checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ವಚನ ಸಂಖ್ಯೆ: 8 (ಸಮಗ್ರ ವಚನ ಸಂಪುಟ 2) | ಅಯ್ಯಾ ನೀನು ನಿರಾಳ ನಿರ್ಮಾಯನಾಗಿಪ್ಪೆಯಾಗಿ ಆಕಾಶ ಪ್ರಕಾಶವಿಲ್ಲದಂದು, ಸಾಕ್ಷಿ ಸಭೆಗಳಿಲ್ಲದಂದು ಸಚರಾಚರವೆಲ್ಲ ರಚನೆಗೆ ಬಾರದಂದು; ಆಧಾರದೊಳಗಣ ವಿಭೂತಿಯನೆ ತೆಗೆದು, ಭೂಮಿಯ ನೆಲೆಗೊಳಿಸಿ (ಸೆ?) ಪಂಚಾಶತ್‍ಕೋಟಿ ವಿಸ್ತೀರ್ಣ ಭೂಮಂಡಲಕ್ಕೆ ಸುತ್ತಿ ಹರಿದವು ಸಪ್ತಸಾಗರಂಗಳು. ಎಂಬತ್ತಾರು ಕೋಟಿಯ (ಯುಂ?) ತೊಂಬತ್ತೇಳುಲಕ್ಷ ಕಾಲ ಭವನ ಮಂಡಲಕ್ಕೆ ಉದಯ ಬ್ರಹ್ಮಾಂಡ. ಅರುವತ್ತಾರು ಕೋಟಿ ತಾರಾಮಂಡಲವೆಂದೆಡೆ, ಬೆಳಗಿ ತೋರಿದ ಹನ್ನೆರಡು ಜ್ಯೋತಿಯ ನಿಲಿಸಿ ತೋರಿದ ಹದಿನಾಲ್ಕು ಭುವನವ ಈ ಜಗದ ಜಂಗುಳಿಯ ಕಾವ ಗೋವಳ ತಾನಾಗಿ ಚೌರಾಸಿಲಕ್ಷ ಜೀವರಾಶಿಗಳಿಗೆ ರಾಶಿವಾಳ ತಾನಾಗಿ ಸಕಲದ ಅಳಿವಿನ ಉಳಿವಿನ ನಿಜದ ನಿಲವ ನೋಡಿ ಕಂಡೆನು. ಗುಹೇಶ್ವರಾ, ನಿಮ್ಮ ಶ್ರೀಪಾದಕೆ ನಮೋ ನಮೋ ಎನುತಿರ್ದೆನು. |
|||||
| ಏಕೋತ್ತರ ಶತಸ್ಥಲ ಜಕ್ಕಣ, ವಚನ ಸಂ 10 ಅಯ್ಯಾ, ನೀನು ನಿರಾಳ ನಿರ್ಮಾಯನಾಗಿಪ್ಪೆಯಾಗಿ, ಆಕಾಶ ಪ್ರಕಾಶವಿಲ್ಲದಂದು, ಸಾಕ್ಷಿ ಸಭೆಗಳಿಲ್ಲದಂದು, ಆಧಾರದೊಳಗಣ ವಿಭೂತಿಯನೆ ತೆಗೆದು ಭೂಮಿಯ ನೆಲೆಗೊಳಿಸಿ, ಪಂಚಾಶತಕೋಟವಿಸ್ತೀರ್ಣ ಭೂಮಂಡಲಕ್ಕೆ ಸುತ್ತಿ ಹರಿದವು ಸಪ್ತಸಾಗರಂಗಳು. ಎ೦ಬತ್ತಾಱುಕೋಟಿಯು೦ ತೊಂಬತ್ತೇಳುಲಕ್ಷ ಕಾಲ ಭುವನಮಂಡಲಕ್ಕೆ ಉದಯಬ್ರಹ್ಮಾಂಡವಱುವತ್ತಾಱು ಕೋಟಿ ತಾರಾಮಂಡಲವೆಂದರೆ, ಬೆಳಗಿ ತೋಱಿದ ಹನ್ನೆರಡು ಜ್ಯೋತಿಯ; ನಿಲಿಸಿ ತೋಱಿದ ಹದಿನಾಲ್ಕು ಭುವನವ; ಈ ಜಗದ ಜಂಗುಳಿಯ ಕಾವ ಗೋವಳ ತಾನಾಗಿ, ಚೌರಾಸಿ ಲಕ್ಷ ಜೀವರಾಸಿಗಳಿಗೆ ರಾಸಿವಾಳ ತಾನಾಗಿ. ಸಕಲದ ಅಳಿವಿನ ಉಳಿವಿನಿ೦ದ ನಿಲವ ನೋಡಿ ಕಂಡೆ, ಗೊಗೇಶ್ವರಾ, ನಿಮ್ಮ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |