ವಚನ ಆಕರಗಳು (15ನೆ ಶತಮಾನ)
ನುಡಿಯಿಂದ ನಡೆಗೆಟ್ಟಿತ್ತು ನಡೆಯಿಂದ ನುಡಿಗೆಟ್ಟಿತ್ತು.
ಭಾವದ ಗುಸುಟು ಅದು ತಾನೆ ನಾಚಿ ನಿಂದಿತ್ತು.
ಗುಹೇಶ್ವರನೆಂಬ ಅರಿವು ಸಿನೆ ಬಂಜೆಯಾಯಿತ್ತು. |
691.02 |
421 C110 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 113
|
ಅಹುದಹುದು ಶಿವಶರಣರ ಮಹಿಮೆ ಆರಿಗೆಯೂ ಕಾಣಬಾರದು.
ಕಬ್ಬುನ ಉಂಡ ನೀರಿನಂತೆ, ಕಬ್ಬಿಸಿಲುಂಡ ಅರಿಸಿನದಂತೆ,
ಉರಿಯೊಳಡಗಿದ ಕರ್ಪುರದಂತೆ, ಬಯಲನಪ್ಪಿದ ವಾಯುವಿನಂತೆ
ಇಪ್ಪ ನಿಲವು ನುಡಿದು ಹೇಳಿಹೆನೆಂಬ ಮಾತಿಂಗೆ ಅಳವಡುವುದೆ?
ಅರಿವಡೆ ಮತಿಯಿಲ್ಲ, ನೆನೆವಡೆ ಮನವಿಲ್ಲ
ಎನ್ನ ಅಜಗಣ್ಣ ತಂದೆಯನೊಳಕೊಂಡಿಪ್ಪ ನಿಮ್ಮ ಮಹಿಮೆಗೆ
ನಮೋ ನಮೋ ಎನುತಿರ್ದೆನು. |
1101.05 |
422 C111 |
ಮುಕ್ತಾಯಕ್ಕ | ಅಜಗಣ್ಣ ತಂದೆ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 114
|
ಮುಕ್ತಿಗೆ ಮುಖವಾಗಿ ಯುಕ್ತಿಗೆ ಹೊರಗಾಗಿ
ಅರಿವಿಂಗೆ ಅರಿವಾಗಿಪ್ಪ ಭೇದವು
ಎನಗೆ ಕಾಣಬಂದಿತ್ತು ನೋಡಾ.
ನಿನ್ನ ಒಳಗ ಒರೆದು ನೋಡಿದಡೆ,
ಒರೆದೊರೆಯಿಲ್ಲದ ಚಿನ್ನದ ಪರಿಮಳ ಎನ್ನ ಮನವನಾವರಿಸಿ
ಪರಮಸುಖದ ಪರಿಣಾಮವನು ಒಳಕೊಂಡಿತ್ತು ನೋಡಾ.
ಈ ಕುರುಹಿನ ಮೊಳೆಯ
ಬರಿಯ ಬಯಲಲ್ಲಿ ನಿಲಿಸಿ ನೋಡಿ ಕೂಡಾ,
ನಮ್ಮ ಗುಹೇಶ್ವರನ ಶರಣ ಅಜಗಣ್ಣನೊಳಗೆ
ನೀನು ನಿರಾಳಸಂಗಿಯಾಗಿ. |
1466.02 |
423 C112 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 115
|
ಘನಮಹಿಮಶರಣರ ಸಂಗದಿಂದ ಘನಕ್ಕೆ ಘನವೇದ್ಯವಾದ ಬಳಿಕ
ಅರಿಯಲಿಲ್ಲ, ಮರೆಯಲಿಲ್ಲ; ಕೂಡಲಿಲ್ಲ, ಅಗಲಲಿಲ್ಲ.
ಮನ ಮೇರೆದಪ್ಪಿ ನಿರವಯಲಾದ ಸುಖವ
ಶೂನ್ಯ ನಿಶ್ಶೂನ್ಯವೆಂದು ನುಡಿಯಲುಂಟೆ?
ಶಬ್ದಮುಗ್ಭವಾಗಿ ಎನ್ನ ಅಜಗಣ್ಣತಂದೆಯ ಬೆರಸಿದ ಬಳಿಕ
ಉರಿಯುಂಡ ಕರ್ಪೂರದಂತಾದೆನಯ್ಯಾ. |
1112.05 |
424 C113 |
ಮುಕ್ತಾಯಕ್ಕ | ಅಜಗಣ್ಣತಂದೆ |
| ಆಕರ ಗ್ರಂಥಗಳು |
ಮಹದೇವಯ್ಯನ ಶೂನ್ಯಸಂಪಾದನೆ 116
|
ಬ್ರಹ್ಮಪಾಶ, ವಿಷ್ಣುಮಾಯೆ ಎಂಬ ಬಲೆಯ ಬೀಸಿ,
ಹೊನ್ನು ಹೆಣ್ಣು ಮಣ್ಣು ತೋರಿ, ಮುಕ್ಕಣ್ಣನಾಡಿದ ಬೇಂಟೆಯ.
ಆಸೆಯೆಂಬ ಕುಟುಕನಿಕ್ಕಿ, ಹೇಸದೆ ಕೊಂದೆಯಲ್ಲಾ ಗುಹೇಶ್ವರಾ. |
21.02 |
425 B51 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 60‖09
|
ನಾನೆಂಬ ಅಹಂಕಾರ ತಲೆದೋರಿದಲ್ಲಿ
ಅಟಮಟ ಕುಟಿಲ ಕುಹಕವೆಂಬ ಬಿರುಗಾಳಿ ಹುಟ್ಟಿತ್ತು.
ಆ ಬಿರುಗಾಳಿ ಹುಟ್ಟಲೊಡನೆ ಜ್ಞಾನಜ್ಯೋತಿ ಕೆಟ್ಟಿತ್ತು.
ಜ್ಞಾನಜ್ಯೋತಿ ಕೆಡಲೊಡನೆ,
ನಾ ಬಲ್ಲೆ,_ಬಲ್ಲಿದರೆಂಬ ಅರುಹಿರಿಯರೆಲ್ಲರು
ತಾಮಸಕ್ಕೊಳಗಾಗಿ ಸೀಮೆದಪ್ಪಿ ಕೆಟ್ಟರು ಕಾಣಾ ಗುಹೇಶ್ವರಾ |
1290.02 |
426 B52 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಲಿಂಗಲೀಲಾವಿಲಾಸ ಚಾರಿತ್ರ 61‖10
|
ಟಿಪ್ಪಣಿ; * ಪುಟ ಸಂಖ್ಯೆ ‖ ವಚನ ಸಂಖ್ಯೆ [ಮೊದಲ ಪುಟ] « ಹಿಂದಿನ 10 41 42 43 [ಕೊನೆಯ ಪುಟ]
ಸಿಕ್ಕ ಪಲಿತಾಂಶಗಳು 427 ಇದು ಪುಟ 43 ಈ ಪುಟದಲ್ಲಿ ಪಲಿತಾಂಶಗಳು 421 ರಿಂದ 430 ವರೆಗೆ |
|
|