಕೂಡಲಸಂಗಾಗ ನಿಮ್ಮ ಶರಣ ಗಮನಿಸಿ: W
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |