checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಗುರುವಿನಲ್ಲಿ ಸದಾಚಾರ ಲಿಂಗದಲನುದಿನ ವೇಳೆ.
ಜಂಗಮದಲ್ಲನುಭಾವ ಸಮಯಾಚಾರ ಲಿಂಗದಲನುದಿನ ವೇಳೆ.
ಈ ಉಭಯಾಚಾರದಿಂದ ತಿಳಿದ ತಿಳಿವು ಲಿಂಗದಲ್ಲಿ ಅನುದಿನ ವೇಳೆ.
ಬೇರೆ ತೋರಲಿಲ್ಲ.
ಲಿಂಗಜಂಗಮದಲ್ಲಿ ಲೀಯವಾದಾಚಾರ ಸಮಯಾಚಾರ.
ಇದು ಕಾರಣ ಕೂಡಲಸಂಗಮದೇವಾ.
ಲಿಂಗದಲನುದಿನ ವೇಳೆ.
820.01 91
A91
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಆಚಾರವಿಡಿದು ಲಿಂಗ, ಅನುಭಾವಿಡಿದು ಜಂಗಮ.
ತನುವಿನ ಪ್ರಾಣ ಆಚಾರ, ಮನದ ಪ್ರಾಣ ಅನುಭಾವ.
ಇದು ಕಾರಣ ಕೂಡಲಚೆನ್ನಸಂಗಮದೇವಾ,
ಲಿಂಗವನೂ ಜಂಗಮವನೂ ಬೇರರಸಲಿಲ್ಲ.
108.03 92
A92
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಒಡಲಿಲ್ಲದಾತ ಜಂಗಮ, ಪ್ರಾಣವಿಲ್ಲದಾತ ಭಕ್ತನಯ್ಯಾ.
ಆಚಾರವೆ ಜಂಗಮ, ವಿಚಾರವೆ ಭಕ್ತನಯ್ಯಾ.
ಆಚಾರ-ವಿಚಾರವೆಂಬುದು ಸ್ವಾನುಭಾವ ಸಂಭಾಷಣೆ
ಕೂಡಲಚೆನ್ನಸಂಗಮದೇವಾ
1069.03 93
A93
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಲಿಂಗಲೀಲಾವಿಲಾಸ ಚಾರಿತ್ರ 1905
ಕಾಯವೂ ಜೀವವೂ, ಜೀವವೂ ಕಾಯವೂ ಎಂತು ಬೆರಸಿಪ್ಪುವಂತೆ
ಲಿಂಗದೊಳಗೆ ಜಂಗಮ, ಜಂಗಮದೊಳಗೆ ಲಿಂಗ ಬೆರಸಿಪ್ಪುವು, ಭಿನ್ನಭಾವವಿಲ್ಲದೆ,
ನ ಶಿವೇನ ವಿನಾ ಶಕ್ತಿರ್ನ ಶಕ್ತಿರಹಿತಃ ಶಿವಃ
ಪುಷ್ಪಗಂಧಾವಿವಾನ್ಯೋನ್ಯಂ ಮಾರುತಾಂಬರಯೋರಿವ

ಎಂದುದಾಗಿ_ಭಾವ ಭೇದವಿಲ್ಲ,
ಜಂಗಮವೆ ಲಿಂಗ ಕ
360.03 94
A94
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
'ಅಕಾಯೋ ಭಕ್ತಕಾಯಶ್ಚ ಮಮ ಕಾಯಸ್ತು ಭಕ್ತಿಮಾನ್'
ಎಂಬ ಶ್ರುತಿಯನೋದುವರೆ ಎಂತೊ ಭಕ್ತಂಗೆ?
'ಮಹಂತೋ ಲಿಂಗರೂಪೇಣ ಮಹಂತೋ ಜಂಗಮಾಸ್ತಥಾ'
ಎಂಬ ಶ್ರುತಿಯನೋದುವರೆ ಎಂತೊ ಜಂಗಮಕ್ಕೆ?
ಇಂತೆರಡೊಂದಾದರೆ ತೆರಹಿಲ್ಲ
ಕೂಡಲಚೆನ್ನಸಂಗಾ ನಿಮ್ಮಲ್ಲಿ.
137.03 95
A95
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಭವವಿಲ್ಲದ ಭಕ್ತನ ಪರಿಯ ನೋಡಾ !
ಮನ ಪ್ರಾಣ ಮುಕ್ತಿಭಾವ ವಿರಹಿತ
ಒಡಲಿಲ್ಲದ ಜಂಗಮದ ಪರಿಯ ನೋಡಾ !
ಸಿಡಿಲು ಮಿಂಚಿನ ರೂಹನೊಂದೆಡೆಯಲ್ಲಿ ಹಿಡಿಯಲುಂಟೆ ?
ಈ ಉಭಯ ಒಂದಾದವರ ಕಂಡರೆ ನೀವೆಂಬೆನಯ್ಯಾ.
ಕೂಡಲಚೆನ್ನಸಂಗಮದೇವಾ.
757.03 96
A96
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಒಂದಾಗಿ ತೋರಿದರೆ ಮೂರಾಗಿ ವಿವರಿಸುವೆ:
ಲಿಂಗವೆಂಬೆ ಜಂಗಮವೆಂಬೆ ಪ್ರಸಾದವೆಂಬೆ.
ಮನೋಮೂರ್ತಿಯಾಗಿ ತೋರಿದೆ, ಕೂಡಲಚೆನ್ನಸಂಗಯ್ಯಾ.
104.03 97
A97
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಇದು ವಚನ ಸಂಪುಟದಲ್ಲಿ ಇಲ್ಲ 2.00 98
A98
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಹೊಲೆಯುಂಟೆ ಲಿಂಗವಿದ್ದೆಡೆಯಲ್ಲಿ
ಕುಲವುಂಟೆ ಜಂಗಮವಿದ್ದೆಡೆಯಲ್ಲಿ
ಎಂಜಲುಂಟೆ ಪ್ರಸಾದವಿದ್ದೆಡೆಯಲ್ಲಿ
ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ.
ನಿಷ್ಕಳಂಕ ನಿಜೈಕ್ಯ ತ್ರಿವಿಧನಿರ್ಣಯ,
ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದಿಲ್ಲ.
770.01 99
A99
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಲಿಂಗಲೀಲಾವಿಲಾಸ ಚಾರಿತ್ರ 2206
ಲಿಂಗದಲ್ಲಿ ಸೂತಕವ ಹಿಡಿವನ್ನಕ್ಕ
ಪ್ರಾಣಲಿಂಗ ಸಂಬಂಧಿಯೆಂತೆಂಬೆ?
ಜಂಗಮದಲ್ಲಿ ಸೂತಕವ ಹಿಡಿವನ್ನಕ್ಕ
ಅನುಭಾವಿಯೆಂತೆಂಬೆ?
ಪ್ರಸಾದದಲ್ಲಿ ಸೂತಕವ ಹಿಡಿವನ್ನಕ್ಕ
ಸ್ವಾಮಿಭೃತ್ಯಸಂಬಂಧಿಯೆಂತೆಂಬೆ?
ಭಕ್ತನೆಂತೆಂಬೆ, ಪ್ರಸಾದಿಯೆಂತೆಂಬೆ,
ಕೂಡಲಚೆನ್ನಸಂಗನಲ್ಲಿ ಶರಣನೆಂತೆಂಬೆ?
282.03 100
A100
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  12345678910ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 10 ಈ ಪುಟದಲ್ಲಿ ಪಲಿತಾಂಶಗಳು 91 ರಿಂದ 100 ವರೆಗೆ