ವಚನ ಆಕರಗಳು (15ನೆ ಶತಮಾನ)
ಭವಬಂಧನ ದುರಿತಂಗಳ ಗೆಲುವಡೆ ಓಂ ನಮಃ ಶಿವಶರಣೆಂದಡೆ ಸಾಲದೆ ಹರ ಹರ ಶಂಕರ, ಶಿವ ಶಿವ ಶಂಕರ, ಜಯ ಜಯ ಶಂಕರ ಶರಣೆನುತ್ತಿದ್ದೇನೆ. ಎನ್ನ ಪಾತಕ ಪರಿಹರ, ಕೂಡಲಸಂಗಮದೇವಾ ಶರಣೆನುತ್ತಿದ್ದೇನೆ. |
79.01 |
71 A71 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಎನ್ನ ಮನದಲ್ಲಿ ಮತ್ತೊಂದನರಿಯೆನಯ್ಯಾ, ಓಂ ನಮಃ ಶಿವಾಯ, ಓಂ ನಮಃ ಶಿವಾಯ ಎನಗಿದೆ ಮಂತ್ರ, ಇದೇ ಜಪ. ಕೂಡಲಸಂಗಮದೇವಾ ನೀನೆ ಬಲ್ಲೆ, ಎಲೆ ಲಿಂಗವೆ. |
80.01 |
72 A72 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಅಂದಂದಿಗೆ ನೂರು ತುಂಬಿತ್ತೆಂಬ ದಿಟವಿರಬೇಕು. ಸಂದ ಪುರಾತನರ ನೆನೆಯುತ್ತಿರಬೇಕು. ಜಂಗಮ ಮಠಕ್ಕೆ ಬಂದಡೆ, ವಂಚನೆಯಿಲ್ಲದೆ ಮಾಡಬೇಕು. ಎನಗಿದೇ ವರವನೀವುದು, ಬಸವಪ್ರಿಯ ಕೂಡಲಚನ್ನಸಂಗಮದೇವಾ. |
271.09 |
73 A73 |
ಸಂಗಮೇಶ್ವರದಅಪ್ಪಣ್ಣ | ಬಸವಪ್ರಿಯ ಕೂಡಲಚನ್ನಸಂಗಮದೇವಾ. |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಲಿಂಗವ ಪೂಜಿಸುತ್ತ ಜಂಗಮದ ಮುಖವ ನೋಡುತ್ತಿಪ್ಪ ಸುಖವ ಕೊಡು, ಕಂಡಾ ಲಿಂಗವೆ, ಪರಮಸುಖವ ಕೊಡು, ಕಂಡಾ ಲಿಂಗವೆ. ಕೂಡಲಸಂಗಮದೇವಾ, ಇದೇ ವರವ ನಿಮ್ಮಲ್ಲಿ ಬೇಡುವೆ. |
373.01 |
75 A75 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಮಾಘಮಾಸದ ನವಿಲಿನಂತಾದೆ ನೋಡವ್ವಾ ! ಇರುಳು ತೊಳಲುವ ಜಕ ೈವಕ್ಕಿ ಯಂತೆ ಹಲುಬುತಿರ್ದೆ ನೋಡವ್ಹಾ . ಮಾಗಿಯಯಂತೆ ನೋಡವ್ಹಾ | ಮಹಾಲಿಂಗ ಗಜೇಶ್ವ ರನ ಅನುಭಾವ ಸಂಬಂಧಿಗಳೆ ಬರವು ಎನ್ನ ಪ್ರಾಣದ ಬರವು ನೋಡವ್ಹಾ ! |
248.07 |
76 A76 |
ಗಜೇಶಮಸಣಯ್ಯ | ಮಹಾಲಿಂಗ ಗಜೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಇಂದೆನ್ನ ಮನೆಗೆ ಪ್ರಮಥರು ಬಂದಾರೆಂದು ಗುಡಿ ತೋರಣವ ಕಟ್ಟಿ, ಷಡುಸಮ್ಮಾರ್ಜನೆಯ ಮಾಡಿ, ರಂಗವಾಲಿಯನಿಕ್ಕಿ `ಉಘೇ, ಚಾಂಗು ಭಲಾ' ಎಂದೆಂಬೆ. ಕೂಡಲಸಂಗನ ಶರಣರು ತಮ್ಮ ಒಕ್ಕುದನಿಕ್ಕಿ ಸಲಹುವರಾಗಿ. |
377.01 |
77 A77 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಆವನಾದಡೇನು ಶ್ರೀಮಹಾದೇವನ ನೆನೆವನ ಬಾಯ ತಂಬುಲವ ಮೆಲುವೆ, ಬೀಳುಡೆಯ ಹೊದೆವೆ, ಪಾದರಕ್ಷೆಯ ಕಾಯ್ದು ಬದುಕುವೆ, ಕೂಡಲಸಂಗಮದೇವಾ. |
464.01 |
78 A78 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಆವಾವ ಭಾವದಲ್ಲಿ ಮಾಡಿ ಕೂಡಿಹೆನೆಂಬವರ ಬಾಗಿಲ ತೋರಯ್ಯಾ. ತನುವನೊಪ್ಪಿಸಿದವರ, ಮನವನೊಪ್ಪಿಸಿದವರ, ಧನವನೊಪ್ಪಿಸಿದವರ ಬಾಗಿಲ ತೋರಯ್ಯಾ. ಇವೆಲ್ಲವನೊಪ್ಪಿಸಿ ಜಂಗಮವೆನ್ನವರೆನ್ನವರೆಂಬವರ ಕೆರಹ ಹೊತ್ತಿರಿಸೆನ್ನನು, ಕೂಡಲಸಂಗಮದೇವಾ. |
363.01 |
79 A79 |
ಬಸವಣ್ಣ | ಕೂಡಲಸಂಗಮದೇವಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಅಡಿಗಡಿಗೆ ನಿಮ್ಮ ಶರಣರಡಿಗೆರಗಿ ಶರಣೆಂಬೆ. ನುಡಿಯ ಬೋಧೆಯ ಮಾತು, ಅನ್ಯನುಡಿ ಸಮನಿಸದು. ಓಡುದೇಹದ ಶಿರಬಿಗಿದು, ಮಡುಗಟ್ಟಿ ಕಂಬನಿಯ ಕಡಲೊಳಗೆ ತೇಲಾಡುತೆಂದಿಪ್ಪೆನೊ ? ಮೃಡ ಶರಣು ಶರಣೆಂಬೆ ಶಬ್ದ ಒಡಲುಗೊಂಡು ಶಂಭುಜಕ್ಕೇಶ್ವರದೇವರಿಗೆ ಶರಣೆನುತ ಮೈಮರೆದೆಂದಿಪ್ಪೆನೊ ? |
1206.05 |
80 A80 |
ಸತ್ಯಕ್ಕ | ಶಂಭುಕೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] 1 2 3 4 5 6 7 8 9 10 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 8 ಈ ಪುಟದಲ್ಲಿ ಪಲಿತಾಂಶಗಳು 71 ರಿಂದ 80 ವರೆಗೆ |
|
|