ವಚನ ಆಕರಗಳು (15ನೆ ಶತಮಾನ)
ಕರ್ಮದ ಗಡಣ ಹಿಂಗಿದುವಿಂದು,
ಪಾಪದ ಬಲೆ ಬಳಸಿ ಹೋದವು.
ಬಲ್ಲೆನು ಈ ಸಂಸಾರದಲ್ಲಿ ನೊಂದು ಬೆಂದೆನಾಗಿ,
ಮಾಯೆಯ ತಲೆಯ ಮೆಟ್ಟಿ ಹೋದೆನು.
ಇನ್ನು ಮರಳಿ ಬಾರೆನು ಗುಹೇಶ್ವರಾ ನಿಮ್ಮಾಣೆ |
1062.02 |
321 C10 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 12
|
ನೆಲದ ಬೊಂಬೆಯ ಮಾಡಿ, ಜಲದ ಬಣ್ಣವನುಡಿಸಿ,
ಹಲವು ಪರಿಯಾಶ್ರಿ(ಶ್ರ?)ಮದಲ್ಲಿ ಉಲಿವ ಗೆಜ್ಜೆಯ ಕಟ್ಟಿ
ವಾಯುವನಲನ ಸಂಚಕ್ಕೆ ಅರಳೆಲೆಯ ಶೃಂಗಾರವ ಮಾಡಿ
ಆಡಿಸುವ ಯಂತ್ರವಾಹಕನಾರೊ ?
ಬಯಲ ಕಂಬಕ್ಕೆ ತಂದು ಸಯವೆಂದು ಪರವ ಕಟ್ಟಿದಡೆ
ಸಯವದ್ವಯವಾಯಿತ್ತು_ಏನೆಂಬೆನು ಗುಹೇಶ್ವರಾ ! |
16.02 |
322 C11 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 13
|
ಮಾನವ ತೋರಿಹ ಆವಿಂಗೆ ಕೊಳಗದ ತೋರಿಹ ಕೆಚ್ಚಲು.
ತಾಳುದ್ದ (ತಾಳ ಮರದುದ್ದ ?)ವೆರಡು ಕೋಡು ನೋಡಾ !
ಆದನರಸ ಹೋಗಿ ಆರುದಿನ, ಅದು ಕೆಟ್ಟು ಮೂರುದಿನ !
ಅಘಟಿತ ಘಟಿತ ಗುಹೇಶ್ವರಾ, [ಅರಸುವ ಬಾರೈ]
|
48.02 |
323 C12 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 14
|
ಅಡವಿಯೊಳಗೆ ಕಳ್ಳರು ಕಡವಸಿದ್ಧ (ಕಡವಸದ?) ಸ್ವಾಮಿಯನು
ಹುಡುಕಿ ಹುಡುಕಿ ಅರಸುತ್ತೈದಾರೆ._ಸೊಡರು ನಂದಿ ಕಾಣದೆ !
ಅನ್ನ ಪಾನದ ಹಿರಿಯರೆಲ್ಲರು ತಮ್ಮತಾವರಿಯದೆ,
ಅಧರಪಾನವನುಂಡು ತೇಗಿ, ಸುರಾಪಾನವ ಬೇಡುತ್ತೈದಾರೆ.
ಅರಿದ ಹಾರುವನೊಬ್ಬನು ಅರಿದ ತಲೆಯ ಹಿಡಿದುಕೊಂಡು,
ಆಧ್ಯಾತ್ಮವಿಕಾರದ ನೆತ್ತರ ಕುಡಿದನು ನೋಡಾ ಗುಹೇಶ್ವರಾ. |
33.02 |
324 C13 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 15
|
ಜಂಬೂದ್ವೀಪದ ವ್ಯವಹಾರಿ ಖಂಡ ಭಂಡವ ತುಂಬಿ
ಕುಂಭಿನಿಯುದರದ ಮೇಲೆ
ಪಸರವನಿಕ್ಕಿದ.
ಉಷ್ಣ ತೃಷ್ಣೆ ಘನವಾಗಿ, ಕಡಲೇಳು ಸಮುದ್ರವ ಕುಡಿದು
ನೀರಡಿಸಿದಾತ ಅರಲುಗೊಂಡು ಬೆರಗಾದ.
ಶಿಶು ತಾಯ ಹೆಣನ ಹೊತ್ತುಕೊಂಡು ಹೆಸರ ಹೇಳುತ್ತೈದಾನೆ !
ಗುಹೇಶ್ವರನೆಂಬ ನಿಲವ ವಸುಧೆಯಾಕೃತಿ ನುಂಗಿತ್ತು. |
18.02 |
325 C14 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 16
|
ಗಗನದ ಮೇಲೊಂದು ಅಬ್ಥಿನವ ಗಿಳಿ ಹುಟ್ಟಿ
ಸಯ ಸಂಭ್ರಮದಲ್ಲಿ ಮನೆಯ ಮಾಡಿತ್ತು
ಬ್ರಹ್ಮನಾ ಗಿಳಿಗೆ ಹಂಜರವಾದ, ವಿಷ್ಣು ಆ ಗಿಳಿಗೆ ಕೊರೆವ ಕೂಳಾದ
ರುದ್ರನಾ ಗಿಳಿಗೆ ತಾ ಕೋಳಾದ (ಕೋಳುವೋದ?)
ಇಂತೀ ಮೂವರ ಮುಂದಣ ಕಂದನ ನುಂಗಿ
ದೃಷ್ಟನಾಮ ನಷ್ಟವಾಯಿತ್ತು_ಇದೆಂತೊ ಗುಹೇಶ್ವರಾ? |
15.02 |
326 C15 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 59‖08 ಮಹದೇವಯ್ಯನ ಶೂನ್ಯಸಂಪಾದನೆ 17
|
ರಕ್ಕಸಿಗಿಬ್ಬರು ಮಕ್ಕಳು, ತೊಟ್ಟಿಲ ಮೇಲೈವರು,
ರಕ್ಕಸಿ ಬಾಣತಿಯಾದಡೆ ಮಕ್ಕಳಿಗಿನ್ನೆಂತೊ!
ತೊಟ್ಟಿಲ ತೂಗುವೆ ಜೋಗುಳವಾಡುವೆ
ರಕ್ಕಸಿಬಾಣತಿಯ ತೊಟ್ಟಿಲು ನುಂಗಿತ್ತು_ಇದೇನು ಹೇಳಾ ಗುಹೇಶ್ವರಾ? |
14.02 |
327 C16 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 18
|
ಆಡಂಬರದೊಳಗಾಡಂಬರವಿದೇನೊ?
ಹಾರಿತ್ತು ಬ್ರಹ್ಮನೋಲಗ, ಕೆದರಿತ್ತಿದೇನಯ್ಯಾ?
`ಸಾರು ಸಾರು' ಎನ್ನುತ್ತ ವಿಷ್ಣು ಅಜರ ನುಂಗಿ
ರುದ್ರಯೋನಿಯೊಳಡಗಿತ್ತಿದೇನೊ!
ಬೇರಿಲ್ಲದ ಮರ, ನೀರಿಲ್ಲದ ನೆಳಲೊಳಗೆ
ತೋರಿದ ಪ್ರತಿಬಿಂಬವ ನಾನೇನೆಂಬೆನು ಗುಹೇಶ್ವರಾ |
24.02 |
328 C17 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 19
|
ಕೋಣನ ಕೊಂಬಿನ ತುದಿಯಲ್ಲಿ, ಏಳುನೂರೆಪ್ಪತ್ತು ಸೇದೆಯ ಬಾವಿ.
ಬಾವಿಯೊಳಗೊಂದು ಬಗರಿಗೆ, ಬಗರಿಗೆಯೊಳಗೊಬ್ಬ ಸೂಳೆ ನೋಡಯ್ಯಾ.
ಆ ಸೂಳೆಯ ಕೊರಳಲ್ಲಿ ಏಳುನೂರೆಪ್ಪತ್ತು
ಆನೆ ನೇರಿತ್ತ ಕಂಡೆ ಗುಹೇಶ್ವರಾ. |
38.02 |
329 C18 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 20
|
ಪಂಚಾಶತ್ಕೋಟಿ ಭೂಮಂಡಲವನು,
ಒಂದು ತಲೆಯಿಲ್ಲದ ಮುಂಡ ನುಂಗಿತ್ತ ಕಂಡೆನು.
ತಲೆಯಿಲ್ಲದೆ ಕಂಡು ಬೆರಗಾದೆನು
ನವಖಂಡ ಮಂಡಲ ಭಿನ್ನವಾದಂದು
ಆ ತಲೆಯ ಕಂಡವರುಂಟೆ ಗುಹೇಶ್ವರಾ? |
29.02 |
330 C19 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 21
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 31 32 33 34 35 36 37 38 39 40 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 33 ಈ ಪುಟದಲ್ಲಿ ಪಲಿತಾಂಶಗಳು 321 ರಿಂದ 330 ವರೆಗೆ |
|
|