ವಚನ ಆಕರಗಳು (15ನೆ ಶತಮಾನ)
ಆರೆಂದು ಕುರುಹ ಬೆಸಗೊಳಲು, ಏನೆಂದು ಹೇಳುವೆನಯ್ಯಾ?
ಕಾಯದೊಳಗೆ ಮಾಯವಿಲ್ಲ;
ಭಾವದೊಳಗೆ ಭ್ರಮೆಯಿಲ್ಲ.
ಕರೆದು ಬೆಸಗೊಂಬಡೆ ಕುರುಹಿಲ್ಲ.
ಒಬ್ಬರಿಗೂ ಹುಟ್ಟದೆ, ಅಯೋನಿಯಲ್ಲಿ ಬಂದು
ನಿರ್ಬುದ್ಧಿಯಾದವಳನೇನೆಂಬೆನಣ್ಣಾ?
ತಲೆಯಳಿದು ನೆಲೆಗೆಟ್ಟು ಬೆಳಗುವ ಜ್ಯೋತಿ
ಎನ್ನ ಅಜಗಣ್ಣತಂದೆಯ ಬೆನ್ನಬಳಿಯವಳಾನಯ್ಯಾ. |
1104.05 |
391 C80 |
ಮುಕ್ತಾಯಕ್ಕ | ಅಜಗಣ್ಣತಂದೆ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 83
|
ಕಾಣದುದ ಕಂಡೆ, ಕೇಳದುದ ಕೇಳಿದೆ_
ಮುಟ್ಟಬಾರದುದ ಮುಟ್ಟಿದ, ಅಸಾಧ್ಯವ ಸಾಧಿಸಿದ,
ತಲೆಗೆಟ್ಟುದ ತಲೆವಿಡಿದ, ನೆಲೆಗೆಟ್ಟುದ ನಿರ್ಧರಿಸಿದ.
ಗುಹೇಶ್ವರಾ ನಿಮ್ಮ ಶರಣ ಅಜಗಣ್ಣಂಗೆ
ಶರಣೆಂದು ಶುದ್ಧನಾದೆನು. |
1072.02 |
392 C81 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 84
|
ಶರಣು ಶರಣಾರ್ಥಿ ಎಲೆ ತಾಯೆ,
ಧರೆಯಾಕಾಶ ಮನೆಗಟ್ಟದಂದು
ಹರಿವ ಅನಿಲ ಅಗ್ನಿ ಜಲ ಮೊಳೆದೋರದಂದು ಹುಟ್ಟಿದಳೆಮ್ಮವ್ವೆ!
ಅದಕ್ಕೆ ಮುನ್ನವೆ ಹುಟ್ಟದೆ ಬೆಳೆದನೆಮ್ಮಯ್ಯ.
ಈ ಇಬ್ಬರ ಬಸಿರಲ್ಲಿ ಬಂದೆ ನಾನು!
ಎಮ್ಮ(ನ್ನ?) ತಂಗಿಯರೈವರು ಮೊರೆಗೆಟ್ಟು ಹೆಂಡಿರಾದರೆನಗೆ!
ಕಾಮಬಾಣ ತಾಗದೆ ಅವರ ಸಂಗವ ಮಾಡಿದೆನು.
ನಾ ನಿಮ್ಮ ಭಾವ ಅಲ್ಲಯ್ಯನು,
ನೀನೆನಗೆ ನಗೆವೆಣ್ಣು
ನಮ್ಮ ಗುಹೇಶ್ವರನ ಕೈವಿಡಿದು ಪರಮಸುಖಿಯಾಗಿ,
ಕಳವಳದ ಕಂದೆರವೆಯೇನು ಹೇಳಾ ? |
1540.02 |
393 C82 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 85
|
| ದೇವ ದೇವ ಶರಣು ಶರಣಾರ್ಥಿ, ಅವಧರಿಸಯ್ಯಾ.
ಕೇಳಿದ ಸುಖ ಕಿವಿಗೆ ಬೇಟವಾಯಿತ್ತು.
ಕಿವಿಗಳ ಬೇಟ ಕಂಗಳಮುಂದೆ ಮೂರ್ತಿಗೊಂಡಿತ್ತು.
ಕಂಗಳಮುಂದೆ ಕಂಡ ಸುಖವು ಮನಕ್ಕೆ ವೇದ್ಯವಾಯಿತ್ತು.
ಶಿವಶರಣರ ದರುಶನದ ಸುಖವನೇನೆಂದೆನಬಹುದು ?
ಮದವಳಿದು ಮಹವನೊಡಗೂಡಿದ ಎನ್ನ ಅಜಗಣ್ಣನನಗಲಿದ ದುಃಖ
ನಿಮ್ಮ ಸಂಗದಲ್ಲಿ ಸಯವಾಯಿತ್ತು ಕಾಣಾ ಪ್ರಭುವೆ. |
1119.05 |
394 C83 |
ಮುಕ್ತಾಯಕ್ಕ | ಅಜಗಣ್ಣ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 86
|
ಅರಿವರತು ಮರಹುಗೆಟ್ಟು ತನ್ನಲ್ಲಿ ತಾನು ಸನ್ನಹಿತನಾದವಂಗೆ
ದುಃಖಿಸುವರೆ ಹೇಳಾ? ಶೋಕಿಸುವರೆ ಹೇಳಾ?
ಒಡಲಿಲ್ಲದಾತಂಗೆ ಎಡೆಯಲೊಂದು ಅಳಿವುಂಟೆಂದು
ನುಡಿದು ಹೇಳುವ ಮಾತು ಭ್ರಾಂತು ನೋಡಾ!
ಎರಡಿಲ್ಲದ ಐಕ್ಯಂಗೆ ಒಳಹೊರಗಿಲ್ಲ ನೋಡಾ,
ಗುಹೇಶ್ವರನ ಶರಣ ಅಜಗಣ್ಣಂಗೆ!
|
834.02 |
395 C84 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 87
|
ಅಂಬರದಲಾಡುವ ತುಂಬಿಯ ಬಿಂಬದ ಕಂಬನಿಯೊಳಗಣ ರತ್ನದ
ಬಯಕೆಯಾದ್ಯಂತವನೇನೆಂಬೆನಯ್ಯಾ?
ವೇದ ಶಾಸ್ತ್ರ ಶ್ರುತಿ ಸ್ಮೃತಿಗಳು ಸ್ತುತಿಸಲರಿಯವು.
ನಾದವಲ್ಲ, ಸುನಾದದ ನಿಲವಲ್ಲ
ಭೇದಿಸುವಡೆ ಅಗಮ್ಯ ನೋಡಾ!
ಸೊಲ್ಲಿಲ್ಲದ ಸೊಮ್ಮಿಲ್ಲದ ಘನವನೇನೆಂಬೆನು?
ಎಂತು ಮರೆವೆನಯ್ಯಾ ಎನ್ನ ಅಜಗಣ್ಣ ತಂದೆಯನು? |
1098.05 |
396 C85 |
ಮುಕ್ತಾಯಕ್ಕ | ಅಜಗಣ್ಣ ತಂದೆ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 88
|
ಕಂಡೆನೆಂಬುದು ಕಂಗಳ ಮರವೆ,
ಕಾಣೆನೆಂಬುದು ಮನದ ಮರವೆ,
ಕೂಡಿದೆನೆಂಬುದು ಅರುಹಿನ ಮರವೆ,
ಅಗಲಿದೆನೆಂಬುದು ಮರಹಿನ ಮರವೆ.
ಇಂತು_ಕಂಡೆ ಕಾಣೆ ಕೂಡಿದೆ ಅಗಲಿದೆ ಎಂಬ,
ಭ್ರಾಂತಿಸೂತಕವಳಿದು ನೋಡಲು
ಗುಹೇಶ್ವರಲಿಂಗವನಗಲಲೆಡೆಯಿಲ್ಲ ಕೇಳಾ, ಎಲೆ ತಾಯೆ |
1039.02 |
397 C86 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 89
|
ನೀರಬೊಂಬೆಗೆ ನಿರಾಳದ ಗೆಜ್ಜೆಯ ಕಟ್ಟಿ,
ಬಯಲಬೊಂಬೆಯ ಕೈಯಲ್ಲಿ ಕೊಟ್ಟು ಮುದ್ದಾಡಿಸುತ್ತಿರ್ದನಯ್ಯಾ.
ಕರ್ಪೂರದ ಪುತ್ಥಳಿಗೆ ಅಗ್ನಿಯ ಸಿಂಹಾಸನವನಿಕ್ಕಿ,
ಅಗ್ನಿ ಕರಗಿ ಕರ್ಪೂರ ಉಳಿದುದಕ್ಕೆ ಬೆರಗಾದೆನಯ್ಯಾ, ಎನ್ನ ಅಜಗಣ್ಣನ
ಯೋಗಕ್ಕೆ. |
1121.05 |
398 C87 |
ಮುಕ್ತಾಯಕ್ಕ | ಅಜಗಣ್ಣ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 90
|
ಅಳಿವನಲ್ಲ ಉಳವನಲ್ಲ ಘನಕ್ಕೆ ಗಮನನಲ್ಲ ಮನಕ್ಕೆ ಸಾಧ್ಯನಲ್ಲ
ತನ್ನ ತಪ್ಪಿಸಿ ಇದಿರನೊಪ್ಪಿಸಿಹೆನೆಂಬ ಭಿನ್ನಭಾವಿಯಲ್ಲ, ಗುಹೇಶ್ವರನ ಶರಣ.
ಅಜಗಣ್ಣನ ಅಂತಿಂತೆನಬಾರದು ಕೇಳಾ ತಾಯೆ. |
857.02 |
399 C88 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 91
|
ತನುವಿಡಿದನಾಗಿ ಅನುವನರಿಯದೆ ಕೆಟ್ಟೆನು.
ಮನವಿಡಿದೆನಾಗಿ ಅರಿವು ಉಳಿಯದೆ ಕೆಟ್ಟೆನು.
ಭಾವದ ಬಯಕೆ ಹಿಂಗದಾಗಿ ವಿಯೋಗಿಯಾಗಿ ಕೆಟ್ಟೆನು.
ಅರಿವ ನುಡಿದು ಮರಹಿಗೊಳಗಾದೆನು.
ಎನ್ನ ಕಾಣದೆ ಭಿನ್ನಜ್ಞಾನಿಯಾದೆನು.
ಅಜಗಣ್ಣನೆಂಬ ಮಹಿಮನು ಘನವೇದ್ಯನಾಗಿ
ಎನ್ನ ಮತಿಗೆ ಮರವೆಯ ಮಾಡಿಹೋದನು. |
1116.05 |
400 C89 |
ಮುಕ್ತಾಯಕ್ಕ | ಅಜಗಣ್ಣ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 92
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 31 32 33 34 35 36 37 38 39 40 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 40 ಈ ಪುಟದಲ್ಲಿ ಪಲಿತಾಂಶಗಳು 391 ರಿಂದ 400 ವರೆಗೆ |
|
|