ವಚನ ಆಕರಗಳು (15ನೆ ಶತಮಾನ)
ಉಟ್ಟು-ತೊಟ್ಟು ಪೂಜ್ಯವಾಗಿ ಬಂದ ಜಂಗಮ ವಿಶೇಷವೆಂದು,
ಕಂತೆ-ಬೊಂತೆಯ ಜಂಗಮ ಬಂದಡೆ ಹೀನವೆಂದು
ಕಂಡೆನಾದಡೆ ಪಂಚಮಹಾಪಾತಕ.
ಇದು ಕಾರಣ, ಅನ್ನ-ವಸ್ತ್ರ-ಧನ ಮಾಟದಲ್ಲಿ
ಎರಡಾಗಿ ಕಂಡೆನಾದಡೆ ನರಕದಲ್ಲಿಕ್ಕುವ,
ಕೂಡಲಸಂಗಮದೇವ. |
412.01 |
141 A141 |
ಬಸವಣ್ಣ | ಕೂಡಲಸಂಗಮದೇವ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಮನೆದೈವ, ಕುಲದೈವ ಎನಗೆ ನಿಮ್ಮವರಯ್ಯಾ.
ತನು ವಿೂಸಲು, ಮನ ಮೀಸಲು, ನಯನ ವಿೂಸಲು ಎನ್ನ,
ಕೂಡಲಸಂಗಮದೇವಾ, ನಿಮ್ಮ ಶರಣರಿಗೆ |
374.01 |
142 A142 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ನಯನದಾಹಾರವ ಜಂಗಮವ ನೋಡಿಸುವೆನು,
ಶ್ರೋತ್ರದಾಹಾರವ ಜಂಗಮವ ಕೇಳಿಸುವೆನು,
ಘ್ರಾಣದಾಹಾರವ ಜಂಗಮವ ವಾಸಿಸುವೆನು,
ಜಿಹ್ವೆಯಾಹಾರವ ಜಂಗಮವನೂಡಿಸುವೆನು,
ಕವಚದಾಹಾರವ ಜಂಗಮಕ್ಕೆ ಹೊದ್ದಿಸುವೆನು,
ಅಧಿಕ ಪ್ರೇಮ ಪರಿಣಾ[ಮ]ವ ಮಾಡುವೆನು,
ಸಕಲಪದಾರ್ಥಂಗಳ ನೀಡುವೆನು,
ಕೂಡಲಸಂಗಾ ನಿಮ್ಮ ಶರಣರಿಗೆ |
430.01 |
143 A143 |
ಬಸವಣ್ಣ | ಕೂಡಲಸಂಗಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ನಾನು ಆರಂಭವ ಮಾಡುವೆನಯ್ಯಾ, ಗುರುಪೂಜೆಗೆಂದು,
ನಾನು ಬೆವಹಾರವ ಮಾಡುವೆನಯ್ಯಾ, ಲಿಂಗಾರ್ಚನೆಗೆಂದು,
ನಾನು ಪರಸೇವೆಯ ಮಾಡುವೆನಯ್ಯಾ, ಜಂಗಮದಾಸೋಹಕ್ಕೆಂದು.
ನಾನಾವಾವ ಕರ್ಮಂಗಳ ಮಾಡಿದಡೆಯು
ಆ ಕರ್ಮಫಲಭೋಗವ ನೀ ಕೊಡುವೆ ಎಂಬುದ ನಾನು ಬಲ್ಲೆನು.
ನೀ ಕೊಟ್ಟ ದ್ರವ್ಯವ ನಿಮಗಲ್ಲದೆ ಮತ್ತೊಂದಕ್ಕೆ ಮಾಡೆನು,
ನಿಮ್ಮ ಸೊಮ್ಮಿಂಗೆ ಸಲಿಸುವೆನು.
ನಿಮ್ಮಾಣೆ ಕೂಡಲಸಂಗಮದೇವಾ. |
709.01 |
144 A144 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಹೊನ್ನಿನೊಳಗೊಂದೊರೆಯ, ಸೀರೆಯೊಳಗೊಂದೆಳೆಯ
ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ
ನಿಮ್ಮಾಣೆ, ನಿಮ್ಮ ಪ್ರಮಥರಾಣಿ.
ನಿಮ್ಮ ಶರಣರಿಗಲ್ಲದೆಮತೊಂದನರಿಯೆ
ಕೂಡಲಸಂಗಮದೇವಾ |
436.01 |
145 A145 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಹೊತ್ತಾರೆ ಎದ್ದು ಕಣ್ಣ ಹೊಸೆಯುತ್ತ,
ಎನ್ನ ಒಡಲಿಂಗೆ, ಎನ್ನ ಒಡವೆಗೆಂದು ಎನ್ನ ಮಡದಿ-ಮಕ್ಕಳಿಗೆಂದು,
ಕುದಿದೆನಾದಡೆ ಎನ್ನ ಮನಕ್ಕೆ ಮನವೆ ಸಾಕ್ಷಿ.
ಆಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ
ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ
ಎಂಬ ಶ್ರುತಿಯ ಬಸವಣ್ಣನೋದುವನು,
ಭವಿ ಬಿಜ್ಜಳನ ಗದ್ದುಗೆಯ ಕೆಳಗೆ ಕುಳ್ಳಿರ್ದು
ಓಲೈಸಿಹನೆಂದು ನುಡಿವರಯ್ಯಾ ಪ್ರಮಥರು.
ಕೊಡುವೆನೆ ಉತ್ತರವನವರಿಗೆ ಕೊಡಲಮ್ಮೆ.
ಹೊಲೆಹೊಲೆಯರ ಮನೆಯ ಹೊಕ್ಕಾದಡೆಯೂ
ಸಲೆ ಕೈಕೂಲಿಯ ಮಾಡಿಯಾದಡೆಯೂ,
ನಿಮ್ಮ ನಿಲವಿಂಗೆ ಕುದಿವೆನಲ್ಲದೆ, ಎನ್ನ ಒಡಲವಸರಕ್ಕೆ ಕುದಿದೆನಾದಡೆ
ತಲೆದಂಡ ಕೂಡಲಸಂಗಮದೇವಾ ! |
710.01 |
146 A146 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಮಾಡುವಲ್ಲಿ ಎನ್ನ ನಾನರಿದು ಮಾಡಿದೆನಾದಡೆ,
ನೀಡುವಲ್ಲಿ ಎನ್ನ ನಾನರಿದು ನೀಡಿದೆನಾದಡೆ,
ನೀಡುವಲ್ಲಿ ರುಚಿಗೆ ಮನವೆಳೆಸಿ ಹಾರೈಸಿದೆನಾದಡೆ,
ನಿಮಗಂದೆ ದ್ರೋಹವಯ್ಯಾ.
ಮಾಡುವಲ್ಲಿ ನೀಡುವಲ್ಲಿ ಕೂಡೆ ಶುದ್ಧನಲ್ಲದಿರ್ದಡೆ,
ನೀನಂದೆ ಮೂಗ ಕೊಯಿ ಕೂಡಲಸಂಗಮದೇವಾ |
1316.01 |
147 A147 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಅರ್ಥ ಪ್ರಾಣ ಅಭಿಮಾನವನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ.
ಆದಿರುದ್ರನ ಮಗಳು ಆದಿಶಕ್ತಿ,
ಆದಿಶಕ್ತಿಯ ಮಗ ವಿಷ್ಣು,
ವಿಷ್ಣುವಿನ ಅರ್ಧಾಂಗಿ ಲಕ್ಷ್ಮಿ.
ಈ ತೊತ್ತಿನ ತೊತ್ತಿನ ಪಡಿದೊತ್ತನೊಪ್ಪಿಸಿದಲ್ಲಿ ಭಕ್ತನಪ್ಪನೆ ಅಲ್ಲ.
ಎನ್ನ ಮನದೊಡೆಯ ಮಹಾದೇವಾ,
ನಿಮ್ಮ ಮನವ ನಿಮಗೊಪ್ಪಿಸಿ ಶುದ್ಧ ನಾನು ಕಾಣಾ,
ಕೂಡಲಸಂಗಮದೇವಾ. |
831.01 |
148 A148 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
| ಮಾಟವಿಲ್ಲದ ಕೂಟವದೇಕೋಳ ಕೂಟವಿಲ್ಲದ ಮಾಟವದೇಕೋ?
ಮಾಟಕೂಟವೆರಡರನುವರಿಯಬೇಕು.
ಸಟೆಯಿಲ್ಲದೆ ದಿಟ ಘಟಿಸಿ ಸಯವಾಗಬೇಕು.
ಕೂಟಮಾಟವೆರಡರ ಅನುಮತದಿಂದವೆ ಭಕ್ತಿ.
ಇದೇ [ಕೂಟ] ಕೂಡಲಚೆನ್ನಸಂಗಯ್ಯಾ ನಿಮ್ಮಲ್ಲಿ. |
134.03 |
149 A149 |
ಚೆನ್ನಬಸವಣ್ಣ | ಕೂಡಲಚೆನ್ನಸಂಗಯ್ಯಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಮಾಡುವಾತ ನಾನಲ್ಲಯ್ಯಾ, ನೀಡುವಾತ ನಾನಲ್ಲಯ್ಯಾ,
ಬೇಡುವಾತ ನಾನಲ್ಲಯ್ಯಾ, ನಿಮ್ಮ ಕಾರುಣ್ಯವಲ್ಲದೆ.
ಎಲೆ ದೇವಾ, ಮನೆಯ ತೊತ್ತು ಅಲಸಿದಡೆ ಒಡತಿ ಮಾಡಿಕೊಂಬಂತೆ,
ನಿನಗೆ ನೀ ಮಾಡಿಕೊ, ಕೂಡಲಸಂಗಮದೇವಾ. |
832.01 |
150 A150 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 11 12 13 14 15 16 17 18 19 20 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 15 ಈ ಪುಟದಲ್ಲಿ ಪಲಿತಾಂಶಗಳು 141 ರಿಂದ 150 ವರೆಗೆ |
|
|