ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು
| ವಚನ ಸಂಖ್ಯೆ 1 A1 |
ಶಿಲೆಯೊಳಗಣ ಪಾವಕನಂತೆ ಉದಕದೊಳಗಣ ಪ್ರತಿಬಿಂಬದಂತೆ ಬೀಜದೊಳಗಣ ವೃಕ್ಷದಂತೆ ಶಬ್ದದೊಳಗಣ ನಿಶ್ಶಬ್ದದಂತೆ ಗುಹೇಶ್ವರಾ ನಿಮ್ಮ ಶರಣಸಂಬಂಧ |
1.02 |
1 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
ಹಲಗೆಯಾರ್ಯನ ಶೂನ್ಯಸಂಪಾದನೆ 1
|
| ವಚನ ಸಂಖ್ಯೆ 2 A5 |
| ಕಲ್ಲೊಣಗಣ ಕಿಚ್ಚು ಉರಿಯದಂತೆ, ಬೀಜದೊಳಗಣ ವೃಕ್ಷ ಉಲಿಯದಂತೆ, ತೋರಲಿಲ್ಲಾಗಿ ಬೀರಲಿಲ್ಲಾರಿಗೆಯು, ಗುಹೇಶ್ವರ ನಿಂದ ನಿಲವ ಅನುಭ(ಭಾ?)ವ ಸುಖ ಬಲ್ಲ . |
2.02 |
5 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
ಹಲಗೆಯಾರ್ಯನ ಶೂನ್ಯಸಂಪಾದನೆ 2
|
| ವಚನ ಸಂಖ್ಯೆ 4 C2 |
ನಾದಬಿಂದುಗಳಿಲ್ಲದಂದು ನಿರ್ಭಯನೆಂಬ
ಗಣೇಶ್ವರನು,
ಉತ್ಪತ್ತಿ ಸ್ಥಿತಿ ಲಯವಿಲ್ಲದಂದು ಅಕ್ಷಯನೆಂಬ ಗಣೇಶ್ವರನು,
ಓದು ವೇದಂಗಳಿಲ್ಲದಂದು ಓಂಕಾರನೆಂಬ ಗಣೇಶ್ವರನು,
ಯುಗಜುಗಂಗಳಿಲ್ಲದಂದು ಊಧ್ರ್ವಮುಖನೆಂಬ ಗಣೇಶ್ವರನು,
ಗುಹೇಶ್ವರಲಿಂಗವಿಲ್ಲದಂದು ನಿರ್ಮಾಯನೆಂಬ ಗಣೇಶ್ವರನು. |
6.02 |
264 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 5 C3 |
ಬ್ರಹ್ಮವಿಷ್ಣುಗಳ ಮಾಯೆ ತೊತ್ತಳದುಳಿವಂದು,
ರುದ್ರಗಣ ಪ್ರಮಥಗಣಂಗಳೆಂಬವರ
ಮಾಯೆ ಮರುಳ್ಮಾಡಿ ಕಾಡುವಂದು,
ನೊಸಲ ಕಣ್ಣು ಪಂಚಮುಖ ದಶಭುಜದವರಿಗೆ
ಮಾಯೆ ಅರ್ಧಾಂಗಿಯಾದಂದು,
ದೇವದಾನವರ ಮಾಯೆ ಅಗಿದಗಿದು ತಿಂಬಂದು,
ಅಷ್ಟಾಶೀತಿಸಹಸ್ರ ಋಷಿಗಳ
ಮಾಯೆ, ತಪೋಮದದಲ್ಲಿ ಕೆಡಹುವಂದು
ನಾನು ಮಾಯಾಕೊಲಾಹಲ (ನಿರ್ಮಾಯನೆಂಬ ಗಣೇಶ್ವರ?)ನಾಗಿರ್ದೆ
ಕಾಣಾ ಗುಹೇಶ್ವರಾ.
|
1404.02 |
265 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 6 C4 |
ಕೃತಯುಗದಲ್ಲಿ ನಾನು ಭಕ್ತಿ ಕಾರಣ
ಸ್ಥೂಲಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ.
ತ್ರೇತಾಯುಗದಲ್ಲಿ ನಾನು ಭಕ್ತಿ ಕಾರಣ
ಶೂನ್ಯಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ.
ದ್ವಾಪರದಲ್ಲಿ ನಾನು ಭಕ್ತಿ ಕಾರಣ
ಅನಿಮಿಷನೆಂಬ ಗಣೇಶ್ವರನಾಗಿರ್ದೆನಯ್ಯಾ.
ಕಲಿಯುಗದಲ್ಲಿ ನಾನು ಭಕ್ತಿ ಕಾರಣ
ಅಲ್ಲಮಪ್ರಭುವೆಂಬ ಗಣೇಶ್ವರ (ಜಂಗಮ?)ನಾಗಿರ್ದೆ
ಕಾಣಾ ಗುಹೇಶ್ವರಾ. |
1130.02 |
316 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 8 C6 |
ಹಳ್ಳದೊಳಗೊಂದು ಹುಳ್ಳಿ ಬರುತ್ತಿರಲು, ನೊರೆ ತೆರೆಗಳು ತಾಗಿದುವಲ್ಲಾ !
ಸಂಸಾರವೆಂಬ ಸಾಗರದೊಳಗೆ ಸುಖದುಃಖಗಳು ತಾಗಿದವಲ್ಲಾ !
ಇದಕ್ಕಿದು ಮೂರ್ತಿಯಾದ ಕಾರಣ ಪ್ರಳಯವಾಯಿತ್ತು ಗುಹೇಶ್ವರಾ. |
47.02 |
317 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 9 C7 |
ಆಯಿತ್ತೆ ಉದಯಮಾನ, ಹೋಯಿತ್ತೆ ಅಸ್ತಮಾನ.
ಅಳಿದವಲ್ಲಾ ನೀರಲಾದ ನಿರ್ಮಿತಂಗಳೆಲ್ಲವು !
ಕತ್ತಲೆಗವಿಯಿತ್ತು ಮೂರು ಲೋಕದೊಳಗೆ.
ಇದರಚ್ಚುಗವೇನು ಹೇಳಾ ಗುಹೇಶ್ವರಾ?
|
41.02 |
318 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 10 C8 |
ಸಂಸಾರವೆಂಬ ಹೆಣ ಬಿದ್ದಿದ್ದಡೆ, ತಿನಬಂದ ನಾಯ ಜಗಳವ ನೋಡಿರೆ !
ನಾಯ ಜಗಳವ ನೋಡಿ ಹೆಣ[ನೆದ್ದು] ನಗುತ್ತಿದೆ.
ಗುಹೇಶ್ವರನೆಂಬ ಲಿಂಗವಲ್ಲಿಲ್ಲ ಕಾಣಿರೆ. |
46.02 |
319 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
[ಮೊದಲ ಪುಟ] 1 2 3 4 5 6 7 8 9 10 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 121 ಇದು ಪುಟ 1 ಈ ಪುಟದಲ್ಲಿ ಪಲಿತಾಂಶಗಳು 1 ರಿಂದ 10 ವರೆಗೆ |
|
|