ವಚನ ಆಕರಗಳು (15ನೆ ಶತಮಾನ)
ಒಡೆಯರು ಬಂದಡೆ ಗುಡಿ ತೋರಣವ ಕಟ್ಟಿ,
ನಂಟರು ಬಂದಡೆ ಸಮಯವಿಲ್ಲೆನ್ನಿ.
ಅಂದೇಕೆ ಬಾರರು
ನೀರಿಂಗೆ ನೇಣಿಂಗೆ ಹೊರಗಾದಂದು, ಸಮಯಾಚಾರಕ್ಕೆ ಒಳಗಾದಂದು.
ಪರುಷ ಮುಟ್ಟಲು ಕಬ್ಬುನ ಸುವರ್ಣವಾಯಿತ್ತು.
ಬಳಿಕ ಬಂಧುಗಳುಂಟೆ, ಕೂಡಲಸಂಗಮದೇವಾ |
449.01 |
191 A191 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಪೂರ್ವಾಶ್ರಯ ಪೂರ್ವಾಶ್ರಯವೆಂದೆಂಬರು,
ಪೂರ್ವಾಶ್ರಯವಾವುದೆಂದರಿಯರು.
ಪೂರ್ವವೆಂಬುದೆ ಬಂದ ಬಟ್ಟೆ, ಆಶ್ರಯವೆಂಬುದೆ ಕರಣಾದಿ ಗುಣಂಗಳು.
ಈ ಉಭಯವಳಿದು ಕೂಡಲಚೆನ್ನಸಂಗನಲ್ಲಿಪ್ಪ
ಶರಣಂಗೆ ಶರಣೆಂಬೆ.
|
569.03 |
192 A192 |
ಚೆನ್ನಬಸವಣ್ಣ | ಕೂಡಲಚೆನ್ನಸಂಗ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ
ರಾಗ ದ್ವೇಷವೆನಿಪ ಒಡಲಿರೆ,
ರಾಗ ದ್ವೇಷ ಗಮಾನಾಗಮನಂಗಳಿರುತ್ತಿರೆ,
ಬ್ರಹ್ಮವಾನೆಂಬ ಬರಿಯ ವಾಗದ್ವೈತದಲ್ಲಿ ಫಲವಿಲ್ಲ.
ನಂಬು, ಸುಖಸಾಗರವನ?,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ. |
1357.06 |
194 A194 |
ಉರಿಲಿಂಗಪೆದ್ದಿ | ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಶೂನ್ಯವ ನುಡಿದು ದುರ್ಗತಿಗಿಳಿದವರ,
ಅದ್ವೈತವ ನುಡಿದು ಅಹಂಕಾರಿಗಳಾದವರ,
ಬ್ರಹ್ಮವ ನುಡಿದು ಭ್ರಮಿತರಾದವರ,
ತ್ರಿಕಾಲ ಲಿಂಗಪೂಜೆಯ ಮಾಡದವರ
ಬ್ರಹ್ಮದ ಅನವರತ ಮಾತ ಕೇಳಿ
ಹಿಡಿದ ವ್ರತನೇಮಗಳ ಬಿಡುವವರ_
ಈ ದುರಾಚಾರಿಗಳ ಮೆಚ್ಚ, ಕೂಡಲಚೆನ್ನಸಂಗಾ ನಿಮ್ಮ ಶರಣ |
1611.03 |
195 A195 |
ಚೆನ್ನಬಸವಣ್ಣ | ಕೂಡಲಚೆನ್ನಸಂಗಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಅದ್ವೈತಿಗಳು ಲಿಂಗಾರಾಧನೆ ಹುಸಿಯೆಂದು ಬುದ್ಧಿಗೆಟ್ಟರು
ಆಗಮವನರಿಯದೆ ಬೊಮ್ಮನ ನೆರೆದಡೆ
ಬ್ರಹ್ಮನ ಶಿರವ ಕೊಂಡುದನರಿಯಿರೊ !
ಬೊಮ್ಮವಾದಿಗಳೆಲ್ಲ ಲಿಂಗಕ್ಕೆ ದೂರವಾದರು.
ನಮ್ಮ ಕೂಡಲಚೆನ್ನಸಂಗನ ಶರಣರು ಜಗದ್ವಂದ್ಯರಾದರು. |
898.03 |
196 A196 |
ಚೆನ್ನಬಸವಣ್ಣ | ಕೂಡಲಚೆನ್ನಸಂಗ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಹೊನ್ನ ತೂಗಿದ ತ್ರಾಸುಕಟ್ಟಳೆ ಹೊನ್ನಿಂಗೆ ಸರಿಯುಪ್ಪುದೆ?
ಸನ್ನಹಿತರಾದೆವೆಂಬ ನುಡಿಗೆ ನಾಚರು ನೋಡಾ,
ಕನ್ನದಲಿ ಸವೆದ ಕಬ್ಬುನದಂತೆ,
ಮುನ್ನ ಹೋದ ಹಿರಿಯರು ಲಿಂಗದ ಸುದ್ದಿಯನರಿಯರು.
ಇನ್ನಾರು ಬಲ್ಲರು ಹೇಳಾ ಗುಹೇಶ್ವರಾ? |
490.02 |
197 A197 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಬಯಲಬೊಮ್ಮವ ನುಡಿವ,
ಆ ನುಡಿಯ ಬಯಲಭ್ರಮೆಯಲ್ಲಿ ಬಿದ್ದ ಜಡರುಗಳು
ಬಲ್ಲರೆ, ಶಿವನಡಿಗಳ?
ಗುರುಲಿಂಗಜಂಗಮದ ಪಾದೋದಕ ಪ್ರಸಾದವೆಂಬ
ಪರಮಾಮೃತವ ಸವಿದು, ಪರವಶನಾದ ಪರಮಮುಗ್ಧಂಗಲ್ಲದೆ
ಪರವು ಸಾಧ್ಯವಾಗದು,
ಮಹಾಲಿಂಗ ಕಲ್ಲೇಶ್ವರನ ಶರಣ ಪೂರ್ವಾಚಾರಿ ಬಸವಣ್ಣಂಗಲ್ಲದೆ.
|
1157.09 |
198 A198 |
ಹಾವಿನಾಳಕಲ್ಲಯ್ಯ | ಮಹಾಲಿಂಗ ಕಲ್ಲೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಆಧಾರ ಸ್ವಾಧಿಷ್ಠಾನ ಮಣಿಪೂರಕ
ವಿಶುದ್ಧಿ ಆಜ್ಞೇಯವ ನುಡಿದಡೇನು
ಆದಿ ಅನಾದಿಯ ಸುದ್ದಿಯ
ಕೇಳಿದಡೇನು ಹೇಳಿದಡೇನು
ತನ್ನಲ್ಲಿದ್ದುದ ತಾನರಿಯದನ್ನಕ್ಕರ.
ಉನ್ಮನಿಯ ರಭಸದ ಮನ ಪವನದ ಮೇಲೆ ಚೆನ್ನಮಲ್ಲಿಕಾರ್ಜುನಯ್ಯನ
ಭೇದಿಸಲರಿಯರು. |
60.05 |
199 A199 |
ಅಕ್ಕಮಹಾದೇವಿ | ಚೆನ್ನಮಲ್ಲಿಕಾರ್ಜುನ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ನಡೆ ನುಡಿ ಚೈತನ್ಯಹರಣವುಳ್ಳನ್ನಕ್ಕ ಕ್ರೀಯೆಂತಂತೆ ನಡೆವುದು.
ಉರವಣೆ ಬೇಡ ಕಂಡಾ ಮನವೆ.
ಹೂಮಿಡಿ ಹರಿದಡೆ, ಹಣ್ಣಹವೆ, ಎಲೆ ಮರುಳೆ?
ಲಿಂಗದಲ್ಲಿ ಮನ ಲೀಯವಾಗದನ್ನಕ್ಕ ಸಕಳೇಶ್ವರದೇವ ಮೆಚ್ಚುವನೆ? |
439.09 |
200 A200 |
ಸಕಳೇಶಮಾದರಸ | ಸಕಳೇಶ್ವರದೇವ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 11 12 13 14 15 16 17 18 19 20 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 20 ಈ ಪುಟದಲ್ಲಿ ಪಲಿತಾಂಶಗಳು 191 ರಿಂದ 200 ವರೆಗೆ |
|
|