checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಇಂದಿಂಗೆಂತು ನಾಳಿಂಗೆಂತು ಎಂದು
ಬೆಂದ ಒಡಲ ಹೊರೆಯ ಹೋಯಿತ್ತೆನ್ನ ಸಂಸಾರ !
ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲ
ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲ .
ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ
ಕೊಂದುದಯ್ಯಾ ಈ ಮಾಯೆ ಕೂಡಲಸಂಗಮದೇವಾ
17.01 21
A21
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ತುಪ್ಪದ ಸವಿಗೆ ಅಲಗ ನೆಕ್ಕುವ ಸೊಣಗನಂತೆ ಎನ್ನ ಬಾಳುವೆ.
ಸಂಸಾರಸಂಗವ ಬಿಡದು ನೋಡೆನ್ನ ಮನವು.
ಈ ನಾಯಿತನವ ಮಾಣಿಸು-
ಕೂಡಲಸಂಗಮದೇವಯ್ಯಾ ನಿಮ್ಮ ಧರ್ಮ.
35.01 22
A22
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಸಂಸಾರಸಾಗರದ ತೆರೆ ಕೊಬ್ಬಿ
ಮುಖದ ಮೇಲೆ ಅಲೆವುತ್ತಲಿದೆ
ಸಂಸಾರಸಾಗರ ಉರದುದ್ದವೆ ಹೇಳಾ !
ಸಂಸಾರಸಾಗರ ಕೊರಳುದ್ದವೆ ಹೇಳಾ !
ಸಂಸಾರಸಾಗರ ಶಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ !
ಅಯ್ಯಾ ಅಯ್ಯಾ ಎನ್ನ ಹುಯ್ಯಲ ಕೇಳಯ್ಯಾ
ಕೂಡಲಸಂಗಮದೇವಾ ನಾನೇವೆನೇವೆನಯ್ಯಾ !
8.01 23
A23
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಗುಬ್ಬಿ ಮಲ್ಲಣ್ಣನ ಗಣಭಾಷಿತ ರತ್ನಮಾಲೆ 23
ಆಸೆಯೆಂಬ ಪಾಶದಲ್ಲಿ ಭವಬಂಧನನಾಗಿರ್ದೆನಯ್ಯಾ
ಸಕೃತು ನಿಮ್ಮ ನೆನೆಯಲು ಎನಗೆ ತೆರಹಿಲ್ಲಯ್ಯಾ !
ಕರುಣಾಕರ ಅಭಯಕರ ವರದ
ನೀ ಕರುಣಿಸಯ್ಯಾ.
ಸಂಸಾರಬಂಧನವನು ಮಾಣಿಸಿ ಎನಗೆ ಕೃಪೆಯ ಮಾಡಿ
ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸು
ಭಕ್ತಜನಮನೋವಲ್ಲ ಕೂಡಲಸಂಗಮದೇವಾ.
69.01 24
A24
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಭವಬಂಧನ ಭವಪಾಶವಾದ ಕಾರಣವೇನಯ್ಯಾ
ಹಿಂದಣ ಜನ್ಮದಲ್ಲಿ ಲಿಂಗವ ಮರೆದೆನಾಗಿ
ಹಿಂದಣ ಸಿರಿಯಲ್ಲಿ ಜಂಗಮವ ಮರೆದೆನಾಗಿ.
ಅರಿದಡೀ ಸಂಸಾರವ ಹೊದ್ದಲೀವೆನೆ
ಕೂಡಲಸಂಗಮದೇವಾ
7.01 25
A25
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಲಿಂಗಲೀಲಾವಿಲಾಸ ಚಾರಿತ್ರ 10424
ಶೂಲದ ಮೇಲಣ ವಿಭೋಗವೇನಾದಡೇನೊ ?
ನಾನಾ ವರ್ಣದ ಸಂಸಾರ ಹಾವು ಹಾವಡಿಗನ ಸ್ನೇಹದಂತೆ !
ತನ್ನಾತ್ಮ ತನಗೆ ಹಗೆಯಾದ ಮತ್ತೆ
ಬಿನ್ನಾಣವುಂಟೆ ಮಹಾದಾನಿ ಕೂಡಲಸಂಗಮದೇವಾ
12.01 26
A26
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಲಿಂಗಲೀಲಾವಿಲಾಸ ಚಾರಿತ್ರ 6620
ಎಂದೊ ಸಂಸಾರದ ದಂದುಗ ಹಿಂಗುವುದು ?
ಎಂದೊ ಮನದಲ್ಲಿ ಪರಿಣಾಮವಹುದೆನಗೆಂದೋ ಎಂದೋ ?
ಕೂಡಲಸಂಗಮದೇವಾ
ಇನ್ನೆಂದೋ ಪರಮಸಂತೋಷದಲ್ಲಿಹುದೆನಗೆಂದೋ
22.01 27
A27
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಲಿಂಗಲೀಲಾವಿಲಾಸ ಚಾರಿತ್ರ 10214
ಆ ಜನ್ಮಾಂತರದ ಯೋನಿಗಳೊಳು ಜನಿಸದಾತನೆ ಯೋಗಿ.
ಆ ಯೋಗಿ ಜನ್ಮಾಂತರ ಕಳೆದಹನು ಹೇಗೆಂದಡೆ:
ಶ್ರೀ ಗುರುಕರಪಲ್ಲವದಿಂದ ಬೆಸಲಾಯಿತ್ತಾಗಿ
ನ ಮುಕ್ತಿರ್ನ ಚ ಧರ್ಮಶ್ಚ ನ ಪುಣ್ಯಂ ಚ ನ ಪಾಪಕಂ
ನ ಕರ್ಮಜನ್ಮ ನೇಚ್ಛಾ ವೈ ಗುರೋಃ ಪಾದನಿರೀಕ್ಷಣಾತ್
ಎಂದುದಾಗಿ
ಇಂತು ಯೋನಿಜನ್ಮಾಂತರವ ಕಳೆದ ಶರಣಂಗೆ
ಮತ್ತ
1325.06 28
A28
ಉರಿಲಿಂಗಪೆದ್ದಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಲಿಂಗಲೀಲಾವಿಲಾಸ ಚಾರಿತ್ರ 14772
ಭಾವದಲ್ಲಿ ಗಮನ ಪ್ರಾಣದಲ್ಲಿ ಲೋಭ
ಜಿಹ್ವೆಯಲ್ಲಿ ರುಚಿ ಶ್ರೋತ್ರದಲ್ಲಿ ಕುಶಬ್ದ
ನಾಸಿಕದಲ್ಲಿ ದುರ್ಗಂಧ ನೋಟದಲ್ಲಿ ಕಾಮ ಶಬ್ದದಲ್ಲಿ ವಿರೋಧ
ಇಂಥ ಭವಿಯ ಕಳೆದು ಭಕ್ತನ ಮಾಡಿದ ಪರಿಯೆಂತೆಂದರೆ:
ಕಾಮನ ಸುಟ್ಟ ವಿಭೂತಿಯೂ ಅಲ್ಲ ಜವನ ಸುಟ್ಟ ವಿಭೂತಿಯೂ ಅಲ್ಲ
ತ್ರಿಪುರವ ಸುಟ್ಟ ವಿಭೂತಿಯೂ ಅಲ್ಲ
ಆದಿಯಾ
23.03 29
A29
ಚೆನ್ನಬಸವಣ್ಣ ಕೂಡಲಚೆನ್ನಸಂಗಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಹಲಗೆಯಾರ್ಯನ ಶೂನ್ಯಸಂಪಾದನೆ 304
ಪೂರ್ವಜನ್ಮವ ನಿವೃತ್ತಿಯ ಮಾಡಿ ಶ್ರೀಗುರುಕರಕಮಲದಲ್ಲಿ ಜನಿಸಿದ ಭಕ್ತನ
ಪಂಚಭೌತಿಕದ ತನುವಿನಂತೆ ವರ್ಣಿಸಿ ನುಡಿಯಬಹುದೆ ?
ಉತ್ತಮಾಧವ ತೃಣ ಮೊದಲಾದುವೆಲ್ಲವು
ಜ್ಯೋತಿಯ ಮುಟ್ಟಿ ಜ್ಯೋತಿಯಪ್ಪುವುಕೇಳಿರೆ .
ಜೋತಿರ್ಮಯಲಿಂಗವ ಮುಟ್ಟಿದ ತನು ಕೇವಲಜೋತಿರ್ಮಯಲಿಂಗ.
ಆಧಾರ ಸ್ವಾಧಿಷ್ಠಾನ ಮಣಿಪೂರಕ ಅನ
1347.03 30
A30
ಚೆನ್ನಬಸವಣ್ಣ ಕೂಡಲಚೆನ್ನಸಂಗಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  12345678910ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 3 ಈ ಪುಟದಲ್ಲಿ ಪಲಿತಾಂಶಗಳು 21 ರಿಂದ 30 ವರೆಗೆ