checking data baseConnected successfully! Sample Image
  •  

ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು

search:
ವಚನ ಸಂಖ್ಯೆ 112      C109
ಸಿಡಿಲುಹೊಯ್ದ ಬಾವಿಗೆ ಸೋಪಾನವೇಕೊ?
ನೆರೆಯರಿದ ಬಳಿಕ ಮತ್ತೆ ಮತಿ ಹುಟ್ಟಲುಂಟೆ?
ಸೊಡರುಳ್ಳ ಮನೆಗೆ ಮತ್ತೆ ತಮಂಧವೆಂಬುದೇನೊ?
ತನ್ನಲ್ಲಿ ತಾನು ತದ್ಗತವಾದ ಬಳಿಕ
ಬೊಮ್ಮ ಪರಬೊಮ್ಮವಾದೆನೆಂಬುದಿಲ್ಲ ನೋಡಾ ಎನ್ನ ಅಜಗಣ್ಣತಂದೆಗೆ.
1130.05 420 ಮುಕ್ತಾಯಕ್ಕ ಅಜಗಣ್ಣತಂದೆ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 113      C110
ನುಡಿಯಿಂದ ನಡೆಗೆಟ್ಟಿತ್ತು ನಡೆಯಿಂದ ನುಡಿಗೆಟ್ಟಿತ್ತು.
ಭಾವದ ಗುಸುಟು ಅದು ತಾನೆ ನಾಚಿ ನಿಂದಿತ್ತು.
ಗುಹೇಶ್ವರನೆಂಬ ಅರಿವು ಸಿನೆ ಬಂಜೆಯಾಯಿತ್ತು.
691.02 421 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 114      C111
ಅಹುದಹುದು ಶಿವಶರಣರ ಮಹಿಮೆ ಆರಿಗೆಯೂ ಕಾಣಬಾರದು.
ಕಬ್ಬುನ ಉಂಡ ನೀರಿನಂತೆ, ಕಬ್ಬಿಸಿಲುಂಡ ಅರಿಸಿನದಂತೆ,
ಉರಿಯೊಳಡಗಿದ ಕರ್ಪುರದಂತೆ, ಬಯಲನಪ್ಪಿದ ವಾಯುವಿನಂತೆ
ಇಪ್ಪ ನಿಲವು ನುಡಿದು ಹೇಳಿಹೆನೆಂಬ ಮಾತಿಂಗೆ ಅಳವಡುವುದೆ?
ಅರಿವಡೆ ಮತಿಯಿಲ್ಲ, ನೆನೆವಡೆ ಮನವಿಲ್ಲ
ಎನ್ನ ಅಜಗಣ್ಣ ತಂದೆಯನೊಳಕೊಂಡಿಪ್ಪ ನಿಮ್ಮ ಮಹಿಮೆಗೆ
ನಮೋ ನಮೋ ಎನುತಿರ್ದೆನು.
1101.05 422 ಮುಕ್ತಾಯಕ್ಕ ಅಜಗಣ್ಣ ತಂದೆ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 115      C112
ಮುಕ್ತಿಗೆ ಮುಖವಾಗಿ ಯುಕ್ತಿಗೆ ಹೊರಗಾಗಿ
ಅರಿವಿಂಗೆ ಅರಿವಾಗಿಪ್ಪ ಭೇದವು
ಎನಗೆ ಕಾಣಬಂದಿತ್ತು ನೋಡಾ.
ನಿನ್ನ ಒಳಗ ಒರೆದು ನೋಡಿದಡೆ,
ಒರೆದೊರೆಯಿಲ್ಲದ ಚಿನ್ನದ ಪರಿಮಳ ಎನ್ನ ಮನವನಾವರಿಸಿ
ಪರಮಸುಖದ ಪರಿಣಾಮವನು ಒಳಕೊಂಡಿತ್ತು ನೋಡಾ.
ಈ ಕುರುಹಿನ ಮೊಳೆಯ
ಬರಿಯ ಬಯಲಲ್ಲಿ ನಿಲಿಸಿ ನೋಡಿ ಕೂಡಾ,
ನಮ್ಮ ಗುಹೇಶ್ವರನ ಶರಣ ಅಜಗಣ್ಣನೊಳಗೆ
ನೀನು ನಿರಾಳಸಂಗಿಯಾಗಿ.
1466.02 423 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 116      C113
ಘನಮಹಿಮಶರಣರ ಸಂಗದಿಂದ ಘನಕ್ಕೆ ಘನವೇದ್ಯವಾದ ಬಳಿಕ
ಅರಿಯಲಿಲ್ಲ, ಮರೆಯಲಿಲ್ಲ; ಕೂಡಲಿಲ್ಲ, ಅಗಲಲಿಲ್ಲ.
ಮನ ಮೇರೆದಪ್ಪಿ ನಿರವಯಲಾದ ಸುಖವ
ಶೂನ್ಯ ನಿಶ್ಶೂನ್ಯವೆಂದು ನುಡಿಯಲುಂಟೆ?
ಶಬ್ದಮುಗ್ಭವಾಗಿ ಎನ್ನ ಅಜಗಣ್ಣತಂದೆಯ ಬೆರಸಿದ ಬಳಿಕ
ಉರಿಯುಂಡ ಕರ್ಪೂರದಂತಾದೆನಯ್ಯಾ.
1112.05 424 ಮುಕ್ತಾಯಕ್ಕ ಅಜಗಣ್ಣತಂದೆ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 420      A86
ಸಸಿಯ ಮೇಲೆ ಸಾಗರವರಿದಂತಾಯಿತ್ತಯ್ಯಾ, ಎನ್ನ ಭಕ್ತಿ.
ಆನಂದದಿಂದ ನಲಿನಲಿದಾಡುವೆನು.
ಆನಂದದಿಂದ ಕುಣಿಕುಣಿದಾಡುವೆನು.
ಕೂಡಲಸಂಗನ ಶರಣರು ಬಂದಡೆ,
ಉಬ್ಬಿ, ಕೊಬ್ಬಿ, ಹರುಷದಲೋಲಾಡುವೆ.
378.01 86 ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 556      A102
ಕಾಮಕ್ರೋಧದ ಕರಸ್ಥಲದಲ್ಲಿ ಗುರು ಸ್ವಾಯತವ ಮಾಡಿದೆನು.
ಲೋಭಮೋಹದ ಕರಸ್ಥಲದಲ್ಲಿ ಲಿಂಗ ಸ್ವಾಯತವ ಮಾಡಿದೆನು.
ಮದದ ಕರಸ್ಥಲದಲ್ಲಿ ಜಂಗಮ ಸ್ವಾಯತವ ಮಾಡಿದೆನು.
ಮತ್ಸರದ ಕರಸ್ಥಲದಲ್ಲಿ ಪ್ರಸಾದ [ಸ್ವಾಯತವ] ಮಾಡಿದೆನು.
ಇಂತೀ ಗುರುಲಿಂಗ ಜಂಗಮ ಪ್ರಸಾದದಲ್ಲಿ ಶುದ್ಧನಾದೆನು ಕಾಣಾ
ಕಲಿದೇವರದೇವಾ
559.08 102 ಮಡಿವಾಳಮಾಚಿದೇವ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 677      A74
ಹೊಲಬುಗೆಟ್ಟ ಶಿಶು ತನ್ನ ತಾಯ ಬಯಸುವಂತೆ,
ಬಳಿದಪ್ಪಿದ ಪಶು ತನ್ನ ಹಿಂಡನರಸುವಂತೆ,
ಬಯಸುತ್ತಿರ್ದೆನಯ್ಯಾ ನಿಮ್ಮ ಶರಣರ ಬರವನು.
ಬಯಸುತ್ತಿರ್ದೆನಯ್ಯಾ ನಿಮ್ಮ ಭಕ್ತರ ಬರವನು.
ದಿನಕರನುದಯಕ್ಕೆ ಕಮಳ ವಿಕಸಿತವಾದಂತೆ
ಎನಗೆ ನಿಮ್ಮ ಶರಣರ ಬರವು, ಕೂಡಲಸಂಗಮದೇವಾ.
366.01 74 ಬಸವಣ್ಣ ಕೂಡಲಸಂಗಮದೇವಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 1012      A37
ಹರನೆ ನೀನೆನಗೆ ಗಂಡನಾಗಬೇಕೆಂದು
ಅನಂತಕಾಲ ತಪಸ್ಸಿದ್ದೆ ನೋಡಾ.
ಹಸೆಯಮೇಲಣ ಮಾತ ಬೆಸಗೊಳಲಟ್ಟಿದಡೆ
ಶಶಿಧರನ ಹತ್ತಿರಕೆ ಕಳುಹಿದರೆಮ್ಮವರು.
ಭಸ್ಮವನೆ ಹೂಸಿ ಕಂಕಣವನೆ ಕಟ್ಟಿದರು ಚೆನ್ನಮಲ್ಲಿಕಾರ್ಜುನ ತನಗೆ
ನಾನಾಗಬೇಕೆಂದ.
411.05 37 ಅಕ್ಕಮಹಾದೇವಿ ಚೆನ್ನಮಲ್ಲಿಕಾರ್ಜುನ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 1013      A39
ಪಚ್ಚೆಯ ನೆಲೆಗಟ್ಟು ಕನಕದ ತೋರಣ ವಜ್ರದ ಕಂಬ
ಪವಳದ ಚಪ್ಪರವಿಕ್ಕಿ ಮುತ್ತುಮಾಣಿಕದ ಮೇಲುಕಟ್ಟ ಕಟ್ಟಿ
ಮದುವೆಯ ಮಾಡಿದರು ಎಮ್ಮವರೆನ್ನ ಮದುವೆಯ ಮಾಡಿದರು.
ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆನ್ನ ಮದುವೆಯಮಾಡಿದರು
276.05 39 ಅಕ್ಕಮಹಾದೇವಿ ಚೆನ್ನಮಲ್ಲಿಕಾರ್ಜುನ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ಹಲಗೆಯಾರ್ಯನ ಶೂನ್ಯಸಂಪಾದನೆ 1041

[ಮೊದಲ ಪುಟ]  « ಹಿಂದಿನ 10111213[ಕೊನೆ ಪುಟ]


ಸಿಕ್ಕ ಪಲಿತಾಂಶಗಳು 121 ಇದು ಪುಟ 12 ಈ ಪುಟದಲ್ಲಿ ಪಲಿತಾಂಶಗಳು 111 ರಿಂದ 120 ವರೆಗೆ