ವಚನ ಆಕರಗಳು (15ನೆ ಶತಮಾನ)
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದಡೆ,
ಎನಗಿದು ಸೋಜಿಗ, ಎನಗಿದು ಸೋಜಿಗ !
ಅಹುದೆನಲಮ್ಮೆನು, ಅಲ್ಲೆನಲಮ್ಮೆನು,
ಗುಹೇಶ್ವರಲಿಂಗವು ನಿರಾಳ ನಿರಾಕಾರ ಬಯಲು ಆಕಾರವಾದಡೆ ! |
60.02 |
361 C50 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 52
|
ತನು ತರತರಂಬೋಗಿ, ಮನವು ನಿಮ್ಮಲ್ಲಿ ಸಿಲುಕಿತ್ತಯ್ಯಾ.
ನೋಟವೇ ಪ್ರಾಣವಾಗಿ ಅಪ್ಯಾಯನ ನಿಮ್ಮಲ್ಲಿ ಆರತುದಯ್ಯಾ.
ಸಿಲುಕಿತ್ತು ಶೂನ್ಯದೊಳಗೆ, ಗುಹೇಶ್ವರಾ ನಿರಾಳವಯ್ಯಾ ! |
100.02 |
362 C51 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 53
|
ನಿಮ್ಮ ನೋಡುವ ಸುಖ ಉಳ್ಳನ್ನಕ್ಕರ, ಬೆರಸಲೆಲ್ಲಿಯದಯ್ಯಾ?
ನಿಮ್ಮ ಬೆರಸುವ ತವಕ ಉಳ್ಳನ್ನಕ್ಕ ನೋಟ ಹಿಂಗದು!
ನೋಡಿ ಕೂಡಿ ಸೈವೆರಗಾದ ಸುಖವನು
ಏನೆಂದುಪಮಿಸುವೆನಯ್ಯಾ ಗುಹೇಶ್ವರಾ? |
1303.02 |
363 C52 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 54
|
ಪ್ರಣತೆಯೂ ಇದೆ ಬತ್ತಿಯೂ ಇದೆ;
ಜ್ಯೋತಿಯ ಬೆಳಗುವಡೆ,
ತೈಲವಿಲ್ಲದೆ ಪ್ರಭೆ ತಾನೆಲ್ಲಿಯದೊ?
ಗುರುವಿದೆ ಲಿಂಗವಿದೆ; ಶಿಷ್ಯನ ಸುಜ್ಞಾನ
ಅಂಕುರಿಸದನ್ನಕ್ಕರ
ಭಕ್ತಿ ಎಲ್ಲಿಯದೊ?
`ಸ್ಯೋಹಂ' ಎಂಬುದಕ್ಕೆ ದಾಸೋಹವ ಮಾಡದಿರ್ದಡೆ
ಅತಿಗಳೆವೆ ನೋಡಾ ಗುಹೇಶ್ವರಾ. |
78.02 |
364 C53 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 55
|
ಮುಂದು ಜಾವದಲೆದ್ದು, ಲಿಂಗದಂಘ್ರಿಯ ಮುಟ್ಟಿ,
ಸುಪ್ರಭಾತ ಸಮಯದಲ್ಲಿ ಶಿವಭಕ್ತರ ಮುಖವ
ನೋಡುವುದು.
ಹುಟ್ಟಿದುದಕ್ಕೆ ಇದೇ ಸಫಲ ನೋಡಾ,
ಸತ್ಯವಚನವಿಂತೆಂದುದು_ಇವಿಲ್ಲದವರ ನಾನೊಲ್ಲೆ ಕಾಣಾ ಗುಹೇಶ್ವರಾ. |
88.02 |
365 C54 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 56
|
ಅನ್ಯ ರಜವ ಸೋಂಕದೆ, ತನ್ನ ರಜವ ಬಾಧಿಸದೆ,
ರವಿಯ ಬೆಳಸ ಬಳಸದೆ ಲಿಂಗದಲ್ಲಿ ಬೆಳೆದ ಬೆಳಸ
ತಂದು,
ಜಂಗಮದಲ್ಲಿ ಸವೆಸುತಿಪ್ಪ[ನು] ಲಿಂಗಭಕ್ತ.
ಆ ಭಕ್ತನಲ್ಲಿ ಗುಹೇಶ್ವರಲಿಂಗನಿಪ್ಪನು. |
137.02 |
366 C55 |
ಅಲ್ಲಮ | ಗುಹೇಶ್ವರಲಿಂಗ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 57
|
ಭಕ್ತ ಭಕ್ತನೆಂಬರು,
ಪೃಥ್ವಿಯ ಪೂರ್ವಾಶ್ರಯವ ಕಳೆಯನಲರಿಯಫದನ್ನಕ್ಕ,
ಅಪ್ಪುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,
ತೇಜದ ಪೂರ್ವಾಶ್ರಯವ
ಕಳೆಯಲರಿಯದನ್ನಕ್ಕ,
ವಾಯುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,
ಆಕಾಶದ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,
ಸೋಮಸೂರ್ಯರ ಕಳೆಗಳ ಪೂರ್ವಾಶ್ರಯವ
ಕಳೆಯಲರಿಯದನ್ನಕ್ಕ,
ಆತ್ಮನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,_
ಭಕ್ತರೆಂದು ಲಿಂಗವ ಪೂಜಿಸುವವರ ಕಂಡು
ನಾನು ಬೆರಗಾದೆ ಗುಹೇಶ್ವರಾ. |
136.02 |
367 C56 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 59
|
ಹರಿದು ಹತ್ತಿ ಮುಟ್ಟಿ ಹಿಡಿದೆಹೆವೆಂದು
ಜಾರಿ ಉರುಳಿ ಬಿದ್ದರು ಅನಂತರು.
ಹಿಡಿದವರೆಲ್ಲ ಹೆಣನುಂಡು ಹೋದರು.
ನಾ ಹಿಡಿದ ಬಂಡಿ(ಬಂದಿ?)
ಒಡಬಂಡಿ(ಒಡಬಂದಿ?)ಯಾಯಿತ್ತು ಗುಹೇಶ್ವರಾ. |
476.02 |
368 C57 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 60
|
ಅಷ್ಟವಿಧಾರ್ಚನೆ ಷೋಡಶೋಪಚಾರಂಗಳ
ಹಂಗು ಹರಿಯಿಲ್ಲದೆ ಮಾಡುವೆನು.
ನಾ ಮಾಡುವ ಕ್ರೀಗಳೆಲ್ಲವು ನೀವೆಯಾದ ಕಾರಣ
ಗುಹೇಶ್ವರಾ ನಿಮ್ಮಲ್ಲಿ ತದ್ಗತವಾಗಿದ್ದೆನು.
|
850.02 |
369 C58 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 61
|
ತ್ರಿವಿಧದ ನಿತ್ಯವ, ತ್ರಿವಿಧದ ಅನಿತ್ಯವ ಬಲ್ಲವರಾರೊ?
ತ್ರಿವಿಧಕ್ಕೆ ತ್ರಿವಿಧವನಿತ್ತು ತ್ರಿವಿಧ ಪ್ರಸಾದವ ಕೊಳ್ಳಬಲ್ಲಡೆ;
ಆತನು ತ್ರಿವಿಧನಾಥನೆಂಬೆನು, ಆತನು ವೀರನೆಂಬೆನು.
ಆತನು ಧೀರನೆಂಬೆನು,
ಆತನು ಗುಹೇಶ್ವರಲಿಂಗದಲ್ಲಿ ಅಚ್ಚಪ್ರಸಾದಿಯೆಂಬೆನು. |
138.02 |
370 C59 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 62
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 31 32 33 34 35 36 37 38 39 40 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 37 ಈ ಪುಟದಲ್ಲಿ ಪಲಿತಾಂಶಗಳು 361 ರಿಂದ 370 ವರೆಗೆ |
|
|