checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಜಂಗಮವೆ ಲಿಂಗವೆನಗೆ, ಜಂಗಮವೆ ಪ್ರಾಣವೆನಗೆ.
ಕೂಡಲಸಂಗಮದೇವಯ್ಯಾ,
ಎನಗೆಯೂ ನಿನಗೆಯೂ ಜಂಗಮಪ್ರಸಾದವೆ ಪ್ರಾಣ.
840.01 251
A251
ಬಸವಣ್ಣ ಕೂಡಲಸಂಗಮದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಹಸಿಯ ಬಿಸಿಲನೆ ಕೊಯ್ದು ಪದಾರ್ಥವ ಮಾಡಿ,
ಉಸಿರ ಎಸರಲ್ಲಿ ಬಾಗುತ್ತಿಪ್ಪರಯ್ಯಾ!
ಇಕ್ಕಲಿಲ್ಲಾರಿಗೆಯು, ಎರೆಯಲಿಲ್ಲಾರಿಗೆಯು
ಭಿಕ್ಷಾವೃತ್ತಿಗಳು ಬಂದು ಬೇಡುತ್ತಿಪ್ಪರಯ್ಯಾ.
ನಿಮ್ಮ ಒಕ್ಕುದ ಮಿಕ್ಕುದ ಉಡಿಯಲ್ಲಿ ಕಟ್ಟಿಕೊಂಡಿಪ್ಪರಯ್ಯಾ.
ಗುಹೇಶ್ವರಾ ನಿಮ್ಮ ಶರಣರು.
250.02 252
A252
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಅಹುದೆಂದರಿಯೆ, ಆಗದೆಂದರಿಯೆ,
ಆದಿಪಥವ ತೋರಲರಿಯೆ,
ಸತ್ಯವನರಿಯೆ, ಸಹಜವನರಿಯೆ,
ಸಜ್ಜನ ಶುದ್ಧವ ಮುನ್ನರಿಯೆ.
ನಿಮ್ಮ ಶರಣರ ಒಕ್ಕುದನುಂಡಿಪ್ಪೆ
ಕೂಡಲಸಂಗಮದೇವಾ
463.01 253
A253
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
«ನ ಗುರೋರಧಿಕಂ, ನ ಗುರೋರಧಿಕಂ,
ನ ಗುರೋರಧಿಕಂ, ನ ಗುರೋರಧಿಕಂ,
ವಿದಿತಂ ವಿದಿತಂ ವಿದಿತಂ ವಿದಿತಂ ಶಿವಶಾಸನತಃ»
ಎಂದು[ದು] ವಚನ.
ಶ್ರೀಗುರು ಮತ್ರ್ಯಕ್ಕೆ ಬಂದು
ಅಷ್ಟಾದಶಜಾತಿಗಳೊಳಗಿದ್ದರೇನು ಮತ್ರ್ಯನೆರಿ ಅಲ್ಲ.
ಸಾಕ್ಷಿಃ ಗುರುದೇವೋ ಮಹಾದೇವೋ ಗುರುದೇವಸ್ಸದಾಶಿವಃ
ಗುರುದೇವಾತ್ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ,
ಲಲಾಟಲೋಚನೇ ಚಾಂದ್ರೀ ಕಲಾಮಪಿ ಚ ದೋದ್ರ್ವಯಂ
ಅಂತರ್ನಿಧಾಯ ವರ್ತೇ[s]ಹಂ ಗುರುರೂಪೋ ಮಹೇಶ್ವರಃ
ಎಂದುದಾಗಿ, ಶಿವನು ಗುರುರೂಪಾಗಿ ವರ್ತಿಸುತ್ತಿರ್ದನು.
ಪರಶಿವೋ ಗುರುಮೂರ್ತಿಃ ಶಿಷ್ಯದೀಕ್ಷಾದಿಕಾರಣಾತ್
ಶಿಷ್ಯಾತೀತಂ ಮಹಾಚೋದ್ಯಂ ಚೋದ್ಯರೂಪಾಯ ವೈ ನಮಃ ಎಂದುದಾಗಿ,
ಶಿಷ್ಯಂಗೆ ದೀಕ್ಷೆಯ ಮಾಡಿ ಕರುಣಿಸಿ ಬಂದ
ಮಹಾಕರುಣಾಮೂರ್ತಿ ಸದಾಶಿವ ತಾನೆ,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
1412.06 254
A254
ಉರಿಲಿಂಗಪೆದ್ದಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಒಮ್ಮೆ ಶ್ರೀಗುರುವಿನ ಚರಣವ ನೆನೆಯಲೊಡನೆ
ಭವಬಂಧನ ಬಿಡುವುದು.
ಗುರುವೇ ಶರಣು ಗುರುಲಿಂಗವೇ ಶರಣು
ಹರಿಬ್ರಹ್ಮಾದಿಗಳಿಗಗೋಚರ ಕೂಡಲಚೆನ್ನಸಂಗನ
ತೋರಿದ ಗುರುವೇ ಶರಣು
27.03 255
A255
ಚೆನ್ನಬಸವಣ್ಣ ಕೂಡಲಚೆನ್ನಸಂಗ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಶ್ರೀಗುರು ಕರುಣಿಸಲೊಡನೆ ಬಿಟ್ಟಿತ್ತು ಮಾಯೆ.
ಶ್ರೀಗುರು ಕರುಣಿಸಲೊಡನೆ ಬಿಟ್ಟಿತ್ತು ಮರವೆ.
ಶ್ರೀಗುರು ಕರುಣಿಸಲೊಡನೆ ಬಿಟ್ಟಿತ್ತು ಪ್ರಪಂಚು.
ಶ್ರೀಗುರು ಕರುಣಿಸಲೊಡನೆ ಬಿಟ್ಟಿತ್ತು ಎನ್ನ ಸುತ್ತಿರ್ದ
ಮಾಯಾಪಾಶ.
ಅದೆಂತೆಂದಡೆ:
``ಗುಶಬ್ದಸ್ತ್ವಂಧಕಾರಃ ಸ್ಯಾತ್ ರುಶಬ್ದಸ್ತು ನಿರೋಧಕಃ
ಅಂಧಕಾರನಿರೋಧತ್ವಾತ್ ಗುರುರಿತ್ಯ್ಕಭಿಧೀಯತೇ||'
ಎಂದುದಾಗಿ, ಇದನರಿದು,
ಕಣ್ಣಿಂಗೆ ಸತ್ತ್ವ ರಜ ತಮವೆಂಬ ತಿಮಿರ ಕವಿದು
ಅಜ್ಞಾನವಶನಾದಲ್ಲಿ
ಸದ್ಗುರುವನುಪಧಾವಿಸಿ ಕಣ್ಗೆ ಔಷಧಿಯ ಬೇಡಲೊಡನೆ
``ಅಜ್ಞಾನತಿಮಿರಾಂಧಸ್ಯ ಜ್ಞಾನಾಂಜನಶಲಾಕಯಾ
ಚಕ್ಷುರುನ್ಮೀಲಿತಂ ಯೇನ ತಸ್ಮೆ ೈ ಶ್ರೀಗುರುವೇ ನಮಃ'
ಎಂದುದಾಗಿ, ಶಿವಜ್ಞಾನವೆಂಬ ಅಂಜನವನೆಚ್ಚಿ,
ಎನ್ನ ಕಣ್ಣ ಮುಸುಂಕಿದ ಅಜ್ಞಾನ ಕಾಳಿಕೆಯ ಬೇರ್ಪಡಿಸಿ
ತನ್ನ ಶ್ರೀಪಾದವನರುಹಿಸಿಕೊಂಡನಯ್ಯಾ,
ಕಪಿಲಸಿದ್ಧಮಲ್ಲಿನಾಥಾ.
1027.04 256
A256
ಸಿದ್ಧರಾಮ ಕಪಿಲಸಿದ್ಧಮಲ್ಲಿನಾಥಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಗುರುವಚನವಲ್ಲದೆ ಲಿಂಗವೆಂದೆನಿಸದು,
ಗುರುವಚನವಲ್ಲದೆ ಜಂಗಮವೆಂದೆನಿಸದು,
ಗುರುವಚನವಲ್ಲದೆ ನಿತ್ಯವೆಂದೆನಿಸದು,
ಗುರುವಚನವಲ್ಲದೆ ನೇಮವೆಂದೆನಿಸದು.
ತಲೆಯಿಲ್ಲದ ಅಟ್ಟೆಗೆ ಪಟ್ಟವ ಕಟ್ಟುವ
ಭಯ ಭ್ರಷ್ಟರ ಮೆಚ್ಚುವನೆ,
ನಮ್ಮ ಕೂಡಲಸಂಗಮದೇವ
72.01 257
A257
ಬಸವಣ್ಣ ಕೂಡಲಸಂಗಮದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಗುರುಕಾರುಣ್ಯವೆ ಸದಾಚಾರ, ಗುರುಕಾರುಣ್ಯವೆ ಸದಾಚಾರ,
ಗುರುಕಾರುಣ್ಯವೆ ಪ್ರಸಾದರುಚಿ.
ಮುಂದೆ ಗುರು, ಹಿಂದೆ ಲಿಂಗ ಕೂಡಲಸಂಗಮದೇವಾ.
1170.01 258
A258
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಗುರು ತನ್ನ ವಿನೋದಕ್ಕೆ ಸ್ಥಾವರವಾದ:
ಗುರುತನ್ನ ವಿನೋದಕ್ಕೆ ಜಂಗಮವಾದ;
ಗುರು ತನ್ನ ವಿನೋದಕ್ಕೆ ಪ್ರಸಾದವಾದ;
ಗುರು ತನ್ನ ವಿನೋದಕ್ಕೆ ಗುರುವಾದ;
ಕೂಡಲಚೆನ್ನಸಂಗಯ್ಯನಲ್ಲಿ ಏಕಾರ್ಥವಾದ
1160.03 259
A259
ಚೆನ್ನಬಸವಣ್ಣ ಕೂಡಲಚೆನ್ನಸಂಗ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ
ನಾದಬಿಂದುಕಲಾತೀತಂ ಗುರುಣಾ ಲಿಂಗಮುದ್ಭವಂ
ಎಂದುನಾಗಿ,
ಸದ್ಗುರುವಿನಿಂದ ಉರಿಲಿಂಗ ಉತ್ಪತ್ತಿ,
ಲಿಂಗದಿಂದವು ಜಂಗಮ ಉತ್ಪತ್ತಿ,
ಜಂಗಮದಿಂದವು ಪ್ರಸಾದೋತ್ಪತ್ತಿ,
ಪ್ರಸಾದದಿಂದವು ಭಕ್ತಿ ಉತ್ಪತ್ತಿ,
ಭಕ್ತಿ ಪ್ರಸಾದದಿಂದವೂ ಸಕಲೋತ್ಪತ್ತಿ.
ಇದು ಕಾರಣ,
ಪ್ರಸಾದವುಳ್ಳವಂಗೆ ಭಕ್ತಿ ಉಂಟು,
ಯುಕ್ತಿಯುಳ್ಳವಂಗೆ ಜಂಗಮ ಉಂಟು,
ಜಂಗಮವುಳ್ಳವಂಗೆ ಲಿಂಗ ಉಂಟು.
ಲಿಂಗವುಳ್ಳವಂಗೆ ಸದ್ಗುರು ಉಂಟು.
ಇದು ಕಾರಣ,
ಸದ್ಗುರುವೇ ಕಾರಣವು
ಗುರುಣಾ ದೀಯತೇ ಲಿಂಗಂ ಗುರುಣಾ ದೀಯತೇ ಕ್ರಿಯಾ
ಗುರುಣಾ ದೀಯತೇ ಮಂತ್ರಂ ಸದ್ಗುರುಸ್ಸರ್ವಕಾರಣಂ
ಎಂದುದಾಗಿ,
ಸದ್ಗುರುವೆ ಸರ್ವಶ್ರೇಷ*ನು,
ಸದ್ಗುರುವೆ ಸರ್ವಪೂಜ್ಯನು, ಸದ್ಗುರುವೆ ಸರ್ವಕಾರಣವಯ್ಯಾ,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
1603.06 260
A260
ಉರಿಲಿಂಗಪೆದ್ದಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  « ಹಿಂದಿನ 1021222324252627282930ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 26 ಈ ಪುಟದಲ್ಲಿ ಪಲಿತಾಂಶಗಳು 251 ರಿಂದ 260 ವರೆಗೆ