ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು
| ವಚನ ಸಂಖ್ಯೆ 92 C89 |
ತನುವಿಡಿದನಾಗಿ ಅನುವನರಿಯದೆ ಕೆಟ್ಟೆನು.
ಮನವಿಡಿದೆನಾಗಿ ಅರಿವು ಉಳಿಯದೆ ಕೆಟ್ಟೆನು.
ಭಾವದ ಬಯಕೆ ಹಿಂಗದಾಗಿ ವಿಯೋಗಿಯಾಗಿ ಕೆಟ್ಟೆನು.
ಅರಿವ ನುಡಿದು ಮರಹಿಗೊಳಗಾದೆನು.
ಎನ್ನ ಕಾಣದೆ ಭಿನ್ನಜ್ಞಾನಿಯಾದೆನು.
ಅಜಗಣ್ಣನೆಂಬ ಮಹಿಮನು ಘನವೇದ್ಯನಾಗಿ
ಎನ್ನ ಮತಿಗೆ ಮರವೆಯ ಮಾಡಿಹೋದನು. |
1116.05 |
400 |
ಮುಕ್ತಾಯಕ್ಕ | ಅಜಗಣ್ಣ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 93 C90 |
ತನು ಉಂಟೆಂದಡೆ ಪಾಶಬದ್ಧ, ಮನ ಉಂಟೆಂದಡೆ ಭವಕ್ಕೆ ಬೀಜ.
ಅರಿವ ನುಡಿದು ಕೆಟ್ಟೆನೆಂದರೆ ಅದೇ ಅಜ್ಞಾನ.
ಭಾವದಲ್ಲಿ ಸಿಲುಕಿದೆನೆಂಬ ಮಾತು ಬಯಲ ಭ್ರಮೆ ನೋಡಾ.
ಒಮ್ಮೆ ಕಂಡೆ, ಒಮ್ಮೆ ಕಾಣೆ, ಒಮ್ಮೆ ಕೂಡಿದೆ, ಒಮ್ಮೆ ಅಗಲಿದೆ
ಎಂದಡೆ ಕರ್ಮ ಬೆಂಬತ್ತಿ ಬಿಡದು.
ನಿನ್ನೊಳಗೆ ನೀ ತಿಳಿದುನೋಡಲು ಭಿನ್ನವುಂಟೆ?
ಗುಹೇಶ್ವರಲಿಂಗವನರಿವಡೆ ನೀನೆಂದೇ ತಿಳಿದು ನೋಡಾ ಮರುಳೆ |
1223.02 |
401 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 94 C91 |
ಹಿಡಿದಾಚಾರವ ಬಿಡದನ್ನಕ್ಕರ,
ಎನ್ನ ಅರಿವ ಮರೆಯದನ್ನಕ್ಕರ,
ಎನ್ನ ಮನವ ಸುಡದನ್ನಕ್ಕರ,
ಎನ್ನ ಬೆಡಗಿನ ಗುರುವ ತೊರೆಯದನ್ನಕ್ಕರ,
ಸುಸರವೆಂತಪ್ಪುದೊ ಹೇಳಾ?
ಹೋಹ ಬಟ್ಟೆಯನರಿಯದನ್ನಕ್ಕರ
ತಾನಾಗಬಾರದು ಕಾಣಾ, ಎನ್ನ ಅಜಗಣ್ಣತಂದೆಯಂತೆ. |
1133.05 |
402 |
ಮುಕ್ತಾಯಕ್ಕ | ಅಜಗಣ್ಣತಂದೆ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 95 C92 |
ಇಲ್ಲದ ಶಂಕೆಯನು ಉಂಟೆಂದು ಭಾವಿಸಿದಡೆ
ಅದು ಕಣ್ಣ ಮುಂದೆ ರೂಪಾಗಿ ಕಾಡುತ್ತಿಪ್ಪುದು.
ಇಲ್ಲದ ತನುವ ಉಂಟೆಂಬನ್ನಕ್ಕರ,
ಅದೇ ಮಾಯೆಯಾಗಿ ಕಾಡುತ್ತಿಪ್ಪುದು.
ನಿಃಕ್ರಿಯಾಲಿಂಗಕ್ಕೆ ಕ್ರಿಯಾಂತಲ್ಲದೆ ಆಗದೆಂಬವರ
ಸಂದು ಸಂಶಯ ಮುಂದುಗೆಡಿಸುತ್ತಿಪ್ಪುದು ಕೇಳಾ.
ಮನವ ಮನೆಯ ಮಾಡಿಕೊಂಡಿಪ್ಪ
ಲಿಂಗದ ಅನುವನರಿಯಬಲ್ಲಡೆ,
ಗುಹೇಶ್ವರಲಿಂಗ ದೂರವಿಲ್ಲ ಕೇಳಾ ಮರುಳೆ. |
938.02 |
403 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 96 C93 |
ತನುವಿನೊಳಗೆ ತನುವಾಗಿ, ಮನದೊಳಗೆ ಮನವಾಗಿ,
ಪ್ರಾಣದೊಳಗೆ ಪ್ರಾಣವಾಗಿಪ್ಪುದೆಂದಡೆ
ಕೆಲಬರಿಗೆ ಅರಿಯಬಪ್ಪುದೆ?
ಅಂತರಂಗದೊಳಗೆ ಅದೆ ಎಂದಡೇನು?
ಮನ ಮುಟ್ಟುವನ್ನಕ್ಕರ ಕಾಣಬಾರದು.
ಬಹಿರಂಗದಲ್ಲಿ ಅದೆ ಎಂದಡೇನು?
ಪೂಜಿಸುವನ್ನಕ್ಕರ ಕಾಣಬಾರದು.
ಸಾಕಾರವಲ್ಲದ ನಿರಾಕಾರ ಲಿಂಗವು
ವ್ಯಾಕುಲವುಳ್ಳನ್ನಕ್ಕರ ಸಾಧ್ಯವಾಗದು.
ಎನ್ನ ಮನದೊಳಗೆ ಘನವನನುಗೊಳಿಸಿ ತೋರುವರಿಲ್ಲದ ಕಾರಣ
ಎನ್ನ ಅಜಗಣ್ಣನಿಕ್ಕಿದ ದಸರಿದೊಡಕಿಂಗೆ ಬೆರಗಾದೆ ಕಾಣಾ ಪ್ರಭುವೆ? |
1117.05 |
404 |
ಮುಕ್ತಾಯಕ್ಕ | ಅಜಗಣ್ಣ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 97 C94 |
ತೆರಹಿಲ್ಲದ ಘನ ಕುರುಹಿಂಗೆ ಬಾರದ ಮುನ್ನ
ತೋರಿದವರಾರು ಹೇಳಾ ಮಹಾ ಘನ ಲಿಂಗೈಕ್ಯವನು ?
ಆರೂಢದ ಕೂಟದಲ್ಲಿ ನಾನಾರುವ ಸಾಕ್ಷಿಯ ಕಾಣೆನು.
ಬೇರೆ ಮಾಡಿ ನುಡಿಯಬಹುದೆ ಪ್ರಾಣಲಿಂಗವನು ?
ಅರಿವು ಸ್ವಯವಾಗಿ ಮರಹು ನಷ್ಟವಾದಲ್ಲಿ
ಗುಹೇಶ್ವರಾ ನಿಮ್ಮ ಶರಣನುಪಮಾತೀತನು
|
682.02 |
405 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 98 C95 |
ಗುರುವಚನದಿಂದಲ್ಲದೆ ಲಿಂಗವನರಿಯಬಾರದು.
ಗುರುವಚನದಿಂದಲ್ಲದೆ ಜಂಗಮವನರಿಯಬಾರದು.
ಗುರುವಚನದಿಂದಲ್ಲದೆ ಪ್ರಸಾದವನರಿಯಬಾರದು.
ಗುರುವಚನದಿಂದಲ್ಲದೆ ತನ್ನ ತಾನರಿಯಬಾರದು.
ಹಿಂದಣ ಜನ್ಮದಲ್ಲಿ ಲಿಂಗವ ಪೂಜಿಸಿ ಇಂದು ಜ್ಞಾನೋದಯವಾದಡೆ
ಗುರುವಿಲ್ಲದ ಮುನ್ನ ಆಯಿತ್ತೆನ್ನಬಹುದೆ ?
ತನ್ನಲ್ಲಿ ತಾನು ಸನ್ನಹಿತನಾದೆಹೆನೆಂದಡೆ ಗುರುವಿಲ್ಲದೆ ಆಗದು ಕೇಳಾ.
ಎನ್ನ ಅಜಗಣ್ಣನೆಂಬ ಗುರುವಿಲ್ಲದೆ
ಆರೂಢಿಯ ಕೂಟ ಸಮನಿಸದು ಕೇಳಾ. |
1111.05 |
406 |
ಮುಕ್ತಾಯಕ್ಕ | ಅಜಗಣ್ಣ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 99 C96 |
ಗುರುವಿಂಗೂ ಶಿಷ್ಯಂಗೂ,
ಆವುದು ದೂರ? ಆವುದು ಸಾರೆ? ಎಂಬುದನು, ಆರುಬಲ್ಲರು?
ಗುರುವೆ ಶಿಷ್ಯನಾದ ತನ್ನ ವಿನೋದಕ್ಕೆ, ಶಿಷ್ಯನೆ ಗುರುವಾದ ತನ್ನ ವಿನೋದಕ್ಕೆ.
ಕರ್ಮವೆಂಬ ಕೌಟಿಲ್ಯ ಎಡೆವೊಕ್ಕ ಕಾರಣ, ಭಿನ್ನವಾಗಿ ಇದ್ದಿತ್ತೆಂದಡೆ,
ಅದು ನಿಶ್ಚಯವಹುದೆ ?
ಆದಿ ಅನಾದಿಯಿಂದತ್ತತ್ತ ಮುನ್ನಲಾದ
ಪರತತ್ವಮಂ ತಿಳಿದು ನೋಡಲು,
ನೀನೆ ಸ್ವಯಂ ಜ್ಯೋತಿಪ್ರಕಾಶನೆಂದರಿಯಲು,
ನಿನಗೆ ನೀನೆ ಗುರುವಲ್ಲದೆ ನಿನ್ನಿಂದಧಿಕವಪ್ಪ ಗುರುವುಂಟೆ ?
ಇದು ಕಾರಣ ಗುಹೇಶ್ವರಲಿಂಗವು ತಾನೆ ಎಂಬುದನು
ತನ್ನಿಂದ ತಾನೆ ಅರಿಯಬೇಕು ನೋಡಾ. |
1165.02 |
407 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 100 C97 |
ತನ್ನ ತಾನರಿದವಂಗೆ ಅರಿವೆ ಗುರು.
ಅರಿವರತು ಮರಹು ನಷ್ಟವಾದಲ್ಲಿ, ದೃಷ್ಟನಷ್ಟವೆ ಗುರು.
ದೃಷ್ಟನಷ್ಟವೆ ಗುರು ತಾನಾದಲ್ಲಿ,
ಮುಟ್ಟಿ ತೋರಿದವರಿಲ್ಲದಡೇನು?
ಸಹಜವ ನೆಲೆಗೊಳಿಸುವ ನಿರ್ಣಯ ನಿಷ್ಪತ್ತಿಯೆ ಗುರು ನೋಡಾ.
ಗುರು ತಾನಾದಡೂ ಗುರುವಿಡಿದಿರಬೇಕು ಎನ್ನ ಅಜಗಣ್ಣನಂತೆ. |
1115.05 |
408 |
ಮುಕ್ತಾಯಕ್ಕ | ಅಜಗಣ್ಣ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 101 C98 |
ಅರಿವನರಿದಹೆನೆಂಬುದು ಮರವೆ,
ಮರಹ ಮರೆದಹೆನೆಂಬುದು ಮರವೆ,
ಸಾಕಾರ ನಷ್ಟ ನಿರಾಕಾರ ದೃಷ್ಟವೆಂಬುದು ಭಾವದ ಬಳಲಿಕೆ.
ಗುರುವೆಂಬುದು ಶಿಷ್ಯನೆಂದಲ್ಲಿಯೆ ಹೋಯಿತ್ತು.
ಶಿಷ್ಯನೆಂಬುದು ಗುರುವೆಂದಲ್ಲಿಯೆ ಹೋಯಿತ್ತು.
ನಿರ್ಣಯದಲ್ಲಿ ನಿಜೈಕ್ಯನಾದಹೆನೆಂದಡೆ, ಎಚ್ಚರಿಕೆಯಲ್ಲಿ ತಪ್ಪಿತ್ತು.
ಸಹಜ ಸಂಬಂಧಕ್ಕೆ ಗುರುವಲ್ಲದೆ ಅಸಹಜಕ್ಕೆ ಗುರುವುಂಟೆ ?
ಗುಹೇಶ್ವರಲಿಂಗದಲ್ಲಿ ಪರವೆಂದಲ್ಲಿ ಗುರುವುಂಟಲ್ಲದೆ
ಸ್ವಯವೆಂದಲ್ಲಿ ನುಡಿಯಲಿಲ್ಲ. |
830.02 |
409 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
[ಮೊದಲ ಪುಟ] 1 2 3 4 5 6 7 8 9 10 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 121 ಇದು ಪುಟ 10 ಈ ಪುಟದಲ್ಲಿ ಪಲಿತಾಂಶಗಳು 91 ರಿಂದ 100 ವರೆಗೆ |
|
|