ವಚನ ಆಕರಗಳು (15ನೆ ಶತಮಾನ)
ಜ್ಯೋತಿಯೊಳಗಣ ಕರ್ಪುರಕ್ಕೆ, ಅಪ್ಪುವಿನ ಕೈಯಲಿಪ್ಪ ಉಪ್ಪಿಂಗೆ,
ಶ್ರೀಗುರುವಿನ ಹಸ್ತದೊಳಗಿಪ್ಪ ಶಿಷ್ಯಂಗೆ ಈ ಮೂರಕ್ಕೆಯೂ
ಬೇರೆ ಕ್ರಿಯಾವರ್ತನೆಯುಂಟೆ ಗುಹೇಶ್ವರಾ? |
62.02 |
351 C40 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 42
|
ಆಣವಮಲ ಮಾಯಾಮಲ ಕಾರ್ಮಿಕಮಲವೆಂಬ
ಮಲತ್ರಯಂಗಳಳಿದು ನಿರ್ಮಲನಾದ ಶಿಷ್ಯ;_
ಕಾಯಜೀವದ ಭ್ರಾಂತುಸೂತಕ ಹಿಂಗಿ
ನಿಶ್ಯಂಕನಾದ ಗುರು_
ಈ ಉಭಯ ಭಾವದೊಳಗೆ
ಆವುದು ಮುಂದು ಆವುದು ಹಿಂದೆಂದರಿಯಬಪ್ಪುದು ?
ಕರಸ್ಥಲಕ್ಕೆ ಕಾರುಣ್ಯವ ಮಾಡಿದಡೆ ಮನಸ್ಥಲಕ್ಕೆ ಹಂಗಿಲ್ಲ.
ಮನಸ್ಥಲದಲ್ಲಿ ಸೆರಗೊಡ್ಡಿ ಬೇಡಿರ್ದಡೆ
ಕರಸ್ಥಲದ ಲಿಂಗ ಕೈಸಾರಿತ್ತು !
ಗುರುಸ್ಥಲದ ನಿಲವು ಪರಸ್ಥಲದಲಡಗಿದರೆ
ಭಾವ ಬಳಲಿತ್ತಿದೇನೊ (ಬೆರಗಾಯಿತ್ತು?) ಗುಹೇಶ್ವರಾ. ?
|
873.02 |
352 C41 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 43
|
ನಿರ್ಣಯವನರಿಯದ ಮನವೆ, ದುಗುಡವನಾಹಾರಗೊಂಡೆಯಲ್ಲಾ
ಮಾಯಾ ಸೂತ್ರವಿದೇನೊ! ಕಂಗಳೊಳಗಣ ಕತ್ತಲೆ ತಿಳಿಯದಲ್ಲಾ!
ಬೆಳಗಿನೊಳಗಣ ಶೃಂಗಾರ ಬಳಲುತ್ತಿದ್ದುದು, ಗುಹೇಶ್ವರಾ. |
45.02 |
353 C42 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 44
|
ಆಹಾ ಮನವೆ, ಮರೆದೆಯಲ್ಲಾ ನಿನ್ನ ಪೂರ್ವಾಪರವ,
ಘನ ಮನದೊಳಡಗಿ, ಆ ಮನ ಲಿಂಗದೊಳಡಗಿ,
ಆ ಲಿಂಗವೆನ್ನ ಕರಸ್ಥಲಕ್ಕೆ ಬಂದ ಬಳಿಕ
ಅಳಿಯಿತ್ತು ಅಗಲಿತ್ತು ಎಂಬ ಭಾವಭ್ರಾಂತಿ ಇದೇನೊ?
ಜನನವಿಲ್ಲದ ಘನಕ್ಕೆ ಮರಣವುಂಟೆ?
ತೆರಹಿಲ್ಲದ ನಿಜವು ತನ್ನಲ್ಲಿ ತಾನು ವೇದ್ಯವಾಗಿಪ್ಪುದಲ್ಲದೆ
ಇದಿರಿಟ್ಟು ತೋರದೆಂಬ ಅಜ್ಞಾನವಿದೇನೊ ?
`ನೀ' `ನಾ' ಎಂಬುದು ಮಾದು.
`ತಾನೆ' ಆಗೆ ಸಾಧ್ಯವಾಯಿತ್ತು! ಇದೇನೆಂಬೆ ಗುಹೇಶ್ವರಾ. |
922.02 |
354 C43 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 45
|
ಕಾಣದುದನರಸುವರಲ್ಲದೆ ಕಂಡದುದನರಸುವರೆ ಹೇಳಾ !
ಘನಕ್ಕೆ ಘನವಾದ ವಸ್ತು;
ತಾನೆ ಗುರುವಾದ, ತಾನೆ ಲಿಂಗವಾದ, ತಾನೆ ಜಂಗಮವಾದ,
ತಾನೆ ಪ್ರಸಾದವಾದ, ತಾನೆ ಮಂತ್ರವಾದ, ತಾನೆ ಯಂತ್ರವಾದ
ತಾನೆ ಸಕಲವಿದ್ಯಾರೂಪನಾದ.
ಇಂತಿವೆಲ್ಲವನೊಳಕೊಂಡು ಎನ್ನ ಕರಸ್ಥಲಕ್ಕೆ ಬಂದ.
ಇನ್ನು ನಿರ್ವಿಕಾರ ಗುಹೇಶ್ವರ. |
55.02 |
355 C44 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 46
|
ಕಸ್ತೂರಿಯ ಮೃಗ ಬಂದು ಸುಳಿಯಿತ್ತಯ್ಯಾ,
ಸಕಲ ವಿಸ್ತಾರದ ರೂಹು ಬಂದು ನಿಂದಿತ್ತಯ್ಯಾ,
ಆವ ಗ್ರಹ ಬಂದು ಸೋಂಕಿತ್ತೆಂದರಿಯೆನಯ್ಯಾ
ಆವ ಗ್ರಹ ಬಂದು ಹಿಡಿಯಿತ್ತೆಂಬುದ ನಾನರಿಯೆನಯ್ಯಾ.
ಹೃದಯಕಮಲಮಧ್ಯದಲ್ಲಿ ಗುರುವನರಿದು ಪೂಜಿಸಿ,
ಗುರು ವಿಖ್ಯಾತನೆಂಬುದ ನಾನರಿದೆನಯ್ಯಾ.
ಗುಹೇಶ್ವರಲಿಂಗದಲ್ಲಿಹಿಂದಣ ಹುಟ್ಟರತು ಹೋದುದ ಕಂಡೆನಯ್ಯಾ. |
56.02 |
356 C45 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 47
|
ಎನ್ನ ಮನದ ಕೊನೆಯ ಮೊನೆಯ ಮೇಲೆ
ಅಂಗವಿಲ್ಲದ ರೂಪನ ಕಂಡು ಮರುಳಾದೆನವ್ವಾ.
ಆತನ ಕಂಡು ಬೆರಗಾದೆನವ್ವಾ.
ಎನ್ನಂತರಂಗದ ಆತುಮನೊಳಗೆ
ಅನು(ನಿ?)ಮಿಷ ನಿಜೈಕ್ಯ ಗುಹೇಶ್ವರನ ಕಂಡು ! |
205.02 |
357 C46 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
|
|
ಗುರು, ಶಿಷ್ಯ ಸಂಬಂಧವನರಸಲೆಂದು ಹೋದಡೆ,
ತಾನೆ ಗುರುವಾದ ತಾನೆ ಶಿಷ್ಯನಾದ, ತಾನೆ ಲಿಂಗವಾದ.
ಗುಹೇಶ್ವರಾ_ನಿಮ್ಮ ಶರಣನ ಕಾಯದ ಕೈಯಲ್ಲಿ ಲಿಂಗವ ಕೊಟ್ಟಡೆ,
ಭಾವ ಬತ್ತಲೆಯಾಯಿತ್ತು ! |
63.02 |
358 C47 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 49
|
ಮುನ್ನಿನ ಪರಿಯಂತುಟಲ್ಲ.
ಆದಡೆಂತಹುದು? ಆಗದಡೆಂತಾಯಿತ್ತು ? (ಆದಡಿಂತಹುದೆ ? ಆಗದಡಿಂತಾಯಿತ್ತು)
ಹಲವು ಪರಿ ಬಗೆಯ ಬಯಕೆ ತಾರ್ಕಣೆಯಾದಂತೆ
ಗುಹೇಶ್ವರಲಿಂಗ, ತನುವ ತನ್ನತ್ತಲೊಯ್ದನು. |
81.02 |
359 C48 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 50
|
ಎತ್ತಣ ಮಾಮರ ಎತ್ತಣ ಕೋಗಿಲೆ, ಎತ್ತಣಿಂದೆತ್ತ ಸಂಬಂಧವಯ್ಯಾ ?
ಬೆಟ್ಟದ ಮೇಲಣ ನೆಲ್ಲಿಯ ಕಾಯಿ ಸಮುದ್ರದೊಳಗಣ ಉಪ್ಪು,
ಎತ್ತಣಿಂದೆತ್ತ ಸಂಬಂಧವಯ್ಯಾ ?
ಗುಹೇಶ್ವರಲಿಂಗಕ್ಕೆಯೂ ನಮಗೆಯೂ ಎತ್ತಣಿಂದೆತ್ತ ಸಂಬಂಧವಯ್ಯಾ. |
59.02 |
360 C49 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 51
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 31 32 33 34 35 36 37 38 39 40 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 36 ಈ ಪುಟದಲ್ಲಿ ಪಲಿತಾಂಶಗಳು 351 ರಿಂದ 360 ವರೆಗೆ |
|
|