checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಪರಮಾತ್ಮನ ಪ್ರತಿಲಹರಿಯಿಂದ ಅಂತರಾತ್ಮನುತ್ಪತ್ಯ.
ಅಂತರಾತ್ಮನ ಪ್ರತಿಲಹರಿಯಿಂದ ಜೀವಾತ್ಮನುತ್ಪತ್ತ.
ಅಂತಪ್ಪ ಜೀವಾಂತರಾತ್ಮಾದಿಗಳು ಅಂಗ ಪ್ರಾಣವಾದಲ್ಲಿಒಂದೆಯೆನಿಸಿದರು.
ಆ ಒಂದೆಯೆಂಬ ತಾಮಸ ಜೀವನು
ಅಂಗನೆಯರ ಸಂಗ ಮೊದಲಾದ ನಾನಾ ದುಃಖಗಳಲ್ಲಿ ನೋವುತ್ತ,
ನಾನಾಯೋನಿಗಳಲ್ಲಿ ಜನಿಸುತ್ತ,
ರೌರವ ನರಕ ಆಳುತ್ತಮುಳುಗುತ್ತಲಿಹನು.
ಆ ಪರಮಾತ್ಮನು ಜೀವಾತ್ಮನ ಶಿರೋಮಧ್ಯದಲ್ಲಿರ್ದು
ನಾಹಂಎನ್ನದೆಸೋಹಂಎನ್ನುತ್ತ
ಸಿಮ್ಮಲಿಗೆಯ ಚನ್ನರಾಮನೆಂಬ ಅಖಂಡ ಲಿಂಗದೊಳಗೆ ನಿತ್ಯತ್ವವನೆಯ್ದಿ
ಎಡೆಬಿಡುವಿಲ್ಲದೆ ಪರಮಸಂತೋಷದೊಳಿದ್ದಿತ್ತು.
646.07 311
B46
ಚಂದಿಮರಸ ಸಿಮ್ಮಲಿಗೆಯ ಚನ್ನರಾಮ
ಆಕರ ಗ್ರಂಥಗಳು
ಲಿಂಗಲೀಲಾವಿಲಾಸ ಚಾರಿತ್ರ 5703
ಜಗತ್ತೆಂಬ ಯಂತ್ರದ ಹಾಹೆ ಹೇಂಗೆಂದರಿಯಲು
ಅಜ್ಞಾನವೆಂಬ ತುಷದ ಚೋಹವ ತೊಡಿಸಿ,
ಅಹಂ ಮಮತೆಯೆಂಬ ಸೊಕ್ಕನಿಕ್ಕಿ, ಬಾರದ ಭವದ ಬಟ್ಟೆಯಲ್ಲಿ ಬರಿಸಿ,
ಕಾಣದ ಕರ್ಮ ದುಃಖವ ಕಾಣಿಸಿ, ಉಣ್ಣದ ಅಪೇಯವನುಣಿಸಿ,
ಮಾರಾರಿ ವಿನೋದಿಸಿದೆಯಯ್ಯಾ, ಕೂಡಲಸಂಗಮದೇವಾ.
1193.01 312
B47
ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಲಿಂಗಲೀಲಾವಿಲಾಸ ಚಾರಿತ್ರ 5804
ನುವಿಕಾರ, ಮನವಿಕಾರ, ಜನನಮರಣಸ್ಥಿತಿ ಕಾರಣ,
ಹೊನ್ನ ತೋರಿದೆ, ಜಗದ ಕಣ್ಣ ಮೊದಲಿಗೆ.
ಹೆಣ್ಣ ಸುಳಿಸಿದೆ, ಜಗದ ಕಣ್ಣ ಮೊದಲಿಗೆ.
ಮಣ್ಣ ಹರಹಿದೆ, ಜಗದ ಕಣ್ಣ ಮೊದಲಿಗೆ.
ತನುವ ತಪ್ಪಿಸಿ, ಜಗವ ಸಂಸಾರಕ್ಕೊಪ್ಪಿಸಿ,
ನುಣ್ಣನೆ ಹೋದನುಪಾಯದಿ ದೇವರಾಯಸೊಡ್ಡಳ.
765.09 313
B48
ಸೊಡ್ಡಳ ಬಾಚರಸ ಸೊಡ್ಡಳ
ಆಕರ ಗ್ರಂಥಗಳು
ಲಿಂಗಲೀಲಾವಿಲಾಸ ಚಾರಿತ್ರ 5805
ವಾರಿ ಬಲಿದು ವಾರಿಕಲ್ಲಾದಂತೆ ಶೂನ್ಯವೆ ಸ್ವಯಂಭುವಾಯಿತ್ತು.
ಆ ಸ್ವಯಂಭುಲಿಂಗದಿಂದಾಯಿತ್ತು ಮೂರ್ತಿವತ್ತು,
ಆ ಮೂರ್ತಿಯಿಂದಾಯಿತ್ತು ವಿಶ್ವೋತ್ಪತ್ತಿ,
ಆ ವಿಶ್ವೋತ್ಪತ್ತಿಯಿಂದಾಯಿತ್ತು ಸಂಸಾರ,
ಆ ಸಂಸಾರದಿಂದಾಯಿತ್ತು ಮರವೆ.
ಆ ಮರವೆಯೆಂಬ ಮಹಾಮಾಯೆ ವಿಶ್ವವ ಮುಸುಕಿದಲ್ಲಿ
ನಾ ಬಲ್ಲೆ, ಬಲ್ಲಿದರೆಂಬ ಅರುಹಿರಿಯರೆಲ್ಲಾ
ತಾಮಸಕ್ಕೊಳಗಾಗಿ ಮೀನಕೇತನನ ಬಲೆಗೆ ಸಿಲುಕಿ
ಮಾಯೆಯ ಬಾಯ ತುತ್ತಾದರಲ್ಲಾ ! ಗುಹೇಶ್ವರಾ.
1524.02 314
B49
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಲಿಂಗಲೀಲಾವಿಲಾಸ ಚಾರಿತ್ರ 5806
ಕಾಯದ ಮೊದಲಿಗೆ ಬೀಜವಾವುದೆಂದರಿಯದೀ ಲೋಕ.
ಇಂದ್ರಿಯಂಗಳು ಬೀಜವಲ್ಲ,
ಆ ಕಳಾಭೇದವಲ್ಲ! ಸ್ವಪ್ನ ಬಂದೆರಗಿತ್ತಲ್ಲಾ!
ಇದಾವಂಗೂ ಶುದ್ಧ ಸುಯಿಧಾನವಲ್ಲ ಕಾಣಾ ಗುಹೇಶ್ವರಾ.
12.02 315
B50
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಲಿಂಗಲೀಲಾವಿಲಾಸ ಚಾರಿತ್ರ 5908
ಮಹದೇವಯ್ಯನ ಶೂನ್ಯಸಂಪಾದನೆ 7
ಕೃತಯುಗದಲ್ಲಿ ನಾನು ಭಕ್ತಿ ಕಾರಣ
ಸ್ಥೂಲಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ.
ತ್ರೇತಾಯುಗದಲ್ಲಿ ನಾನು ಭಕ್ತಿ ಕಾರಣ
ಶೂನ್ಯಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ.
ದ್ವಾಪರದಲ್ಲಿ ನಾನು ಭಕ್ತಿ ಕಾರಣ
ಅನಿಮಿಷನೆಂಬ ಗಣೇಶ್ವರನಾಗಿರ್ದೆನಯ್ಯಾ.
ಕಲಿಯುಗದಲ್ಲಿ ನಾನು ಭಕ್ತಿ ಕಾರಣ
ಅಲ್ಲಮಪ್ರಭುವೆಂಬ ಗಣೇಶ್ವರ (ಜಂಗಮ?)ನಾಗಿರ್ದೆ
ಕಾಣಾ ಗುಹೇಶ್ವರಾ.
1130.02 316
C4
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 6
ಹಳ್ಳದೊಳಗೊಂದು ಹುಳ್ಳಿ ಬರುತ್ತಿರಲು, ನೊರೆ ತೆರೆಗಳು ತಾಗಿದುವಲ್ಲಾ !
ಸಂಸಾರವೆಂಬ ಸಾಗರದೊಳಗೆ ಸುಖದುಃಖಗಳು ತಾಗಿದವಲ್ಲಾ !
ಇದಕ್ಕಿದು ಮೂರ್ತಿಯಾದ ಕಾರಣ ಪ್ರಳಯವಾಯಿತ್ತು ಗುಹೇಶ್ವರಾ.
47.02 317
C6
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 8
ಆಯಿತ್ತೆ ಉದಯಮಾನ, ಹೋಯಿತ್ತೆ ಅಸ್ತಮಾನ.
ಅಳಿದವಲ್ಲಾ ನೀರಲಾದ ನಿರ್ಮಿತಂಗಳೆಲ್ಲವು !
ಕತ್ತಲೆಗವಿಯಿತ್ತು ಮೂರು ಲೋಕದೊಳಗೆ.
ಇದರಚ್ಚುಗವೇನು ಹೇಳಾ ಗುಹೇಶ್ವರಾ?
41.02 318
C7
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 9
ಸಂಸಾರವೆಂಬ ಹೆಣ ಬಿದ್ದಿದ್ದಡೆ, ತಿನಬಂದ ನಾಯ ಜಗಳವ ನೋಡಿರೆ !
ನಾಯ ಜಗಳವ ನೋಡಿ ಹೆಣ[ನೆದ್ದು] ನಗುತ್ತಿದೆ.
ಗುಹೇಶ್ವರನೆಂಬ ಲಿಂಗವಲ್ಲಿಲ್ಲ ಕಾಣಿರೆ.
46.02 319
C8
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 10
ನೀರ ಬೊಂಬೆಯ ಚೋಹವ ತೊಟ್ಟು,
ಅಗ್ನಿಯ ಬಣ್ಣದ ಹೊದಕೆಯ ಹೊದ್ದು,
ಗಾಳಿಯ ಗತಿಯಲ್ಲಿ ಸುಳಿದಾಡುವ ಪ್ರಾಣಿಗಳು
ದೇವರನೆತ್ತ ಬಲ್ಲರು ಗುಹೇಶ್ವರಾ?
1316.02 320
C9
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 11

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  « ಹಿಂದಿನ 1031323334353637383940ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 32 ಈ ಪುಟದಲ್ಲಿ ಪಲಿತಾಂಶಗಳು 311 ರಿಂದ 320 ವರೆಗೆ