ವಚನ ಆಕರಗಳು (15ನೆ ಶತಮಾನ)
ಕಾಳಿಯ ಕಂಕಾಳದಿಂದ ಮುನ್ನ ತ್ರಿಪುರಸಂಹಾರದಿಂದ ಮುನ್ನ ಹರಿ ವಿರಿಂಚಿಗಳಿಂದ ಮುನ್ನ ಉಮೆಯ ಕಲ್ಯಾಣದಿಂದ ಮುನ್ನ ಮುನ್ನ ಮುನ್ನ ಮುನ್ನ- ಅಂದಿಂಗೆಳೆಯ ನೀನು ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ. |
2.01 |
11 A11 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ
ನಾನು ಜ್ಞಾನವೆಂಬ ವಾಹನವಾಗಿರ್ದೆ ಕಾಣಾ.
ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ
ನಾನು ಚೈತನ್ಯವೆಂಬ ವಾಹನವಾಗಿರ್ದೆ ಕಾಣಾ.
ಅಯ್ಯಾ, ನೀನು ಆಕಾರವಾಗಿರ್ದಲ್ಲಿ
ನಾನು ವೃಷಭನೆಂಬ ವಾಹನವಾಗಿರ್ದೆ ಕಾಣಾ,
ಅಯ್ಯಾ, ನೀನೆನ್ನ ಭವವ ಕೊಂದೆಹೆನೆಂದು
ಜಂಗಮಲಾಂಛನವಾಗಿ ಬಂದಡೆ
ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ
ಕೂಡಲಸಂಗಮದೇವಾ. |
3.01 |
13 A13 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದಡೆ
ನಿಮ್ಮಾಣೆ, ನಿಮ್ಮ ಪ್ರಮಥರಾಣೆ !
ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ.
ಪ್ರಥಮಭವಾಂತರದಲ್ಲಿ
ಶಿಲಾದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಭೃತ್ಯನ ಮಾಡಿ ಎನನ್ನಿರಿಸಿಕೊಂಡಿರ್ದಿರಯ್ಯಾ.
ಎರಡನೆಯ ಭವಾಂತರದಲ್ಲಿ
ಸ್ಕಂದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಕಾರುಣ್ಯವ ಮಾಡಿರಿಸಿಕೊಂಡಿರ್ದಿರಯ್ಯಾ.
ಮೂರನೆಯ ಭವಾಂತರದಲ್ಲಿ
ನೀಲಲೋಹಿತನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಲೀಲಾವಿನೋದದಿಂದಿರಿಸಿಕೊಂಡಿರ್ದಿರಯ್ಯಾ.
ನಾಲ್ಕನೆಯ ಭವಾಂತರದಲ್ಲಿ
ಮನೋಹರನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಮನಃಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಐದನೆಯ ಭವಾಂತರದಲ್ಲಿ
ಕಾಲಲೋಚನನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ಸರ್ವಕಾಲಸಂಹಾರವ ಮಾಡಿಸುತ್ತಿರ್ದಿರಯ್ಯಾ.
ಆರನೆಯ ಭವಾಂತರದಲ್ಲಿ
ವೃಷಭನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಏಳನೆಯ ಭವಾಂತರದಲ್ಲಿ
ಬಸವದಣ್ಣಾಯಕನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಒಕ್ಕುದ ಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಇದು ಕಾರಣ ಕೂಡಲಸಂಗಮದೇವಾ,
ನೀವು ಬರಿಸಿದ ಭವಾಂತರದಲ್ಲಿ ನಾನು ಬರುತಿರ್ದೆನಯ್ಯಾ. |
4.01 |
14 A14 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ ಮಹದೇವಯ್ಯನ ಶೂನ್ಯಸಂಪಾದನೆ 1311
ಹಲಗೆಯಾರ್ಯನ ಶೂನ್ಯಸಂಪಾದನೆ 1201
|
ಅಯ್ಯಾ ನಿಮ್ಮ ಶರಣನ ಮರ್ತ್ಯಕ್ಕೆ ತಂದೆಯಾಗಿ ನೆನೆದು ಸುಖಿಯಾಗಿ ಆನು ಬದುಕಿದೆಯಾ ಅದೇನು ಕಾರಣ ತಂದೆಯೆಂದರಿದೆನಯ್ಯಾ ಎನ್ನ ಕಾರಣ ತಂದೆಯೆಂದರಿದೆನಯ್ಯಾ ಅರಿದರಿದು ನಿಮ್ಮ ಶರಣನು ಆಚರಿಸುವ ಆಚರಣೆಯ ಕಂಡು ಕಣ್ಣೆರೆದೆನಯ್ಯಾ ಕೂಡಲಸಂಗಮದೇವಾ |
5.01 |
15 A15 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
ಹಲಗೆಯಾರ್ಯನ ಶೂನ್ಯಸಂಪಾದನೆ 303
|
ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ ಇದಾವಾವ ಪರಿಯಲ್ಲಿ ಕಾಡಿಹಿತು ಮಾಯೆ. ಈ ಮಾಯೆಯ ಕಳೆವಡೆ ಎನ್ನಳವಲ್ಲ ನೀವೆ ಬಲ್ಲಿರಿ ಕೂಡಲಸಂಗಮದೇವಾ ! |
15.01 |
17 A17 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಸಂಸಾರವೆಂಬ ಬಲೆಯಲ್ಲಿ ಸಿಲುಕಿದೆನಯ್ಯಾ ಎನ್ನುವನು ಕಾಯಯ್ಯಾ ಕಾಯಯ್ಯಾ. ಹುರುಳಿಲ್ಲ ! ಹುರುಳಿಲ್ಲ ! ಕೂಡಲಸಂಗಮದೇವಾ ಶಿವಧೋ ! ಶಿವಧೋ ! |
13.01 |
19 A19 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಸಂಸಾರವೆಂಬ ರಾಹುವಿನ ಅಣಲೊಳಗೆ ಇದ್ದೆನಯ್ಯಾ ಆವಾಗ ನುಂಗೀತೆಂದರಿಯೆ ಆವಾಗ ಉಗುಳೀತೆಂದರಿಯೆನಯ್ಯಾ. ಅದರ ಬಾಯಿಂದೆನ್ನ ತೆಗೆದು ಕಾಯಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನಾ |
1054.04 |
20 A20 |
ಸಿದ್ಧರಾಮ | ಕಪಿಲಸಿದ್ಧಮಲ್ಲಿಕಾರ್ಜುನಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
ಗುಬ್ಬಿ ಮಲ್ಲಣ್ಣನ ಗಣಭಾಷಿತ ರತ್ನಮಾಲೆ 23
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] 1 2 3 4 5 6 7 8 9 10 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 2 ಈ ಪುಟದಲ್ಲಿ ಪಲಿತಾಂಶಗಳು 11 ರಿಂದ 20 ವರೆಗೆ |
|
|