checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ,
ಬೆಳೆದೆನು ಅಸಂಖ್ಯಾತರ ಕರುಣದೊಳಗೆ.
ಭಾವವೆಂಬ ಹಾಲು, ಸುಜ್ಞಾನವೆಂಬ ತುಪ್ಪ,
ಪರಮಾರ್ಥವೆಂಬ ಸಕ್ಕರೆಯನಿಕ್ಕಿದರು ನೋಡಾ.
ಇಂತಪ್ಪ ತ್ರಿವಿಧಾಮೃತವನು ದಣಿಯಲೆರೆದು ಸಲಹಿದಿರೆನ್ನ.
ವಿವಾಹವ ಮಾಡಿದಿರಿ, ಸಯವಪ್ಪ ಗಂಡಂಗೆ ಕೊಟ್ಟಿರಿ,
ಕೊಟ್ಟ ಮನೆಗೆ ಕಳುಹಲೆಂದು
ಅಸಂಖ್ಯಾತರೆಲ್ಲರೂ ನೆರೆದು ಬಂದಿರಿ.
ಬಸವಣ್ಣ ಮೆಚ್ಚಲು ಒಗತನವ ಮಾಡುವೆ.
ಚೆನ್ನಮಲ್ಲಿಕಾರ್ಜುನನ ಕೈವಿಡಿದು
ನಿಮ್ಮ ತಲೆಗೆ ಹೂವ ತಹೆನಲ್ಲದೆ ಹುಲ್ಲ ತಾರೆನು.
ಅವಧರಿಸಿ, ನಿಮ್ಮಡಿಗಳೆಲ್ಲರೂ ಮರಳಿ ಬಿಯಂಗೈವುದು, ಶರಣಾರ್ಥಿ.
426.05 41
A41
ಅಕ್ಕಮಹಾದೇವಿ ಚೆನ್ನಮಲ್ಲಿಕಾರ್ಜುನ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಅಂಗದಾಶ್ರಯವ ಕಳೆದು ಲಿಂಗದಾಶ್ರಯವ ಮಾಡಿದ
ಗುರುವೆ ಶರಣು ಶ್ರೀಗುರುಲಿಂಗವೆ ಶರಣು
ಪರಮಸುಖವ ತೋರಿದೆಯಾಗಿ.
ಮಹಾಘನ ಸೋಮೇಶ್ವರನ ಸಾಹಿತ್ಯವ ಮಾಡಿ
ನಿಜ ನಿವಾಸದಲ್ಲಿರಿಸಿದೆಯಾಗಿ ಗುರುವೆ ಶರಣು.
299.06 42
A42
ಅಜಗಣ್ಣ ಮಹಾಘನ ಸೋಮೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಹುಟ್ಟಿದ ಶಿಶು ಧರಣಿಯ ಮೇಲೆ ಬಿದ್ದಂತೆವಿಭೂತಿಯ ಪಟ್ಟವಂ
ಕಟ್ಟಿ, ಲಿಂಗಸ್ವಾಯತವ ಮಾಡಿಪ್ರಸಾದದೆಣ್ಣೆ ಬೆಣ್ಣೆ
ಹಾಲನೆರೆದು
ಸಲಹೂದೆ ಅದು ಸದಾಚಾರ.ಆ
ಮಗುವಿಂಗೆ ಈರಿಲು [ಗಾಳಿ]ಭೂತ ಸೋಂಕಿತ್ತೆಂದು
ಮಾಡುವ ಭಕ್ತಂಗೆಗುರುವಿಲ್ಲ, ಲಿಂಗವಿಲ್ಲ, ಅವ
ಪಂಚಮಹಾಪಾತಕ ನೋಡಾ.ಇದನರಿದಾತ ಎನ್ನ
188.03 43
A43
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಹುಟ್ಟಿದ ಮಕ್ಕಳು ಪ್ರಬುದ್ಧರಾದಲ್ಲದೆ ಲಿಂಗಸ್ವಾಯತವ
ಮಾಡಬಾರದೆಂಬ ಯುಕ್ತಿಶೂನ್ಯರ ನೋಡಿರೇ.
ಅಳುಪಿ ತಾಯಿ ತಂದೆ ಅವರೊಡನುಂಡರೆ
ಅವರನಚ್ಚ ವ್ರತಗೇಡಿಗಳೆಂಬೆ ಕೂಡಲಚೆನ್ನಸಂಗಯ್ಯಾ.
187.03 44
A44
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಬೀದಿಯ ಬಸವಂಗೆ ದೇವಾಲಯದ ಪಶುವಿಂಗೆ ಹುಟ್ಟಿದ ಕರು,
ಬಸವಗಳಪ್ಪುವೆ, ಲಿಂಗಮುದ್ರೆಯನೊತ್ತದನ್ನಕ್ಕ?
ಭಕ್ತಂಗೆ ಭಕ್ತೆಗೆ ಹುಟ್ಟಿದರೆಂದರೆ
ಬರಿಯ ಗುರುಕಾರುಣ್ಯದಲ್ಲಿ ಭಕ್ತರಪ್ಪರೆ, ಅಂಗದ ಮೇಲೆ ಲಿಂಗವಿಲ್ಲದನ್ನಕ್ಕ?
ಅವರನೊಳಗಿಟ್ಟುಕೊಂಡು ನಡೆದರೆ
ಭಕ್ತಿಹೀನರೆನಿಸಿತ್ತು, ಕೂಡಲಚೆನ್ನಸಂಗನ ವಚನ.
186.03 45
A45
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಲಿಂಗವಿಲ್ಲದೆ ನಡೆವನ, ಲಿಂಗವಿಲ್ಲದೆ ನುಡಿವನ, ಲಿಂಗವಿಲ್ಲದವನಂಗ ಸೂತಕ.
ಲಿಂಗಾಂಗಿ, ಲೌಕಿಕವ ಮುಟ್ಟಲಾಗದು.
ಲಿಂಗವಿಲ್ಲದೆ ಗಮಿಸಿದಡೆ ಆ ನಡೆನುಡಿ ಗೊಂಪೆ ಪಾತಕ.
ಲಿಂಗವಿಲ್ಲದೆ ನುಡಿವ ಶಬ್ದವ ಕೇಳಲಾಗದು, ಶಿವಶಿವಾ!
ಲಿಂಗವಿಲ್ಲದೆ ಉಗುಳು ನುಂಗಿದರೆ ಕಿಲ್ಬಿಷ,
ಕೂಡಲಚೆನ್ನಸಂಗಮದೇವಾ.
204.03 46
A46
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಗುರು ಕರುಣವ ಹಡೆದುದಕ್ಕೆ ಚಿಹ್ನವಾವುದೆಂದಡೆ:
ಅಂಗದ ಮೇಲೆ ಲಿಂಗಸ್ವಾಯತವಾಗಿರಬೇಕು.
ಅಂಗದ ಮೇಲೆ ಲಿಂಗ ಸ್ವಾಯತವಿಲ್ಲದೆ
ಬರಿದೆ ಗುರುಕರಣವಾಯಿತ್ತೆಂದಡೆ ಅದೆಂತೊ?
ಲಿಂಗವಿಹೀನವಾಗಿ ಗುರುಕರುಣವುಂಟೆ? ಇಲ್ಲ.
ಆ ಮಾತ ಕೇಳಲಾಗದು.
ಇದು ಕಾರಣ, ಲಿಂಗಧಾರಣವುಳ್ಳುದೆ ಸದಾಚಾರ,
ಇಲ್ಲದಿರೆ, ಅನಾಚಾ
1045.07 47
A47
ತೆಲುಗೇಶಮಸಣಯ್ಯ ತೆಲುಗೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಲಿಂಗಲೀಲಾವಿಲಾಸ ಚಾರಿತ್ರ 11609
ಇದು ವಚನಸಂಪುಟದಲ್ಲಿ ಇಲ್ಲ 1.00 48
A48
ಶಿವನಾಗಮಯ್ಯ ನಾಗಪ್ರಿಯ ಚೆನ್ನರಾಮೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಕಾಂಚನಕ್ಕೆ ಕೈಯಾನದಿರ್ದಡೆ ಕರಸ್ಥಲದಲ್ಲಿ ಧರಿಸುವುದಯ್ಯಾ ಶಿವಲಿಂಗವ.
ಕಾಂಕ್ಷೆಯಿಲ್ಲದಿರ್ದಡೆ ಕಕ್ಷೆಯಲ್ಲಿ ಧರಿಸುವುದಯ್ಯಾ ಶಿವಲಿಂಗವ.
ಅಪ್ಪಿಲ್ಲದಿರ್ದಡೆ ಉರಸೆಜ್ಜೆಯಲ್ಲಿ ಧರಿಸುವುದಯ್ಯಾ ಶಿವಲಿಂಗವ.
ಅನ್ನಪಾನಾದಿಗಳಿಗೆ ಬಾಯ್ದೆರೆಯದಿರ್ದಡೆ,
ಅಮಳೋಕ್ಯದಲ್ಲಿ ಧರಿಸುವುದಯ್ಯಾ ಶಿವಲಿಂಗವ.
ಭಿನ್ನ
1099.03 49
A49
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗಹೀನರ ಬೆರಸಲಾಗದು.
ಅಂಗದ ಮೇಲೆ ಲಿಂಗವಿದ್ದ ಬಳಿಕ,
ಲಿಂಗ ಮುಂತಾಗಿ ಎಲ್ಲಾ ಕ್ರೀಗಳನೂ ಗಮಿಸಬೇಕಲ್ಲದೆ,
ಅಂಗ ಮುಂತಾಗಿ ಗಮನಿಸಲಾಗದು.
ಲಿಂಗಸಂಬಂಧಿಯಾಗಿ ಅಂಗ ಮುಂತಾಗಿಪ್ಪವರು ಲಿಂಗಕ್ಕೆ ದೂರವಯ್ಯಾ,
ನಾಗಪ್ರಿಯ ಚೆನ್ನರಾಮೇಶ್ವರಾ.
133.09 50
A50
ಶಿವನಾಗಮಯ್ಯ ನಾಗಪ್ರಿಯ ಚೆನ್ನರಾಮೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  12345678910ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 5 ಈ ಪುಟದಲ್ಲಿ ಪಲಿತಾಂಶಗಳು 41 ರಿಂದ 50 ವರೆಗೆ