checking data baseConnected successfully! Sample Image
  •  

ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು

search:
ವಚನ ಸಂಖ್ಯೆ 102      C99
ಅದ್ವೈತವ ನೆಲೆಗೊಳಿಸಿ ಎರಡಳಿದೆನೆಂಬವರು
ಶಿಶುಕಂಡ ಕನಸಿನಂತಿರಬೇಕಲ್ಲದೆ,
ನುಡಿದು ಹೇಳುವನ್ನಕ್ಕರ ಭಿನ್ನವಲ್ಲದೇನು ಹೇಳಾ ?
ಅರಿವರತು ಮರಹು ನಷ್ಟವಾಗಿ ಗುರುವ ತೋರಿದೆನೆಂಬರು.
ಇದಿರಿಂಗೆ ಕರುಳಕಲೆಯನರುಹುವ ಪರಿಯೆಂತು ಹೇಳಾ ?
ಮನದ ಕೊನೆಯ ಮೊನೆಯ ಮೇಲಣ ಅರಿವಿನ ಕಣ್ಣಮುಂದೆ
ಸ್ವಯಂಪ್ರಕಾಶ ತೋರುತ್ತಿದ್ದಡೆ ತಾನಾಗಬಲ್ಲನೆ ?
ನೆರೆಯರಿತು ಮರೆಯಬಲ್ಲಡೆ
ಎನ್ನ ಅಜಗಣ್ಣನಂತೆ ಶಬ್ದಮುಗ್ಭನಾಗಿರಬೇಕಲ್ಲದೆ,
ಶಬ್ದಸಂದಣಿಯ ಮಾತು ಸಯವಲ್ಲ ನೋಡಯ್ಯಾ.
1102.05 410 ಮುಕ್ತಾಯಕ್ಕ ಅಜಗಣ್ಣ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 103      C100
ಮಾತೆಂಬುದು ಜ್ಯೋತಿರ್ಲಿಂಗ, ಸ್ವರವೆಂಬುದು ಪರತತ್ವ;
ತಾಳೋಷ* ಸಂಪುಟವೆಂಬುದು ನಾದಬಿಂದುಕಳಾತೀತ.
ಗುಹೇಶ್ವರನ ಶರಣರು
ನುಡಿದು ಸೂತಕಿಗಳಲ್ಲ ಕೇಳಾ ಮರುಳೆ
1463.02 411 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 104      C101
ನಡೆದು ನಡೆದು ನಡೆಯ ಕಂಡವರು
ನುಡಿದು ನುಡಿದು ಹೇಳುತ್ತಿಹರೆ?
ನುಡಿದು ನುಡಿದು ಹೇಳುವನ್ನಕ್ಕರ
ನಡೆದುದೆಲ್ಲಾ ಹುಸಿಯೆಂಬೆನು.
ಮಾತಿನ ಮಥನದಿಂದಾದ ಅರಿವು
ಕರಣ ಮಥನದಿಂದಾದುದಲ್ಲದೆ,
ಅನುಪಮ ಸ್ವರಭೇದವಾದ ಪರಿ ಎಂತು ಹೇಳಾ?
ಇದಿರ ಗೆಲಬೇಕೆಂದು ನುಡಿದುಕೊಂಡಡೇನು,
ಮನಕ್ಕೆ ಮನವೆ ಸಾಕ್ಷಿಯಾಗಿ ನಿಃಪತಿಯಲ್ಲ ನೋಡಾ?
ಎನ್ನ ಅಜಗಣ್ಣತಂದೆ ಶಬುದಕ್ಕೆ ಹೇಸಿ ಮುಗುದನಾದನು.
1120.05 412 ಮುಕ್ತಾಯಕ್ಕ ಅಜಗಣ್ಣ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 105      C102
ತನ್ನ ತಾನರಿದಡೆ ನುಡಿಯೆಲ್ಲ ತತ್ವ ನೋಡಾ!
ತನ್ನ ತಾ ಮರೆದಡೆ ನುಡಿಯೆಲ್ಲ ಮಾಯೆ ನೋಡಾ!
ಅರಿದು ಮರೆದ ಶಿವಯೋಗಿಯ ಶಬ್ದವೆಲ್ಲವು
ಉಪದೇಶವಲ್ಲದೆ ಭಿನ್ನವುಂಟೆ?
ನಿನ್ನ ಮನದ ಕಳವಳವ ತಿಳುಹಲೆಂದು ಮಾತನಾಡಿಸಿ ನೋಡಿದಡೆ,
ಎನ್ನ ಮನದೊಳಗೆ ಕಂದು ಕಲೆ ಎಂಬುದಿಲ್ಲ ನೋಡಾ!
ನಮ್ಮ ಗುಹೇಶ್ವರಲಿಂಗಕ್ಕೆ ನೀನು ಕರುಣದ ಶಿಶುವಾದ ಕಾರಣ
ಬಾಯ್ದೆಗೆದೆನಲ್ಲದೆ, ಭಿನ್ನವುಂಟೆ ಹೇಳಾ ಮರುಳೆ?
1219.02 413 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 106      C103
ನುಡಿಯ ಹಂಗಿನ್ನೂ ನಿಮಗೆ ಹಿಂಗದು,
ನಡೆಯನೆಂತು ಪರರಿಗೆ ಹೇಳುವಿರಿ?
ಒಡಲ ಹಂಗಿನ ಸುಳುಹು ಬಿಡದು;
ಎನ್ನೊಡನೆ ಮತ್ತೇತರ ಅನುಭವವಣ್ಣಾ?
ತಾನಾದಲ್ಲದೆ ಇದಿರಿಂಗೆ ಹೇಳಬಹುದೆ?
ಅರಿವ ತೋರಬಲ್ಲಡೆ ತನ್ನನರುಹದೆ ಅರಿವನು ಕಾಣಾ ಎನ್ನ ಅಜಗಣ್ಣತಂದೆ.
1123.05 414 ಮುಕ್ತಾಯಕ್ಕ ಅಜಗಣ್ಣತಂದೆ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 107      C104
ಅಂಗದ ಕಳೆ ಲಿಂಗದಲ್ಲಿ ಅರತ ಬಳಿಕ,
ಅಂಗವೆಂಬ ಶಂಕೆಯಿಲ್ಲ ನೋಡಾ ಶರಣಂಗೆ.
ಪ್ರಾಣದ ಕಳೆ ಅರಿವಿನಲ್ಲಿ ಅರತ ಬಳಿಕ,
ಶಬ್ದಸಂದಣಿಗೆ ಹಂಗಿಲ್ಲ ನೋಡಾ.
ಶರಣ ನಡೆದಡೆ ನಿರ್ಗಮನಿ ನುಡಿದಡೆ ನಿಶ್ಶಬ್ದಿ!
ಗುಹೇಶ್ವರನ ಶರಣಂಗೆ ಕುರುಹಿಲ್ಲ ಕೇಳಾ ಎಲೆ ಅವ್ವಾ.
701.02 415 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 108      C105
ಕೈಯದು ಕುರುಹು, ಬಾಯದು ಬೊಬ್ಬೆ.
ಉಲಿಯದಿರೊ ಭಾವಾ, ಉಲಿಯದಿರೊ ಭಾವಾ!
ವಾರಿಕಲ್ಲ ಕೊಡನಲ್ಲಿ ಮುತ್ತು ಮಾಣಿಕವ ತುಂಬಿ,
ಎತ್ತುವರಿಲ್ಲದೆ ಸಖಿಯನರಸುತಿಪ್ಪೆ.
ಮನದ ತನುವಿನಲ್ಲಿ, ಆ ತನುವಿನ ಮನದಲ್ಲಿ
ತನಗೆ ತಾನೆತ್ತಿಕೊಂಡಡೆ,
ಮನ ಮೇರೆದಪ್ಪಿ ಕರಗಿ ಉಕ್ಕಿತ್ತು ನಮ್ಮ ಅಜಗಣ್ಣನಯೋಗ.
1109.05 416 ಮುಕ್ತಾಯಕ್ಕ ಅಜಗಣ್ಣ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 109      C106
ಅರಿವುಗೆಟ್ಟು ಮರ[ಕುರು ?]ಹಳಿದು
ಭಾವಭ್ರಾಂತು ನಿಭ್ರಾಂತವಾದವರ ಕೈಯಲ್ಲಿ
ಕರುಹನರಸುವರೆ ಹೇಳಾ ?
ತಾನಳಿದು ತಾನುಳಿದು ತಾನುತಾನಾದ ನಿಜಶರಣಂಗೆ
ಅಂತರಂಗದಲ್ಲಿ ಒಂದು ಅರಿವುಂಟೆ ?
ಗುಹೇಶ್ವರನ ಶರಣರ ನಿಲವು
ಕಾಯಗೊಂಡವರ ಕಣ್ಣಿಂಗೆ ಸಂದೇಹವಾಗಿಪ್ಪುದು,
ನಿಸ್ಸಂದೇಹಿಗಳಿಗೆ ನಿಜವಾಗಿಪ್ಪುದು ನೋಡಾ ಮರುಳೆ
841.02 417 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 110      C107
ನುಡಿಯೆನೆಂಬಲ್ಲಿಯೆ ನುಡಿ ಅದೆ.
ನಡೆಯೆನೆಂಬಲ್ಲಿಯೆ ನಡೆ ಅದೆ.
ಭಾವಿಸೆನೆಂಬಲ್ಲಿಯೆ ಭಾವ ಅದೆ.
ಅರಿದು ಮರೆದೆನೆಂಬಲ್ಲಿಯೆ ಅರಿವು ಮರವೆ ಅದೆ.
ಅಂಗದಲ್ಲಿ ಲಿಂಗ ಲೀಯವಾಯಿತ್ತೆಂದಡೆ
ಅಲ್ಲಿಯೆ ಅಂಗ ಅದೆ.
ಅನಂಗಸಂಗಿಯಾದೆನೆಂಬಲ್ಲಿಯೆ ವಿಷಯಸೂತಕ ಅದೆ.
ನಾನೆ ನಾನಾದೆನೆಂಬಲ್ಲಿಯೆ ನೀನೆಂಬುದು ಅದೆ.
ಅರಿದು ಮರೆದ ಪರಿ ಎಂತು ಹೇಳಾ?
ಅರಿವು ನಷ್ಟವಾಗಿ, ಮರಹು ಲಯವಾಗಿಪ್ಪಡೆ
ಎನ್ನ ಅಜಗಣ್ಣತಂದೆಯಲ್ಲದೆ ಮತ್ತಾರನೂ ಕಾಣೆ
1124.05 418 ಮುಕ್ತಾಯಕ್ಕ ಅಜಗಣ್ಣತಂದೆ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 111      C108
ಅಂಗ ಅನಂಗವೆಂಬೆರಡೂ ಅಳಿದು ನಿಜದಲ್ಲಿ ನಿಂದ ಲಿಂಗೈಕ್ಯನ
ಅಂಗದಲುಳ್ಳ ಕ್ರೀಗಳೆಲ್ಲವೂ ಲಿಂಗಕ್ರೀಗಳು ನೋಡಾ.
ಮನೋಲಯವಾಗಿಪ್ಪ ಲಿಂಗೈಕ್ಯನ ಅನುಭಾವವೆಲ್ಲವೂ
ಜ್ಞಾನನಷ್ಟ ಶಬ್ದ ನೋಡಾ.
ತನ್ನಲ್ಲಿ ತಾನು ತದ್ಗತವಾಗಿಪ್ಪ ಶಿವಯೋಗಿಗೆ
ಭಿನ್ನವಿಲ್ಲ ನೋಡಾ ಗುಹೇಶ್ವರ ಸಾಕ್ಷಿಯಾಗಿ
696.02 419 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????

[ಮೊದಲ ಪುಟ]  « ಹಿಂದಿನ 10111213[ಕೊನೆ ಪುಟ]


ಸಿಕ್ಕ ಪಲಿತಾಂಶಗಳು 121 ಇದು ಪುಟ 11 ಈ ಪುಟದಲ್ಲಿ ಪಲಿತಾಂಶಗಳು 101 ರಿಂದ 110 ವರೆಗೆ