checking data baseConnected successfully! Sample Image
  •  

ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು

search:
ವಚನ ಸಂಖ್ಯೆ 1      A1
ಶಿಲೆಯೊಳಗಣ ಪಾವಕನಂತೆ ಉದಕದೊಳಗಣ ಪ್ರತಿಬಿಂಬದಂತೆ
ಬೀಜದೊಳಗಣ ವೃಕ್ಷದಂತೆ ಶಬ್ದದೊಳಗಣ ನಿಶ್ಶಬ್ದದಂತೆ
ಗುಹೇಶ್ವರಾ ನಿಮ್ಮ ಶರಣಸಂಬಂಧ
1.02 1 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ಹಲಗೆಯಾರ್ಯನ ಶೂನ್ಯಸಂಪಾದನೆ 1
ವಚನ ಸಂಖ್ಯೆ 2      A5
ಕಲ್ಲೊಣಗಣ ಕಿಚ್ಚು ಉರಿಯದಂತೆ, ಬೀಜದೊಳಗಣ ವೃಕ್ಷ ಉಲಿಯದಂತೆ, ತೋರಲಿಲ್ಲಾಗಿ ಬೀರಲಿಲ್ಲಾರಿಗೆಯು, ಗುಹೇಶ್ವರ ನಿಂದ ನಿಲವ ಅನುಭ(ಭಾ?)ವ ಸುಖ ಬಲ್ಲ . 2.02 5 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ಹಲಗೆಯಾರ್ಯನ ಶೂನ್ಯಸಂಪಾದನೆ 2
ವಚನ ಸಂಖ್ಯೆ 3      C1
ಆದಿ ಆಧಾರವಿಲ್ಲದಂದು, ಹಮ್ಮುಬಿಮ್ಮುಗಳಿಲ್ಲದಂದು
ಸುರಾಳನಿರಾಳವಿಲ್ಲದಂದು, ಸಚರಾಚರವೆಲ್ಲ ರಚನೆಗೆ ಬಾರದಂದು,
ಗುಹೇಶ್ವರಾ ನಿಮ್ಮ ಶರಣನುದಯಿಸಿದನಂದು.
5.02 263 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ಲಿಂಗಲೀಲಾವಿಲಾಸ ಚಾರಿತ್ರ 8.04
ವಚನ ಸಂಖ್ಯೆ 4      C2
ನಾದಬಿಂದುಗಳಿಲ್ಲದಂದು ನಿರ್ಭಯನೆಂಬ
ಗಣೇಶ್ವರನು,
ಉತ್ಪತ್ತಿ ಸ್ಥಿತಿ ಲಯವಿಲ್ಲದಂದು ಅಕ್ಷಯನೆಂಬ ಗಣೇಶ್ವರನು,
ಓದು ವೇದಂಗಳಿಲ್ಲದಂದು ಓಂಕಾರನೆಂಬ ಗಣೇಶ್ವರನು,
ಯುಗಜುಗಂಗಳಿಲ್ಲದಂದು ಊಧ್ರ್ವಮುಖನೆಂಬ ಗಣೇಶ್ವರನು,
ಗುಹೇಶ್ವರಲಿಂಗವಿಲ್ಲದಂದು ನಿರ್ಮಾಯನೆಂಬ ಗಣೇಶ್ವರನು.
6.02 264 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 5      C3
ಬ್ರಹ್ಮವಿಷ್ಣುಗಳ ಮಾಯೆ ತೊತ್ತಳದುಳಿವಂದು,
ರುದ್ರಗಣ ಪ್ರಮಥಗಣಂಗಳೆಂಬವರ
ಮಾಯೆ ಮರುಳ್ಮಾಡಿ ಕಾಡುವಂದು,
ನೊಸಲ ಕಣ್ಣು ಪಂಚಮುಖ ದಶಭುಜದವರಿಗೆ
ಮಾಯೆ ಅರ್ಧಾಂಗಿಯಾದಂದು,
ದೇವದಾನವರ ಮಾಯೆ ಅಗಿದಗಿದು ತಿಂಬಂದು,
ಅಷ್ಟಾಶೀತಿಸಹಸ್ರ ಋಷಿಗಳ
ಮಾಯೆ, ತಪೋಮದದಲ್ಲಿ ಕೆಡಹುವಂದು
ನಾನು ಮಾಯಾಕೊಲಾಹಲ (ನಿರ್ಮಾಯನೆಂಬ ಗಣೇಶ್ವರ?)ನಾಗಿರ್ದೆ
ಕಾಣಾ ಗುಹೇಶ್ವರಾ.
1404.02 265 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 6      C4
ಕೃತಯುಗದಲ್ಲಿ ನಾನು ಭಕ್ತಿ ಕಾರಣ
ಸ್ಥೂಲಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ.
ತ್ರೇತಾಯುಗದಲ್ಲಿ ನಾನು ಭಕ್ತಿ ಕಾರಣ
ಶೂನ್ಯಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ.
ದ್ವಾಪರದಲ್ಲಿ ನಾನು ಭಕ್ತಿ ಕಾರಣ
ಅನಿಮಿಷನೆಂಬ ಗಣೇಶ್ವರನಾಗಿರ್ದೆನಯ್ಯಾ.
ಕಲಿಯುಗದಲ್ಲಿ ನಾನು ಭಕ್ತಿ ಕಾರಣ
ಅಲ್ಲಮಪ್ರಭುವೆಂಬ ಗಣೇಶ್ವರ (ಜಂಗಮ?)ನಾಗಿರ್ದೆ
ಕಾಣಾ ಗುಹೇಶ್ವರಾ.
1130.02 316 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 7      B50
ಕಾಯದ ಮೊದಲಿಗೆ ಬೀಜವಾವುದೆಂದರಿಯದೀ ಲೋಕ.
ಇಂದ್ರಿಯಂಗಳು ಬೀಜವಲ್ಲ,
ಆ ಕಳಾಭೇದವಲ್ಲ! ಸ್ವಪ್ನ ಬಂದೆರಗಿತ್ತಲ್ಲಾ!
ಇದಾವಂಗೂ ಶುದ್ಧ ಸುಯಿಧಾನವಲ್ಲ ಕಾಣಾ ಗುಹೇಶ್ವರಾ.
12.02 315 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ಲಿಂಗಲೀಲಾವಿಲಾಸ ಚಾರಿತ್ರ 59.08
ವಚನ ಸಂಖ್ಯೆ 8      C6
ಹಳ್ಳದೊಳಗೊಂದು ಹುಳ್ಳಿ ಬರುತ್ತಿರಲು, ನೊರೆ ತೆರೆಗಳು ತಾಗಿದುವಲ್ಲಾ !
ಸಂಸಾರವೆಂಬ ಸಾಗರದೊಳಗೆ ಸುಖದುಃಖಗಳು ತಾಗಿದವಲ್ಲಾ !
ಇದಕ್ಕಿದು ಮೂರ್ತಿಯಾದ ಕಾರಣ ಪ್ರಳಯವಾಯಿತ್ತು ಗುಹೇಶ್ವರಾ.
47.02 317 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 9      C7
ಆಯಿತ್ತೆ ಉದಯಮಾನ, ಹೋಯಿತ್ತೆ ಅಸ್ತಮಾನ.
ಅಳಿದವಲ್ಲಾ ನೀರಲಾದ ನಿರ್ಮಿತಂಗಳೆಲ್ಲವು !
ಕತ್ತಲೆಗವಿಯಿತ್ತು ಮೂರು ಲೋಕದೊಳಗೆ.
ಇದರಚ್ಚುಗವೇನು ಹೇಳಾ ಗುಹೇಶ್ವರಾ?
41.02 318 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 10      C8
ಸಂಸಾರವೆಂಬ ಹೆಣ ಬಿದ್ದಿದ್ದಡೆ, ತಿನಬಂದ ನಾಯ ಜಗಳವ ನೋಡಿರೆ !
ನಾಯ ಜಗಳವ ನೋಡಿ ಹೆಣ[ನೆದ್ದು] ನಗುತ್ತಿದೆ.
ಗುಹೇಶ್ವರನೆಂಬ ಲಿಂಗವಲ್ಲಿಲ್ಲ ಕಾಣಿರೆ.
46.02 319 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????

[ಮೊದಲ ಪುಟ]  12345678910ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 121 ಇದು ಪುಟ 1 ಈ ಪುಟದಲ್ಲಿ ಪಲಿತಾಂಶಗಳು 1 ರಿಂದ 10 ವರೆಗೆ