ವಚನ ಆಕರಗಳು (15ನೆ ಶತಮಾನ)
ನಾದಬಿಂದುಗಳಿಲ್ಲದಂದು ನಿರ್ಭಯನೆಂಬ
ಗಣೇಶ್ವರನು,
ಉತ್ಪತ್ತಿ ಸ್ಥಿತಿ ಲಯವಿಲ್ಲದಂದು ಅಕ್ಷಯನೆಂಬ ಗಣೇಶ್ವರನು,
ಓದು ವೇದಂಗಳಿಲ್ಲದಂದು ಓಂಕಾರನೆಂಬ ಗಣೇಶ್ವರನು,
ಯುಗಜುಗಂಗಳಿಲ್ಲದಂದು ಊಧ್ರ್ವಮುಖನೆಂಬ ಗಣೇಶ್ವರನು,
ಗುಹೇಶ್ವರಲಿಂಗವಿಲ್ಲದಂದು ನಿರ್ಮಾಯನೆಂಬ ಗಣೇಶ್ವರನು. |
6.02 |
264 C2 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 4
|
ಬ್ರಹ್ಮವಿಷ್ಣುಗಳ ಮಾಯೆ ತೊತ್ತಳದುಳಿವಂದು,
ರುದ್ರಗಣ ಪ್ರಮಥಗಣಂಗಳೆಂಬವರ
ಮಾಯೆ ಮರುಳ್ಮಾಡಿ ಕಾಡುವಂದು,
ನೊಸಲ ಕಣ್ಣು ಪಂಚಮುಖ ದಶಭುಜದವರಿಗೆ
ಮಾಯೆ ಅರ್ಧಾಂಗಿಯಾದಂದು,
ದೇವದಾನವರ ಮಾಯೆ ಅಗಿದಗಿದು ತಿಂಬಂದು,
ಅಷ್ಟಾಶೀತಿಸಹಸ್ರ ಋಷಿಗಳ
ಮಾಯೆ, ತಪೋಮದದಲ್ಲಿ ಕೆಡಹುವಂದು
ನಾನು ಮಾಯಾಕೊಲಾಹಲ (ನಿರ್ಮಾಯನೆಂಬ ಗಣೇಶ್ವರ?)ನಾಗಿರ್ದೆ
ಕಾಣಾ ಗುಹೇಶ್ವರಾ.
|
1404.02 |
265 C3 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 5
|
ಆದಿ ಸ್ವಯಂಭುವಿಲ್ಲದ ಮುನ್ನ, ಸಂಗನಿಸ್ಸಂಗವಿಲ್ಲದ ಮುನ್ನ,
ನಕ್ಷತ್ರಗ್ರಹಂಗಳಿಲ್ಲದ ಮುನ್ನ, ಯೋಗ ಕರಣಂಗಳಿಲ್ಲದ ಮುನ್ನ,
ಖೇಚರ ಭೂಚರರಿಲ್ಲದ ಮುನ್ನ, ಆರಾರೂ ಇಲ್ಲದ ಮುನ್ನ,
ಆಕಾಶ ಮಾರುತರಿಲ್ಲದ ಮುನ್ನ, ಅಂಬುಧಿ ಕಮಠರಿಲ್ಲದ ಮುನ್ನ_
ಹರಿಬ್ರಹ್ಮಾದಿಗಳಾರ ನಿಲವಿಲ್ಲದ ಮುನ್ನ
ಹಿಮಕರದಿನಕರ ಸುಳುಹಿಲ್ಲದ ಮುನ್ನ_
ಹಿಂದಿಲ್ಲ ಮುಂದಿಲ್ಲ ಒಂದೂ ಇಲ್ಲದ ಮುನ್ನ,
ಗುಹೇಶ್ವರನಿರ್ದ ತನ್ನ ತಾನರಿಯದಂತೆ
|
901.02 |
266 B7 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
|
|
ಶಿವನೆ ಜಗತ್ರಯಕ್ಕೊಡೆಯನೆಂದುದು ವೇದ,
ಉತ್ಪತ್ತಿ ಸ್ಥಿತಿ ಲಯಕಾರಣನೆಂದುದು ವೇದ,
`ಈಶಃ ಸರ್ವಸ್ಯ ಜಗತಃ ಪ್ರಭುಃ ಪ್ರೀಣಾತಿ ವಿಶ್ವಭುಕ್' ಎಂದುದು ಶ್ರುತಿ
ಇದು ಕಾರಣ,
ಕೂಡಲಸಂಗಮದೇವನೊಬ್ಬನೆ ದೇವನು. |
1362.01 |
267 A261 |
ಬಸವಣ್ಣ | ಕೂಡಲಸಂಗಮದೇವ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ವಿಭೂತಿ, ಆವ ಭೂಷಣದೊಳಗು ?
ಪುಲಿಯ ಚರ್ಮ ಆವ ವಸ್ತ್ರದೊಳಗು ?
ಖಟ್ಟಾಂಗ ಆವ ಆಯುಧದೊಳಗು ?
ನೀ ಇಡುವುದು ಇಂತುಟು ನೀ ಹೊದೆವುದು ಇಂತುಟು
ನೀ ಹಿಡಿವುದು ಇಂತುಟು,
ನೀ ಕೊಡುವುದು ಇಂದ್ರಪದವಿ ಗುಹೇಶ್ವರಾ. |
1526.02 |
268 A262 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
| ಏನೆಂದೂ ಎನಲಿಲ್ಲ; ನುಡಿದು ಹೇಳಲಿಕ್ಕಿಲ್ಲ.
ನಿಜದಲ್ಲಿ ನಿಂದ ಬೆರಗ ಕುರುಹ ಹರಿವುದೆ ಮರುಳೆ?
ಹರಿದು ಹತ್ತುವುದೆ ಮರುಳೆ ಬಯಲು?
ಅದು ತನ್ನಲ್ಲಿ ತಾನಾದ ಬಯಲು; ತಾನಾದ ಘನವು.
ಇನ್ನೇನನರಸಲಿಲ್ಲ.
ಅದು ಮುನ್ನವೆ ತಾನಿಲ್ಲ.
ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ. |
440.07 |
269 B3 |
ಘಟ್ಟಿವಾಳಯ್ಯ | ಚಿಕ್ಕಯ್ಯಪ್ರಿಯ ಸಿದ್ಧಲಿಂಗ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 7‖03
|
| ಆದಿ ಅನಾದಿಯಿಲ್ಲದಂದು, ಸಾಧ್ಯ ಅಸಾಧ್ಯವಿಲ್ಲದಂದು,
ಸ್ಥೂಲ ಸೂಕ್ಷ್ಮವೆಂಬ ಮೂರ್ತಿಗಳಿಲ್ಲದಂದು,
ಸಾಕಾರ ನಿರಾಕಾರವೆಂಬ ವಾಕು ಹುಟ್ಟದಂದು,
ಶಂಕರ ಶಶಿಧರ ಈಶ್ವರನೆಂಬ ಗಣಾಧೀಶ್ವರರಿಲ್ಲದಂದು,
ಉಮೆಯ ಕಲ್ಯಾಣವಿಲ್ಲದಂದು,
ಶಿವರತಿ ಮಹಾರತಿ ಬಸವಣ್ಣನಿಂದಾಯಿತ್ತು.
ಸರ್ವವಿಸ್ತೀರ್ಣವ ನೀಕರಿಸಿ ಶಿವಲಿಂಗಾರ್ಚನೆಯ ತೋರಿದ.
ನಿತ್ಯಲಿಂರ್ಗಾಚನೆಯಲ್ಲಿ ಪ್ರಸಾದಧ್ಯಾನ,
ಜಂಗಮಾರ್ಚನೆಯಲ್ಲಿ ಪ್ರಸಾದಭೋಗ
ಎಂಬುದನು ಸಂಗನಬಸವಣ್ಣನಲ್ಲದೆ ಮತ್ತಾರೂ ಅರಿಯರು.
ಭಕ್ತಿಯ ಕುಳಸ್ಥಳವನೂ ಭಕ್ತಿಯ ಸಾರಾಯವನೂ
ಮುನ್ನವೆ ಅತಿರಥ ಸಮರಥರೆಲ್ಲರೂ ಅರಿಯರು.
ನಿಮ್ಮ ಬಸವಣ್ಣನಿಂತಹ ಸ್ವತಂತ್ರನಯ್ಯಾ, ಕಲಿದೇವರದೇವ. |
498.08 |
270 B4 |
ಮಡಿವಾಳಮಾಚಿದೇವ | ಕಲಿದೇವರ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 8‖06
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 21 22 23 24 25 26 27 28 29 30 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 27 ಈ ಪುಟದಲ್ಲಿ ಪಲಿತಾಂಶಗಳು 261 ರಿಂದ 270 ವರೆಗೆ |
|
|