checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಹರಗಣಂಗಳ ನೆರಹಿ ಮಾಡುವ ಮಾಟ,
ಉರಿಯನಾಲಗೆ ಕೊರಳನಪ್ಪಿದಂತಾಯಿತ್ತಯ್ಯಾ.
ಒಡೆದ ಮಡಕೆಯಲಮೃತವ ತುಂಬಿ,
ಮುರುವ ಕುಟ್ಟಿ ಅಟ್ಟುಂಬ ತೆರನಂತಾಯಿತ್ತಯ್ಯಾ.
ಭಕ್ತದೇಹಿಕದೇವ ಮನೆಗೆ ಬಂದಡೆ, ಮತ್ತೆ ಮಾಡಿಹೆನೆಂಬುದಿಲ್ಲವು.
ಮೂಗಿಲ್ಲದ ಮುಖಕ್ಕೆ ಶೃಂಗಾರವ ಮಾಡಿದಂತಾಯಿತ್ತಯ್ಯಾ.
ಶರಣಸನ್ನಹಿತ ಸಕಳೇಶ್ವರದೇವನ ಅರಿದೂ ಅರಿಯದಂತಿರ್ದಡೆ,
ಮಳಲಗೌರಿಯ ನೋಂತು ನದಿಯಲ್ಲಿ ಬೆರಸಿದಂತಾಯಿತ್ತಯ್ಯಾ.
499.09 131
A131
ಸಕಳೇಶಮಾದರಸ ಸಕಳೇಶ್ವರದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಜಂಗಮವಿಲ್ಲದ ಮಾಟ ಕಂಗಳಿಲ್ಲದ ನೋಟ,
ಹಿಂಗಿತ್ತು ಶಿವಲೋಕ ಇನ್ನೆಲ್ಲಿಯದಯ್ಯಾ.
ಲಿಂಗಕ್ಕೆ ಮಾಡಿದ ಬೋನವ ಸಿಂಬಕ ತಿಂಬಂತೆ,
ಸಮಯೋಚಿತವನರಿಯದೆ ಉದರವ ಹೊರೆವವರ
ನರಕದಲ್ಲಿಕ್ಕದೆ ಮಾಬನೆ ಕೂಡಲಸಂಗಮದೇವ
427.01 132
A132
ಬಸವಣ್ಣ ಕೂಡಲಸಂಗಮದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಭಂಡವ ತುಂಬಿದ ಬಳಿಕ
ಸುಂಕವ ತೆತ್ತಲ್ಲದೆ ವಿರಹಿತ ಹೋಗಬಾರದು.
ಲಿಂಗಸಂಬಂದ್ಥಿಯಾದಡೆ ಜಂಗಮಪ್ರೇಮಿ ನೀನಾಗು,
ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ,
ಜಂಗಮದಲ್ಲಿ ನಿರುತ ಭರಿತ, ಕೂಡಲಸಂಗಮದೇವ.
1288.01 133
A133
ಬಸವಣ್ಣ ಕೂಡಲಸಂಗಮದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಸುಪ್ರಭಾತ ಸಮಯದಲ್ಲಿ ಅರ್ತಿಯಲ್ಲಿ ಲಿಂಗವ ನೆನೆದಡೆ,
ತಪ್ಪುವುದು ಅಪಮೃತ್ಯು, ಕಾಲಕರ್ಮಂಗಳಯ್ಯಾ.
ದೇವಪೂಜೆಯ ಮಾಟ, ದುರಿತಬಂಧನದೋಟ.
ಶಂಭು ನಿಮ್ಮ ನೋಟ, ಹಿಂಗದ ಕಣ್ಬೇಟ.
ಸದಾ ಸನ್ನಿತನಾಗಿ ಶರಣೆಂಬುದು, ನಂಬುವುದು
ಜಂಗಮಾರ್ಚನೆಯ ಮಾಟ, ಕೂಡಲಸಂಗನ ಕೂಟ
177.01 134
A134
ಬಸವಣ್ಣ ಕೂಡಲಸಂಗ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
« ಮಾಟ ಕೂಟ, ಫಲ ಪ್ರಾಪ್ತಿ» ಎಂಬ ಮಾತ ಕೇಳಲಾಗದು ಶಿವಾಶಿವಾ !
ನಿಮ್ಮ ಭಕ್ತರಿಗೆ ಮಾಡಿದೆನೆನ್ನದಿರೆಂದು
ಶ್ರೀ ಗುರುಲಿಂಗವು ಕೃಪೆಯ ಮಾಡಿದ ಕಾರಣ.
ಅಲ್ಲಿ ಮಾಡುವವರೂ ಮಾಡಿಸಿಕೊಂಬವರೂ ನೀವೆ
ಕೂಡಲಸಂಗಮದೇವಾ.
508.01 135
A135
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ದಾಸ ವಸ್ತ್ರವನಿತ್ತ ಠಾವು ಲೇಸಾಯಿತ್ತು.
ತವನಿದ್ಥಿಯ ಪಡೆದ ಠಾವು ಹೊಲ್ಲೆಹವಾಯಿತ್ತು .
ಸಿರಿಯಾಳ ಮಗನನಿತ್ತ ಠಾವು ಲೇಸಾಯಿತ್ತು .
ಮರಳಿ ಬೇಡಿದ ಠಾವು ಹೊಲ್ಲೆಹವಾಯಿತ್ತು .
ಬಲ್ಲಾಳ ವಧುವಿನಿತ್ತ ಠಾವು ಲೇಸಾಯಿತ್ತು.
ಸ್ವಯಲಿಂಗವಾದ ಠಾವು ಹೊಲೆಹವಾಯಿತ್ತು .
ಇವರೆಲ್ಲರೂ ಸಕಳೇಶ್ವರದೇವರಲ್ಲಿ
ಅಪೇಕ್ಷಿತರಲ್ಲದೆ, ನಿರಪೇಕ್ಷಿತರಾರೂ ಇಲ್ಲ .
430.09 136
A136
ಸಕಳೇಶಮಾದರಸ ಸಕಳೇಶ್ವರದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಹೊನ್ನು, ಹೆಣ್ಣು, ಮಣ್ಣು, ಅನ್ನ, ಉದಕ, ದ್ರವ್ಯಂಗಳು
ಧರ್ಮದಾಸೆಯ ಕಾರಣ, ಅರ್ಥದಾಸೆಯ ಕಾರಣ,
ಕಾಮದಾಸೆಯ ಕಾರಣ, ಮೋಕ್ಷದಾಸೆಯ ಕಾರಣ,
ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯದಾಸೆಯ ಕಾರಣ,
ಪಂಚಮಹಾಪಾತಕಂಗಳ ಮಾಡಿದ ದೋಷಂಗಳ ಕಾರಣ,
ಅಧಿಕಾರಣ, ವ್ಯಾಧಿಕಾರಣ, ಕೀರ್ತಿಕಾರಣ, ವಾರ್ತೆಕಾರಣ,
ಸರ್ವವನು ನಿರಂತರ ಕೊಡುವರು.
ನಿಷ್ಕಾರಣವಾಗಿ ನಿರುಪಾಧಿಕರಾಗಿ, ನಿರಾಶ್ರಿತರಾಗಿ
ಶ್ರೀಗುರುಕಾರಣವಾಗಿ, ಲಿಂಗಕಾರಣವಾಗಿ,
ಜಂಗಮಕಾರಣವಾಗಿ, ಪ್ರಸಾದಕಾರಣವಾಗಿ,
ಈ ನಾಲ್ಕನು ಒಂದು ಮಾಡಿ,
ಸದ್ಭಕ್ತಿಯಿಂದ ದ್ವಿವಿಧವು ಪರಿಣಾಮಿಸುವಂತೆ,
ಕ್ಷಣಮಾತ್ರದಲ್ಲಿ ಅಣುಮಾತ್ರದ್ರವ್ಯವ
ಕೊಡುವವರಾರನು ಕಾಣೆ, ನಿರ್ವಂಚಕರಾಗಿ.
ಆನು ವಂಚಕನು, ಎನಗೆ ಭಕ್ತಿ ಇಲ್ಲ.
ಶಿವ ಶಿವಾ, ಸಂಗನಬಸವಣ್ಣ ನಿರ್ವಂಚಕನು,
ನಿರಾಶಾಭರಿತನು,
ಸುಚರಿತ್ರನು, ಸದ್ಭಕ್ತಿಪುರುಷನು, ಮಹಾಪುರುಷನು.
ಎನಗೆ ಮಹಾ ಶ್ರೀಗುರುಲಿಂಗಜಂಗಮಪ್ರಸಾದ.
ಈ ಚತುರ್ವಿಧವು ಬಸವಣ್ಣನು.
ಈ ಬಸವಣ್ಣನ ಭೃತ್ಯರ ಭೃತ್ಯನಾಗಿ ಎನ್ನನಿರಿಸಯ್ಯ,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
1627.06 137
A137
ಉರಿಲಿಂಗಪೆದ್ದಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಮಾಡಿದೆನೆಂಬುದು ಮನದಲ್ಲಿ ಹೊಳೆದಡೆ,
ಏಡಿಸಿ ಕಾಡಿತ್ತು ಶಿವನ ಡಂಗುರ,
ಮಾಡಿದೆನೆನ್ನದಿರಾ ಲಿಂಗಕ್ಕೆ, ಮಾಡಿದೆನೆನ್ನದಿರಾ ಜಂಗಮಕ್ಕೆ,
ಮಾಡಿದೆನೆಂಬುದು ಮನದಲಿಲದಿದ್ದಡೆ,
ಬೇಡಿತ್ತನೀವನು ಕೂಡಲಸಂಗಮದೇವ
234.01 138
A138
ಬಸವಣ್ಣ ಕೂಡಲಸಂಗಮದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಹರ[ಹಿ] ಮಾಡುವುದು ಹರಕೆಯ ಕೇಡು,
ನೆರಹಿ ಮಾಡುವುದು ಡಂಬಿನ ಭಕ್ತಿ.
ಹರ[ಹ]ಬೇಡ, ನೆರಹಬೇಡ
ಬಂದ ಬರವನರಿತು ಮಾಡಬಲ್ಲಡೆ ಕೂಡಿಕೊಂಡಿಪ್ಪ
ನಮ್ಮ ಕೂಡಲಸಂಗಮದೇವ
228.01 139
A139
ಬಸವಣ್ಣ ಕೂಡಲಸಂಗಮದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಅಷ್ಟವಿಧಾರ್ಚನೆ ಷೋಡಶೋಪಚಾರವ
ಅಂದಂದಿನ ಕೃತ್ಯವ ಅಂದಂದಿಗೆ ಆನು ಮಾಡಿ ಶುದ್ಧನಯ್ಯಾ.
ಹಂಗು ಹರಿಯಿಲ್ಲದ ಕಾರಣ,
ಕೂಡಲಸಂಗಮದೇವ ನಿಷ್ಫಲದಾಯಕನಾಗಿ
ಆನು ಮಾಡಿ ಶುದ್ಧನಯ್ಯಾ.
507.01 140
A140
ಬಸವಣ್ಣ ಕೂಡಲಸಂಗಮದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  « ಹಿಂದಿನ 1011121314151617181920ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 14 ಈ ಪುಟದಲ್ಲಿ ಪಲಿತಾಂಶಗಳು 131 ರಿಂದ 140 ವರೆಗೆ