checking data baseConnected successfully! Sample Image
  •  

ವಚನ ಆಕರಗಳು (15ನೆ ಶತಮಾನ)

search:
search:
ಆರೆಂದು ಕುರುಹ ಬೆಸಗೊಳಲು, ಏನೆಂದು ಹೇಳುವೆನಯ್ಯಾ?
ಕಾಯದೊಳಗೆ ಮಾಯವಿಲ್ಲ;
ಭಾವದೊಳಗೆ ಭ್ರಮೆಯಿಲ್ಲ.
ಕರೆದು ಬೆಸಗೊಂಬಡೆ ಕುರುಹಿಲ್ಲ.
ಒಬ್ಬರಿಗೂ ಹುಟ್ಟದೆ, ಅಯೋನಿಯಲ್ಲಿ ಬಂದು
ನಿರ್ಬುದ್ಧಿಯಾದವಳನೇನೆಂಬೆನಣ್ಣಾ?
ತಲೆಯಳಿದು ನೆಲೆಗೆಟ್ಟು ಬೆಳಗುವ ಜ್ಯೋತಿ
ಎನ್ನ ಅಜಗಣ್ಣತಂದೆಯ ಬೆನ್ನಬಳಿಯವಳಾನಯ್ಯಾ.
1104.05 391
C80
ಮುಕ್ತಾಯಕ್ಕ ಅಜಗಣ್ಣತಂದೆ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 83
ಕಾಣದುದ ಕಂಡೆ, ಕೇಳದುದ ಕೇಳಿದೆ_
ಮುಟ್ಟಬಾರದುದ ಮುಟ್ಟಿದ, ಅಸಾಧ್ಯವ ಸಾಧಿಸಿದ,
ತಲೆಗೆಟ್ಟುದ ತಲೆವಿಡಿದ, ನೆಲೆಗೆಟ್ಟುದ ನಿರ್ಧರಿಸಿದ.
ಗುಹೇಶ್ವರಾ ನಿಮ್ಮ ಶರಣ ಅಜಗಣ್ಣಂಗೆ
ಶರಣೆಂದು ಶುದ್ಧನಾದೆನು.
1072.02 392
C81
ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 84
ಶರಣು ಶರಣಾರ್ಥಿ ಎಲೆ ತಾಯೆ,
ಧರೆಯಾಕಾಶ ಮನೆಗಟ್ಟದಂದು
ಹರಿವ ಅನಿಲ ಅಗ್ನಿ ಜಲ ಮೊಳೆದೋರದಂದು ಹುಟ್ಟಿದಳೆಮ್ಮವ್ವೆ!
ಅದಕ್ಕೆ ಮುನ್ನವೆ ಹುಟ್ಟದೆ ಬೆಳೆದನೆಮ್ಮಯ್ಯ.
ಈ ಇಬ್ಬರ ಬಸಿರಲ್ಲಿ ಬಂದೆ ನಾನು!
ಎಮ್ಮ(ನ್ನ?) ತಂಗಿಯರೈವರು ಮೊರೆಗೆಟ್ಟು ಹೆಂಡಿರಾದರೆನಗೆ!
ಕಾಮಬಾಣ ತಾಗದೆ ಅವರ ಸಂಗವ ಮಾಡಿದೆನು.
ನಾ ನಿಮ್ಮ ಭಾವ ಅಲ್ಲಯ್ಯನು,
ನೀನೆನಗೆ ನಗೆವೆಣ್ಣು
ನಮ್ಮ ಗುಹೇಶ್ವರನ ಕೈವಿಡಿದು ಪರಮಸುಖಿಯಾಗಿ,
ಕಳವಳದ ಕಂದೆರವೆಯೇನು ಹೇಳಾ ?
1540.02 393
C82
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 85
ದೇವ ದೇವ ಶರಣು ಶರಣಾರ್ಥಿ, ಅವಧರಿಸಯ್ಯಾ. ಕೇಳಿದ ಸುಖ ಕಿವಿಗೆ ಬೇಟವಾಯಿತ್ತು. ಕಿವಿಗಳ ಬೇಟ ಕಂಗಳಮುಂದೆ ಮೂರ್ತಿಗೊಂಡಿತ್ತು. ಕಂಗಳಮುಂದೆ ಕಂಡ ಸುಖವು ಮನಕ್ಕೆ ವೇದ್ಯವಾಯಿತ್ತು. ಶಿವಶರಣರ ದರುಶನದ ಸುಖವನೇನೆಂದೆನಬಹುದು ? ಮದವಳಿದು ಮಹವನೊಡಗೂಡಿದ ಎನ್ನ ಅಜಗಣ್ಣನನಗಲಿದ ದುಃಖ ನಿಮ್ಮ ಸಂಗದಲ್ಲಿ ಸಯವಾಯಿತ್ತು ಕಾಣಾ ಪ್ರಭುವೆ. 1119.05 394
C83
ಮುಕ್ತಾಯಕ್ಕ ಅಜಗಣ್ಣ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 86
ಅರಿವರತು ಮರಹುಗೆಟ್ಟು ತನ್ನಲ್ಲಿ ತಾನು ಸನ್ನಹಿತನಾದವಂಗೆ
ದುಃಖಿಸುವರೆ ಹೇಳಾ? ಶೋಕಿಸುವರೆ ಹೇಳಾ?
ಒಡಲಿಲ್ಲದಾತಂಗೆ ಎಡೆಯಲೊಂದು ಅಳಿವುಂಟೆಂದು
ನುಡಿದು ಹೇಳುವ ಮಾತು ಭ್ರಾಂತು ನೋಡಾ!
ಎರಡಿಲ್ಲದ ಐಕ್ಯಂಗೆ ಒಳಹೊರಗಿಲ್ಲ ನೋಡಾ,
ಗುಹೇಶ್ವರನ ಶರಣ ಅಜಗಣ್ಣಂಗೆ!
834.02 395
C84
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 87
ಅಂಬರದಲಾಡುವ ತುಂಬಿಯ ಬಿಂಬದ ಕಂಬನಿಯೊಳಗಣ ರತ್ನದ
ಬಯಕೆಯಾದ್ಯಂತವನೇನೆಂಬೆನಯ್ಯಾ?
ವೇದ ಶಾಸ್ತ್ರ ಶ್ರುತಿ ಸ್ಮೃತಿಗಳು ಸ್ತುತಿಸಲರಿಯವು.
ನಾದವಲ್ಲ, ಸುನಾದದ ನಿಲವಲ್ಲ
ಭೇದಿಸುವಡೆ ಅಗಮ್ಯ ನೋಡಾ!
ಸೊಲ್ಲಿಲ್ಲದ ಸೊಮ್ಮಿಲ್ಲದ ಘನವನೇನೆಂಬೆನು?
ಎಂತು ಮರೆವೆನಯ್ಯಾ ಎನ್ನ ಅಜಗಣ್ಣ ತಂದೆಯನು?
1098.05 396
C85
ಮುಕ್ತಾಯಕ್ಕ ಅಜಗಣ್ಣ ತಂದೆ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 88
ಕಂಡೆನೆಂಬುದು ಕಂಗಳ ಮರವೆ,
ಕಾಣೆನೆಂಬುದು ಮನದ ಮರವೆ,
ಕೂಡಿದೆನೆಂಬುದು ಅರುಹಿನ ಮರವೆ,
ಅಗಲಿದೆನೆಂಬುದು ಮರಹಿನ ಮರವೆ.
ಇಂತು_ಕಂಡೆ ಕಾಣೆ ಕೂಡಿದೆ ಅಗಲಿದೆ ಎಂಬ,
ಭ್ರಾಂತಿಸೂತಕವಳಿದು ನೋಡಲು
ಗುಹೇಶ್ವರಲಿಂಗವನಗಲಲೆಡೆಯಿಲ್ಲ ಕೇಳಾ, ಎಲೆ ತಾಯೆ
1039.02 397
C86
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 89
ನೀರಬೊಂಬೆಗೆ ನಿರಾಳದ ಗೆಜ್ಜೆಯ ಕಟ್ಟಿ,
ಬಯಲಬೊಂಬೆಯ ಕೈಯಲ್ಲಿ ಕೊಟ್ಟು ಮುದ್ದಾಡಿಸುತ್ತಿರ್ದನಯ್ಯಾ.
ಕರ್ಪೂರದ ಪುತ್ಥಳಿಗೆ ಅಗ್ನಿಯ ಸಿಂಹಾಸನವನಿಕ್ಕಿ,
ಅಗ್ನಿ ಕರಗಿ ಕರ್ಪೂರ ಉಳಿದುದಕ್ಕೆ ಬೆರಗಾದೆನಯ್ಯಾ, ಎನ್ನ ಅಜಗಣ್ಣನ
ಯೋಗಕ್ಕೆ.
1121.05 398
C87
ಮುಕ್ತಾಯಕ್ಕ ಅಜಗಣ್ಣ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 90
ಅಳಿವನಲ್ಲ ಉಳವನಲ್ಲ ಘನಕ್ಕೆ ಗಮನನಲ್ಲ ಮನಕ್ಕೆ ಸಾಧ್ಯನಲ್ಲ
ತನ್ನ ತಪ್ಪಿಸಿ ಇದಿರನೊಪ್ಪಿಸಿಹೆನೆಂಬ ಭಿನ್ನಭಾವಿಯಲ್ಲ, ಗುಹೇಶ್ವರನ ಶರಣ.
ಅಜಗಣ್ಣನ ಅಂತಿಂತೆನಬಾರದು ಕೇಳಾ ತಾಯೆ.
857.02 399
C88
ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 91
ತನುವಿಡಿದನಾಗಿ ಅನುವನರಿಯದೆ ಕೆಟ್ಟೆನು.
ಮನವಿಡಿದೆನಾಗಿ ಅರಿವು ಉಳಿಯದೆ ಕೆಟ್ಟೆನು.
ಭಾವದ ಬಯಕೆ ಹಿಂಗದಾಗಿ ವಿಯೋಗಿಯಾಗಿ ಕೆಟ್ಟೆನು.
ಅರಿವ ನುಡಿದು ಮರಹಿಗೊಳಗಾದೆನು.
ಎನ್ನ ಕಾಣದೆ ಭಿನ್ನಜ್ಞಾನಿಯಾದೆನು.
ಅಜಗಣ್ಣನೆಂಬ ಮಹಿಮನು ಘನವೇದ್ಯನಾಗಿ
ಎನ್ನ ಮತಿಗೆ ಮರವೆಯ ಮಾಡಿಹೋದನು.
1116.05 400
C89
ಮುಕ್ತಾಯಕ್ಕ ಅಜಗಣ್ಣ
ಆಕರ ಗ್ರಂಥಗಳು
ಮಹದೇವಯ್ಯನ ಶೂನ್ಯಸಂಪಾದನೆ 92

ಟಿಪ್ಪಣಿ; * ಪುಟ ಸಂಖ್ಯೆವಚನ ಸಂಖ್ಯೆ

[ಮೊದಲ ಪುಟ]  « ಹಿಂದಿನ 1031323334353637383940ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 427 ಇದು ಪುಟ 40 ಈ ಪುಟದಲ್ಲಿ ಪಲಿತಾಂಶಗಳು 391 ರಿಂದ 400 ವರೆಗೆ