checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಮಾತೆಂಬುದು ಜ್ಯೋತಿರ್ಲಿಂಗ, ಸ್ವರವೆಂಬುದು ಪರತತ್ವ;
ತಾಳೋಷ* ಸಂಪುಟವೆಂಬುದು ನಾದಬಿಂದುಕಳಾತೀತ.
ಗುಹೇಶ್ವರನ ಶರಣರು
ನುಡಿದು ಸೂತಕಿಗಳಲ್ಲ ಕೇಳಾ ಮರುಳೆ
1463.02 411
C100
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 103
ನಡೆದು ನಡೆದು ನಡೆಯ ಕಂಡವರು
ನುಡಿದು ನುಡಿದು ಹೇಳುತ್ತಿಹರೆ?
ನುಡಿದು ನುಡಿದು ಹೇಳುವನ್ನಕ್ಕರ
ನಡೆದುದೆಲ್ಲಾ ಹುಸಿಯೆಂಬೆನು.
ಮಾತಿನ ಮಥನದಿಂದಾದ ಅರಿವು
ಕರಣ ಮಥನದಿಂದಾದುದಲ್ಲದೆ,
ಅನುಪಮ ಸ್ವರಭೇದವಾದ ಪರಿ ಎಂತು ಹೇಳಾ?
ಇದಿರ ಗೆಲಬೇಕೆಂದು ನುಡಿದುಕೊಂಡಡೇನು,
ಮನಕ್ಕೆ ಮನವೆ ಸಾಕ್ಷಿಯಾಗಿ ನಿಃಪತಿಯಲ್ಲ ನೋಡಾ?
ಎನ್ನ ಅಜಗಣ್ಣತಂದೆ ಶಬುದಕ್ಕೆ ಹೇಸಿ ಮುಗುದನಾದನು.
1120.05 412
C101
ಮುಕ್ತಾಯಕ್ಕ ಅಜಗಣ್ಣ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 104
ತನ್ನ ತಾನರಿದಡೆ ನುಡಿಯೆಲ್ಲ ತತ್ವ ನೋಡಾ!
ತನ್ನ ತಾ ಮರೆದಡೆ ನುಡಿಯೆಲ್ಲ ಮಾಯೆ ನೋಡಾ!
ಅರಿದು ಮರೆದ ಶಿವಯೋಗಿಯ ಶಬ್ದವೆಲ್ಲವು
ಉಪದೇಶವಲ್ಲದೆ ಭಿನ್ನವುಂಟೆ?
ನಿನ್ನ ಮನದ ಕಳವಳವ ತಿಳುಹಲೆಂದು ಮಾತನಾಡಿಸಿ ನೋಡಿದಡೆ,
ಎನ್ನ ಮನದೊಳಗೆ ಕಂದು ಕಲೆ ಎಂಬುದಿಲ್ಲ ನೋಡಾ!
ನಮ್ಮ ಗುಹೇಶ್ವರಲಿಂಗಕ್ಕೆ ನೀನು ಕರುಣದ ಶಿಶುವಾದ ಕಾರಣ
ಬಾಯ್ದೆಗೆದೆನಲ್ಲದೆ, ಭಿನ್ನವುಂಟೆ ಹೇಳಾ ಮರುಳೆ?
1219.02 413
C102
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 105
ನುಡಿಯ ಹಂಗಿನ್ನೂ ನಿಮಗೆ ಹಿಂಗದು,
ನಡೆಯನೆಂತು ಪರರಿಗೆ ಹೇಳುವಿರಿ?
ಒಡಲ ಹಂಗಿನ ಸುಳುಹು ಬಿಡದು;
ಎನ್ನೊಡನೆ ಮತ್ತೇತರ ಅನುಭವವಣ್ಣಾ?
ತಾನಾದಲ್ಲದೆ ಇದಿರಿಂಗೆ ಹೇಳಬಹುದೆ?
ಅರಿವ ತೋರಬಲ್ಲಡೆ ತನ್ನನರುಹದೆ ಅರಿವನು ಕಾಣಾ ಎನ್ನ ಅಜಗಣ್ಣತಂದೆ.
1123.05 414
C103
ಮುಕ್ತಾಯಕ್ಕ ಅಜಗಣ್ಣತಂದೆ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 106
ಅಂಗದ ಕಳೆ ಲಿಂಗದಲ್ಲಿ ಅರತ ಬಳಿಕ,
ಅಂಗವೆಂಬ ಶಂಕೆಯಿಲ್ಲ ನೋಡಾ ಶರಣಂಗೆ.
ಪ್ರಾಣದ ಕಳೆ ಅರಿವಿನಲ್ಲಿ ಅರತ ಬಳಿಕ,
ಶಬ್ದಸಂದಣಿಗೆ ಹಂಗಿಲ್ಲ ನೋಡಾ.
ಶರಣ ನಡೆದಡೆ ನಿರ್ಗಮನಿ ನುಡಿದಡೆ ನಿಶ್ಶಬ್ದಿ!
ಗುಹೇಶ್ವರನ ಶರಣಂಗೆ ಕುರುಹಿಲ್ಲ ಕೇಳಾ ಎಲೆ ಅವ್ವಾ.
701.02 415
C104
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 107
ಕೈಯದು ಕುರುಹು, ಬಾಯದು ಬೊಬ್ಬೆ.
ಉಲಿಯದಿರೊ ಭಾವಾ, ಉಲಿಯದಿರೊ ಭಾವಾ!
ವಾರಿಕಲ್ಲ ಕೊಡನಲ್ಲಿ ಮುತ್ತು ಮಾಣಿಕವ ತುಂಬಿ,
ಎತ್ತುವರಿಲ್ಲದೆ ಸಖಿಯನರಸುತಿಪ್ಪೆ.
ಮನದ ತನುವಿನಲ್ಲಿ, ಆ ತನುವಿನ ಮನದಲ್ಲಿ
ತನಗೆ ತಾನೆತ್ತಿಕೊಂಡಡೆ,
ಮನ ಮೇರೆದಪ್ಪಿ ಕರಗಿ ಉಕ್ಕಿತ್ತು ನಮ್ಮ ಅಜಗಣ್ಣನಯೋಗ.
1109.05 416
C105
ಮುಕ್ತಾಯಕ್ಕ ಅಜಗಣ್ಣ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 108
ಅರಿವುಗೆಟ್ಟು ಮರ[ಕುರು ?]ಹಳಿದು
ಭಾವಭ್ರಾಂತು ನಿಭ್ರಾಂತವಾದವರ ಕೈಯಲ್ಲಿ
ಕರುಹನರಸುವರೆ ಹೇಳಾ ?
ತಾನಳಿದು ತಾನುಳಿದು ತಾನುತಾನಾದ ನಿಜಶರಣಂಗೆ
ಅಂತರಂಗದಲ್ಲಿ ಒಂದು ಅರಿವುಂಟೆ ?
ಗುಹೇಶ್ವರನ ಶರಣರ ನಿಲವು
ಕಾಯಗೊಂಡವರ ಕಣ್ಣಿಂಗೆ ಸಂದೇಹವಾಗಿಪ್ಪುದು,
ನಿಸ್ಸಂದೇಹಿಗಳಿಗೆ ನಿಜವಾಗಿಪ್ಪುದು ನೋಡಾ ಮರುಳೆ
841.02 417
C106
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 109
ನುಡಿಯೆನೆಂಬಲ್ಲಿಯೆ ನುಡಿ ಅದೆ.
ನಡೆಯೆನೆಂಬಲ್ಲಿಯೆ ನಡೆ ಅದೆ.
ಭಾವಿಸೆನೆಂಬಲ್ಲಿಯೆ ಭಾವ ಅದೆ.
ಅರಿದು ಮರೆದೆನೆಂಬಲ್ಲಿಯೆ ಅರಿವು ಮರವೆ ಅದೆ.
ಅಂಗದಲ್ಲಿ ಲಿಂಗ ಲೀಯವಾಯಿತ್ತೆಂದಡೆ
ಅಲ್ಲಿಯೆ ಅಂಗ ಅದೆ.
ಅನಂಗಸಂಗಿಯಾದೆನೆಂಬಲ್ಲಿಯೆ ವಿಷಯಸೂತಕ ಅದೆ.
ನಾನೆ ನಾನಾದೆನೆಂಬಲ್ಲಿಯೆ ನೀನೆಂಬುದು ಅದೆ.
ಅರಿದು ಮರೆದ ಪರಿ ಎಂತು ಹೇಳಾ?
ಅರಿವು ನಷ್ಟವಾಗಿ, ಮರಹು ಲಯವಾಗಿಪ್ಪಡೆ
ಎನ್ನ ಅಜಗಣ್ಣತಂದೆಯಲ್ಲದೆ ಮತ್ತಾರನೂ ಕಾಣೆ
1124.05 418
C107
ಮುಕ್ತಾಯಕ್ಕ ಅಜಗಣ್ಣತಂದೆ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 110
ಅಂಗ ಅನಂಗವೆಂಬೆರಡೂ ಅಳಿದು ನಿಜದಲ್ಲಿ ನಿಂದ ಲಿಂಗೈಕ್ಯನ
ಅಂಗದಲುಳ್ಳ ಕ್ರೀಗಳೆಲ್ಲವೂ ಲಿಂಗಕ್ರೀಗಳು ನೋಡಾ.
ಮನೋಲಯವಾಗಿಪ್ಪ ಲಿಂಗೈಕ್ಯನ ಅನುಭಾವವೆಲ್ಲವೂ
ಜ್ಞಾನನಷ್ಟ ಶಬ್ದ ನೋಡಾ.
ತನ್ನಲ್ಲಿ ತಾನು ತದ್ಗತವಾಗಿಪ್ಪ ಶಿವಯೋಗಿಗೆ
ಭಿನ್ನವಿಲ್ಲ ನೋಡಾ ಗುಹೇಶ್ವರ ಸಾಕ್ಷಿಯಾಗಿ
696.02 419
C108
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 111
ಸಿಡಿಲುಹೊಯ್ದ ಬಾವಿಗೆ ಸೋಪಾನವೇಕೊ?
ನೆರೆಯರಿದ ಬಳಿಕ ಮತ್ತೆ ಮತಿ ಹುಟ್ಟಲುಂಟೆ?
ಸೊಡರುಳ್ಳ ಮನೆಗೆ ಮತ್ತೆ ತಮಂಧವೆಂಬುದೇನೊ?
ತನ್ನಲ್ಲಿ ತಾನು ತದ್ಗತವಾದ ಬಳಿಕ
ಬೊಮ್ಮ ಪರಬೊಮ್ಮವಾದೆನೆಂಬುದಿಲ್ಲ ನೋಡಾ ಎನ್ನ ಅಜಗಣ್ಣತಂದೆಗೆ.
1130.05 420
C109
ಮುಕ್ತಾಯಕ್ಕ ಅಜಗಣ್ಣತಂದೆ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 112

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  « ಹಿಂದಿನ 10414243[ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 42 ಈ ಪುಟದಲ್ಲಿ ಪಲಿತಾಂಶಗಳು 411 ರಿಂದ 420 ವರೆಗೆ