ವಚನ ಆಕರಗಳು (15ನೆ ಶತಮಾನ)
ಅಯ್ಯ ತತ್ತ್ವ ವಿತತ್ತ್ವಗಳಿಲ್ಲದಂದು, ಪ್ರಕೃತಿ ಪುರುಷರಿಲ್ಲದಂದು,
ಜೀವ_ಪರಮರೆಂಬ ಭಾವ ತಲೆದೋರದಂದು, ಏನೂ ಏನೂ ಇಲ್ಲದಂದು
ಬಯಲು ಬಲಿದು ಒಂದು ಬಿಂದುವಾಯಿತ್ತು ನೋಡಾ.
ಆ ಬಿಂದು ಅಕ್ಷರತ್ರಯದ ಗದ್ದುಗೆಯಲ್ಲಿ ಕುಳ್ಳಿರಲು
ಓಂಕಾರ ಉತ್ಪತ್ತಿಯಾಯಿತ್ತು.
ಆ [ಓಂಕಾರದ] ನಾದದಲ್ಲಿ ಮೂರ್ತಿಗೊಂಡನೊಬ್ಬ ಶರಣ.
ಆ ಶರಣನಿಂದಾಯಿತ್ತು ಪ್ರಕೃತಿ, ಆ ಪ್ರಕೃತಿಯಿಂದಾಯಿತ್ತು ಲೋಕ.
ಈ ಲೋಕ ಲೌಕಿಕವನತಿಗಳೆದು ನಿಜದಲ್ಲಿ ನಿವಾಸಿಯಾಗಿಪ್ಪ,
ಗುಹೇಶ್ವರನ ಶರಣ ಚೆನ್ನಬಸವಣ್ಣನ ಘನವನು
ಬಸವಣ್ಣನ ಕೃಪೆಯಿಂದಲರಿದು ನಮೋ ನಮೋ ಎನುತಿರ್ದೆನು. |
785.02 |
292 B27 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 32‖05
|
ಬಯಲು ಮೂರ್ತಿಯಾಗಿ ನಿಂದನೊಬ್ಬ ಶರಣ.
ಆತನ ವಿದ್ಯಾ ಬುದ್ಧಿಯಿಂದ ಹುಟ್ಟಿದಾತ ಬ್ರಹ್ಮ,
ಆತನ ಶಾಂತಿ ಸೈರಣೆಯಿಂದ ಹುಟ್ಟಿದಾತ ವಿಷ್ಣು,
ಆತನ ಕೋಪ ಕ್ರೋಧದಿಂದ ಹುಟ್ಟಿದಾತ ರುದ್ರ,
ಈ ಮೂವರ ಪೀಠವಂತಿರಲಿ,
ಆ ಶರಣನನರಿದು ಶರಣೆನುತ್ತಿದ್ದೆನು,
ಕೂಡಲಚೆನ್ನಸಂಗಮದೇವಾ.
|
3.03 |
294 B29 |
ಚೆನ್ನಬಸವಣ್ಣ | ಕೂಡಲಚೆನ್ನಸಂಗಮದೇವಾ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 34‖07
|
ಸಹಜದಿಂದ ನಿರಾಲಂಬವಾಯಿತ್ತು, ನಿರಾಲಂಬದಿಂದ ನಿರಾಳವಾಯಿತ್ತು.
ನಿರಾಳದಿಂದ ನಿರವಯವಾಯಿತ್ತು, ನಿರವಯದಿಂದ ಅನಾದಿಯಾಗಿತ್ತು.
ಅನಾದಿಯಲ್ಲಿ ಮೂರ್ತಿಯಾದನೊಬ್ಬ ಶರಣ.
ಆ ಶರಣನ ಮೂರ್ತಿಯಿಂದ ಸದಾಶಿವನಾದ,
ಆ ಸದಾಶಿವನ ಮೂರ್ತಿಯಿಂದ ಶಿವನಾದ,
ಆ ಶಿವನ ಮೂರ್ತಿಯಿಂದ ರುದ್ರನಾದ, ಆ ರುದ್ರನ ಮೂರ್ತಿಯಿಂದ ವಿಷ್ಣುವಾದ.
ಆ ವಿಷ್ಣುವಿನ ಮೂರ್ತಿಯಿಂದ ಬ್ರಹ್ಮನಾದ.
ಆ ಬ್ರಹ್ಮನ ಮೂರ್ತಿಯಿಂದಾದವು ಸಕಲ ಜಗತ್ತುಗಳೆಲ್ಲಾ_
ಇವರೆಲ್ಲ ನಮ್ಮ ಗುಹೇಶ್ವರನ ಕರಸ್ಥಲದ ಹಂಗಿನಲ್ಲಿ ಹುಟ್ಟಿ ಬೆಳೆದರು
|
1576.02 |
295 B30 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 35‖08
|
ಆದಿಯಲೊಬ್ಬ ಮೂರ್ತಿಯಾದ, ಆ ಮೂರ್ತಿಯಿಂದ ಸದಾಶಿವನಾದ,
ಆ ಸದಾಶಿವನ ಮೂರ್ತಿಯಿಂದ ಜ್ಞಾನಶಕ್ತಿಯಾದಳು.
ಆ ಸದಾಶಿವಂಗೆಯೂ ಜ್ಞಾನಶಕ್ತಿಯಿಬ್ಬರಿಗೆಯೂ ಶಿವನಾದ,
ಆ ಶಿವಂಗೆ ಇಚ್ಛಾಶಕ್ತಿಯಾದಳು.
ಆ ಶಿವಂಗೆಯೂ ಇಚ್ಛಾಶಕ್ತಿಯಿಬ್ಬರಿಗೆಯೂ ರುದ್ರನಾದ.
ಆ ರುದ್ರಂಗೆ ಕ್ರಿಯಾಶಕ್ತಿಯಾದಳು.
ಆ ರುದ್ರಂಗೆಯೂ ಕ್ರಿಯಾಶಕ್ತಿಯಿಬ್ಬರಿಗೆಯೂ ವಿಷ್ಣುವಾದ.
ಆ ವಿಷ್ಣುವಿಂಗೆ ಮಹಾಲಕ್ಷ್ಮಿಯಾದಳು.
ಆ ವಿಷ್ಣವಿಂಗೆಯೂ ಮಹಾಲಕ್ಷ್ಮಿಯಿಬ್ಬರಿಗೆಯೂ ಬ್ರಹ್ಮನಾದ.
ಆ ಬ್ರಹ್ಮಂಗೆ ಸರಸ್ವತಿಯಾದಳು.
ಆ ಬ್ರಹ್ಮಂಗೆಯೂ ಸರಸ್ವತಿಯರಿಬ್ಬರಿಗೆಯೂ
ನರರು ಸುರರು ದೇವಕಳು ಹೆಣ್ಣು ಗಂಡು
ಸಚರಾಚರಂಗ?ು ಸಹಿತವಾಗಿ ಎಂಬತ್ತುನಾಲ್ಕುಲಕ್ಷ ಜೀವಜಂತುಗಳು,
ತೋರುವ ತೋರಿಕೆಯೆಲ್ಲ ಹುಟ್ಟಿತ್ತು ಕೂಡಲಚೆನ್ನಸಂಗಯ್ಯಾ. |
985.03 |
296 B31 |
ಚೆನ್ನಬಸವಣ್ಣ | ಕೂಡಲಚೆನ್ನಸಂಗಯ್ಯಾ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 36‖09
|
ಹರನ ಕೊರಳಲಿಪ್ಪ ಕರೋಟಿಮಾಲೆಯ
ಶಿರದ ಲಿಖಿತವ ಕಂಡು, ಮರುಳ ತಂಡಗಳು ಓದಿ ನೋಡಲು,
ಇವನಜ ಇವ ಹರಿ ಇವ ಸುರಪತಿ ಇವ ಧರಣೇಂದ್ರ
ಇವನಂತಕನೆಂದು ಹರುಷದಿಂದ ಸರಸವಾಡಿತ ಕಂಡು,
ಹರ ಮುಕುಳಿತನಾಗಿ ನಕ್ಕ, ನಮ್ಮ ಕೂಡಲಸಂಗಮದೇವ. |
538.01 |
297 B32 |
ಬಸವಣ್ಣ | ಕೂಡಲಸಂಗಮದೇವ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 37‖10
|
ಅಯ್ದುದೇ ಬ್ರಹ್ಮನ ಕಪಾಲ ಕರದಲ್ಲಿ,
ಅಯ್ದುದೇ ವಿಷ್ಣುವಿನ ನಯನ ಪಾದದಲ್ಲಿ,
ಅಯ್ದುದೇ ಕಾಮನ ಸುಟ್ಟ ಭಸ್ಮ ಮೈಯ ಮೇಲೆ,
ಮುಖ ಮೂದಲೆಯೇಕಯ್ಯಾ, ಕೂಡಲಸಂಗಮದೇವಾ. |
537.01 |
298 B33 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 37‖11
|
ಅನಾದಿಯ ಮಗನು ಆದಿ, ಆದಿಯ ಮಗನತೀತ,
ಅತೀತನ ಮಗನು ಆಕಾಶ,. ಆಕಾಶನ ಮಗನು ವಾಯು,
ವಾಯುವಿನ ಮಗನಗ್ನಿ, ಅಗ್ನಿಯ ಮಗನು ಅಪ್ಪು,
ಅಪ್ಪುವಿನ ಮಗನು ಪೃಥ್ವಿ.
ಪೃಥ್ವಿಯಿಂದ ಸಕಲ ಜೀವರೆಲ್ಲರು ಉದ್ಭವಿಸಿದರು ಗುಹೇಶ್ವರಾ
|
760.02 |
299 B34 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 38‖12
|
ಏನೆಂದನಲಿಲ್ಲದ ಮಹಾಘನವು
ತನ್ನ ಲೀಲೆಯಿಂದ ತಾನೇ ಸ್ವಯಂಭುಲಿಂಗವಾಯಿತ್ತು!
ಆ ಲಿಂಗದಿಂದಾಯಿತ್ತು ಶಿವಶಕ್ತ್ಯಾತ್ಮಕ,
ಆ ಶಿವಶಕ್ತ್ಯಾತ್ಮಕದಿಂದಾದುದು ಆತ್ಮ,
ಆತ್ಮನಿಂದಾದುದು ಆಕಾಶ,
ಆಕಾಶದಿಂದಾದುದು ವಾಯು,
ವಾಯುವಿನಿಂದಾದುದು ಅಗ್ನಿ,
ಅಗ್ನಿಯಿಂದಾದುದು ಅಪ್ಪು,
ಅಪ್ಪುವಿನಿಂದಾದುದು ಪೃಥ್ವಿ,
ಪೃಥ್ವಿಯಿಂದಾದುದು ಸಕಲ ಜೀವವೆಲ್ಲಾ.
ಇವೆಲ್ಲಾ ನಿಮ್ಮ ನೆನಹುಮಾತ್ರದಿಂದಾದವು
ಸಿಮ್ಮಲಿಗೆಯ ಚೆನ್ನರಾಮಾ. |
573.07 |
300 B35 |
ಚಂದಿಮರಸ | ಸಿಮ್ಮಲಿಗೆಯ ಚೆನ್ನರಾಮಾ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 38‖13
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 21 22 23 24 25 26 27 28 29 30 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 30 ಈ ಪುಟದಲ್ಲಿ ಪಲಿತಾಂಶಗಳು 291 ರಿಂದ 300 ವರೆಗೆ |
|
|