checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಗುರುವೊಂದೆ ಬಸಿರು, ಲಿಂಗ ಒಂದೆ ಬಸಿರು
ಜಂಗಮ ಒಂದೆ ಬಸಿರು ಪ್ರಸಾದ ಒಂದೆ ಬಸಿರು
ಇದನಾರಯ್ಯಾ ಅಮಳೋಕ್ಯವ ಮಾಡಿ ತೋರಿದವರು?
ಇದನಾರಯ್ಯಾ ಪ್ರಜ್ವಲಿತವ ಮಾಡಿ ಬೇರೆ ತೋರಿದವರು.?
ಪೂರ್ವಾಚಾರಿ ಭಕ್ತಿಭಾಂಡಾರಿ ಬಸವಣ್ಣಾ
ಎನಗೆ ನೀನು ಗುಹೇಶ್ವರಲಿಂಗವ ತೋರಿದೆಯಾಗಿ
ಲೋಕಾದಿಲೋಕವೆಲ್ಲವು ಎನಗೆ ಕಿಂಚಿತ್.
1173.02 121
A121
ಅಲ್ಲಮ ಗುಹೇಶ್ವರಲಿಂಗ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಲಿಂಗಸ್ಥಲವಿಲ್ಲದವರ ಭಕ್ತರೆಂಬೆ,
ಗುರುಸ್ಥಲವಿಲ್ಲದವರ ಪ್ರಸಾದಿಗಳೆಂಬೆ (ಶಿಷ್ಯರೆಂಬೆ?),
ಪ್ರಸಾದಿಸ್ಥಲವಿಲ್ಲದವರ ಜಂಗಮವೆಂಬೆ,
ಈ ತ್ರಿವಿಧಸ್ಥಲವಿಲ್ಲದವರ ಶರಣರೆಂಬೆ.
ಇದು ಕಾರಣ, ಕೂಡಲಚೆನ್ನಸಂಗನಲ್ಲಿ
ಭವಿಸಹಿತವಾಗಿದ್ದಾತನ ಲಿಂಗೈಕ್ಯನೆಂಬೆ.
778.03 122
A122
ಚೆನ್ನಬಸವಣ್ಣ ಕೂಡಲಚೆನ್ನಸಂಗ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಶ್ರೀಗುರು ಲಿಂಗ ಜಂಗಮಕ್ಕೆ ಅರ್ಚನೆ ಪೂಜನೆ ದಾಸೋಹವನು
ಧರ್ಮವ ಕಾಮಿಸಿ ಮಾಡಿದರೆ ಧರ್ಮವಪ್ಪುದು,
ಅರ್ಥವ ಕಾಮಿಸಿ ಮಾಡಿದರೆ ಅರ್ಥವಪ್ಪುದು,
ಕಾಮವ ಕಾಮಿಸಿ ಮಾಡಿದರೆ ಕಾಮವಪ್ಪುದು,
ಮೋಕ್ಷವ ಕಾಮಿಸಿ ಮಾಡಿದರೆ ಮೋಕ್ಷವಪ್ಪುದು,
ಸಾಲೋಕ್ಯವ ಕಾಮಿಸಿ ಮಾಡಿದರೆ ಸಾಲೋಕ್ಯವಪ್ಪುದು,
ಸಾಮೀಪ್ಯವ ಕಾಮಿಸಿ ಮಾಡಿದರೆ ಸಾಮೀಪ್ಯವಪ್ಪುದು
ಸಾರೂಪ್ಯವ ಕಾಮಿಸಿ ಮಾಡಿದರೆ ಸಾರೂಪ್ಯವಪ್ಪುದು,
ಸಾಯುಜ್ಯವ ಕಾಮಿಸಿ ಮಾಡಿದರೆ ಸಾಯುಜ್ಯವಪ್ಪುದು,
ಕಾಮಧೇನುವ ಕಾಮಿಸಿ ಮಾಡಿದರೆ ಕಾಮಧೇನುವಪ್ಪುದು,
ಕಲ್ಪತರುವ ಕಾಮಿಸಿ ಮಾಡಿದರೆ ಕಲ್ಪತರುವಪ್ಪುದು,
ಪರುಷವ ಕಾಮಿಸಿ ಮಾಡಿದರೆ ಪರುಷವಪ್ಪುದು,
ಆವುದನಾವುದ ಕಾಮಿಸಿದರೆ ಕಾಮಿಸಿದ ಫಲ ತಪ್ಪದು.
ಕಾಮಿಸದ ನಿಷ್ಕಾಮದಾಸೋಹ
ಕೂಡಲಚನ್ನಸಂಗಾ ನಿಮ್ಮ ಶರಣಂಗೆ.
122.03 123
A123
ಚೆನ್ನಬಸವಣ್ಣ ಕೂಡಲಚನ್ನಸಂಗಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಇದು ವಚನ ಸಂಪುಟದಲ್ಲಿ ಇಲ್ಲ 3.00 124
A124
ಬಸವಣ್ಣ ಕೂಡಲಸಂಗಯ್ಯ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಹೊಡವಡಲೇಕೆ, ಹಿಡಿದು ಪೂಜಿಸಲೇಕೆ,
ಎಡೆಯಾಡಲೇಕೆ ದೇಗುಲಕ್ಕಯ್ಯಾ?
ಬಡವರಂಧಕರಿಂಗೆ ಒಡಲಿಗನ್ನವನಿಕ್ಕಿದಡೆ,
ಹೊಡವಂಟನಾದ ಮೂರು ಲೋಕಕ್ಕೆ[ಯಿದೆ].
ಬಡವರಂಧಕರಿಗೆ ಒಡಲಿಗನ್ನವನಿಕ್ಕದಿದ್ದರೆ,
ಹೊಡೆವಡಲಿಕೆ ಹುರುಳಿಲ್ಲವೆಂದನಂಬಿಗ ಚೌಡಯ್ಯ.
288.06 125
A125
ಅಂಬಿಗರಚೌಡಯ್ಯ ಅಂಬಿಗರ ಚೌಡಯ್ಯ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ದೇಹಾರವ ಮಾಡುವಣ್ಣಗಳಿರಾ, ಒಂದು ತುತ್ತು ಆಹಾರವನಿಕ್ಕಿರೆ.
ದೇಹಾರಕ್ಕೆ ಆಹಾರವೆ ನಿಚ್ಚಣಿಗೆ.
ದೇಹಾರವ ಮಾಡುತ್ತ ಆಹಾರವನಿಕ್ಕದಿರ್ದಡೆ, ಆ ಹರನಿಲ್ಲೆಂದನಂಬಿಗ
ಚೌಡಯ್ಯ.
166.06 126
A126
ಅಂಬಿಗರಚೌಡಯ್ಯ ಅಂಬಿಗರ ಚೌಡಯ್ಯ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಗಾಳಿಯ ಹಡೆದಲ್ಲಿ ತೂರಿಕೊಳ್ಳಯ್ಯಾ,
ಗಾಳಿ ನಿನ್ನಾಧೀನವಲ್ಲಯ್ಯಾ.
ನಾಳೆ ತೂರಿಹೆನೆಂದಡೆ ಇಲ್ಲಯ್ಯಾ.
ಶಿವಶರಣೆಂಬುದೊಂದು ಗಾಳಿಯ ಹಡೆದಲ್ಲಿ,
ಬೇಗ ತೂರೆಂದನಂಬಿಗ ಚೌಡಯ್ಯ.
132.06 127
A127
ಅಂಬಿಗರಚೌಡಯ್ಯ ಅಂಬಿಗರ ಚೌಡಯ್ಯ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಅನ್ನವನಿಕ್ಕಿದರೆ ಪುಣ್ಯವಹುದು, ವಸ್ತ್ರವ ಕೊಟ್ಟರೆ ಧರ್ಮವಹುದು,
ಹಣವ ಕೊಟ್ಟರೆ ಶ್ರೀಯಹುದು.
ತ್ರಿಕರಣ ಶುದ್ಧವಾಗಿ ನೆನದರೆ ಮುಕ್ತಿಯಹುದು,
ಕೂಡಲಚೆನ್ನಸಂಗಯ್ಯನ[ಲ್ಲಿ]
56.03 128
A128
ಚೆನ್ನಬಸವಣ್ಣ ಕೂಡಲಚೆನ್ನಸಂಗಯ್ಯ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಮಾಡುವ ಭಕ್ತಂಗೆಯೂ ಕೊಡುವ ದೇವಂಗೆಯೂ
ಎಂದೆಂದಿಗೂ ಕೇಡಿಲ್ಲ.
ಮಾಡಿ ಭೋ, ಮಾಡಿ ಭೋ.
ಎನಗೆ ಲೇಸಾಯಿತ್ತು , ಹೋಯಿತ್ತೆಂಬ ಚಿಂತೆ ಬೇಡ,
ಇದಿತ್ತೆಂಬ ಸಂತೋಷ ಬೇಡ,
ಸಕಳೇಶ್ವರದೇವನವರನರಿದು ಸಲಹುವನಾಗಿ.
462.09 129
A129
ಸಕಳೇಶಮಾದರಸ ಸಕಳೇಶ್ವರದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ
ಮರಕ್ಕೆ ಬೇರು ಬಾಯೆಂದು ತಳುಂಕೆ ನೀರನೆರೆದಡೆ
ಮೇಲೆ ಪಲ್ಲವಿಸಿತ್ತು ನೋಡಾ.
ಲಿಂಗದ ಬಾು ಜಂಗಮವೆಂದು ಪಡಿಪದಾರ್ಥವ ನೀಡಿದಡೆ
ಮುಂದೆ ಸಕಳಾರ್ಥವನೀವನು.
ಆ ಜಂಗಮವ ಹರನೆಂದು ಕಂಡು, ನರನೆಂದು ಭಾವಿಸಿದಡೆ
ನರಕ ತಪ್ಪದು, ಕಾಣಾ ಕೂಡಲಸಂಗಮದೇವಾ.
421.01 130
A130
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  « ಹಿಂದಿನ 1011121314151617181920ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 13 ಈ ಪುಟದಲ್ಲಿ ಪಲಿತಾಂಶಗಳು 121 ರಿಂದ 130 ವರೆಗೆ