checking data baseConnected successfully!
| ಮೇಲಿನ ವಚನ ಕಾಣಿಸಿಕೊಳ್ಳುವ ಆಕರಗಳು | ||||||
| ಮಹದೇವಯ್ಯನ 'ಶೂನ್ಯ ಸಂಪಾದನೆ', ವಚನ ಸಂ 30 |ಇಲ್ಲದಲ್ಲಿ ಇಲ್ಲವಿದ್ದಿತ್ತು-ಇಲ್ಲವೆ೦ಬುದು ಉ೦ಟು ನೋಡ. ಉಂಟೆಂದಲ್ಲಿ ಇಲ್ಲ ಉ೦ಟಾಯಿತ್ತು. ಉ೦ಟಾದುದ ತಿಳಿದಡೆ ಅದೆ ಇಲ್ಲ.‖ (ದೇಹ) ಇಲ್ಲದಲ್ಲಿ ಇಲ್ಲದೆ ಇದ್ದಿತ್ತು ಇಲ್ಲವೆಂಬುದು ಉಂಟು ನೋಡ. ಉ೦ಟೆಂದಲ್ಲಿ ಇಲ್ಲ ಇಲ್ಲ ಉ೦ಟಾಯಿತ್ತು. ಉಂಟೆಂದು ತಿಳಿದಡೆ ಅದೆ ಇಲ್ಲ| ಆ ಇಲ್ಲದಲ್ಲಿ ಒಂದು ತಲೆ ಉದಯಿಸಿತ್ತು-ತಲೆಯೊಳಗೆ ಮೂಱು ಲಿಪಿಯ ಕಂಡೆ. ಲಿಪಿಯೊಳಗೊಂದು ಧ್ವನಿಯ ಕಂಡೆ. ಧ್ವನಿಯ ಬಣ್ಣ ತಲೆ ಎತ್ತದ ಮುನ್ನ-ಐದು ಬಾಯ ರಕ್ಕಸಿ ಆಗುಳಿಸಿ ನುಂಗಿದಳು. ಆ ರಕ್ಕಸಿಗೆ ಕೋಡಗ ಹುಟ್ಟಿ ಕೋಣನ ಕೊರಳ ತಟ್ಟಿಕೊಂಡಿತ್ತ ಕಂಡೆ. ಕೋಣನ |ಕೋಡ‖ಕೋಡಗ| ಮುಱಿದು ಈಡಾಡಿದರೆ ಕೋಡಗ |ಸತ್ತಿತ್ತು‖ಸಿಕ್ಕಿತ್ತು| ಅಡವಿಯ ಸುಟ್ಟು, ಆಕಾಶವ ಹೊಕ್ಕು ಗೊಗೇಶ್ವರ ಲಿಂಗದಲ್ಲಿ ಗುರುಕಾರುಣ್ಯವ ಪಡೆದೆನು
×
ಪಠ್ಯಗಳಲ್ಲಿನ ವ್ಯತ್ಯಾಸ
|
| ವಚನ ಆಕರಗಳ ಬಗೆಗೆಆಕರಗಳ ಕಾಲಮಾನ:15ನೇ ಶತಮಾನದ ವಚನ ಆಕರಗಳು ಇಂದು ತಿಳಿದಂತೆ ತೀರ ಹಿಂದಿನ ಪ್ರತಿ ಎಂದರೆ 1412ರ ಜಕ್ಕಣನ ಏಕೋತ್ತರಶತಸ್ಥಲ (ಕಲಬುರ್ಗಿ, ಸಮಗ್ರ ಸಾಹಿತ್ಯ, ಪು 425, 2020??). ಲಿಂಗಲೀಲಾವಿಲಾಸಚಾರಿತ್ರ ಹಾಗೂ ಮಹದೇವಯ್ಯನವರ ಶೂನ್ಯಸಂಪಾದನೆ ಗಳೆರಡನ್ನೂ ಸುಮಾರು 15ನೆಯ ಶತಮಾನದ ನಡುವಿಗೆ ಇರಿಸಲಾಗುತ್ತದೆ (1430). ಸಕಲ ಪುರಾತನರ ವಚನಗಳುನ ಮೂರುಕಟ್ಟುಗಳ ಕಾಲಮಾನವನ್ನು 15ನೆಯ ಶತಮಾನದ ಕೊನೆಗೆ ಎನ್ನುತ್ತಾರೆ ವೀರಣ್ಣ ರಾಜೂರ (ಪು.xxx, ಎಲ್ಲ ಪುರಾತನರ ವಚನಗಳು, 2006; 1420 ರಿಂದ 1495ರ ನಡುವೆ ಎನ್ನುತ್ತಾರೆ ಅವರು ). ನಂತರದ ಶತಮಾನದ ಆಕರಗಳಲ್ಲಿ ಗುಬ್ಬಿ ಮಲ್ಲಣ್ಣನ ಗಣಭಾಷಿತರತ್ನಮಾಲೆ ಮತ್ತು ಹಲಗೆಯಾರ್ಯನ ಶೂನ್ಯಸಂಪಾದನೆ ಬರುತ್ತವೆ (ಇವುಗಳ ಬಗೆಗೆ ವೀರಶೈವಾಮೃತ ಪುರಾಣದ ಕಾಲಮಾನವೇ 1530 ಆಧಾರ. ಹೀಗಾಗಿ ಗುಬ್ಬಿ ಮಲ್ಲಣ್ಣ ರಚಯತನ ತಾತನಾದ್ದರಿಂದ ಅವನನ್ನು 15ನೆಯ ಶತಮಾನದಲ್ಲಿ ಇರಿಸ ಬಹುದು. ಆದರೆ ಹಲಗೆಯಾರ್ಯನದು 15ರ ಕೊನೆ ಅಥವಾ 16ನೇ ಶತಮಾನದ ಆರಂಭ ಎನ್ನಲಾಗಿದೆ ) ಇಲ್ಲಿ ಕೆಲವು ಜನಪ್ರಿಯ ಕೃತಿಗಳನ್ನು ತೆಗೆದುಕೊಳ್ಳಲಾಗಿದೆ. ಇತರ ವಚನ ಹೊತ್ತಿಗೆಗಳನ್ನು ಸೇರಿಸಿಕೊಳ್ಳ ಬೇಕಿದೆ. |