checking data baseConnected successfully! Sample Image
  •  

ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು

search:
ವಚನ ಸಂಖ್ಯೆ 11      C9
ನೀರ ಬೊಂಬೆಯ ಚೋಹವ ತೊಟ್ಟು,
ಅಗ್ನಿಯ ಬಣ್ಣದ ಹೊದಕೆಯ ಹೊದ್ದು,
ಗಾಳಿಯ ಗತಿಯಲ್ಲಿ ಸುಳಿದಾಡುವ ಪ್ರಾಣಿಗಳು
ದೇವರನೆತ್ತ ಬಲ್ಲರು ಗುಹೇಶ್ವರಾ?
1316.02 320 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 12      C10
ಕರ್ಮದ ಗಡಣ ಹಿಂಗಿದುವಿಂದು,
ಪಾಪದ ಬಲೆ ಬಳಸಿ ಹೋದವು.
ಬಲ್ಲೆನು ಈ ಸಂಸಾರದಲ್ಲಿ ನೊಂದು ಬೆಂದೆನಾಗಿ,
ಮಾಯೆಯ ತಲೆಯ ಮೆಟ್ಟಿ ಹೋದೆನು.
ಇನ್ನು ಮರಳಿ ಬಾರೆನು ಗುಹೇಶ್ವರಾ ನಿಮ್ಮಾಣೆ
1062.02 321 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 13      C11
ನೆಲದ ಬೊಂಬೆಯ ಮಾಡಿ, ಜಲದ ಬಣ್ಣವನುಡಿಸಿ,
ಹಲವು ಪರಿಯಾಶ್ರಿ(ಶ್ರ?)ಮದಲ್ಲಿ ಉಲಿವ ಗೆಜ್ಜೆಯ ಕಟ್ಟಿ
ವಾಯುವನಲನ ಸಂಚಕ್ಕೆ ಅರಳೆಲೆಯ ಶೃಂಗಾರವ ಮಾಡಿ
ಆಡಿಸುವ ಯಂತ್ರವಾಹಕನಾರೊ ?
ಬಯಲ ಕಂಬಕ್ಕೆ ತಂದು ಸಯವೆಂದು ಪರವ ಕಟ್ಟಿದಡೆ
ಸಯವದ್ವಯವಾಯಿತ್ತು_ಏನೆಂಬೆನು ಗುಹೇಶ್ವರಾ !
16.02 322 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 14      C12
ಮಾನವ ತೋರಿಹ ಆವಿಂಗೆ ಕೊಳಗದ ತೋರಿಹ ಕೆಚ್ಚಲು.
ತಾಳುದ್ದ (ತಾಳ ಮರದುದ್ದ ?)ವೆರಡು ಕೋಡು ನೋಡಾ !
ಆದನರಸ ಹೋಗಿ ಆರುದಿನ, ಅದು ಕೆಟ್ಟು ಮೂರುದಿನ !
ಅಘಟಿತ ಘಟಿತ ಗುಹೇಶ್ವರಾ, [ಅರಸುವ ಬಾರೈ]
48.02 323 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 15      C13
ಅಡವಿಯೊಳಗೆ ಕಳ್ಳರು ಕಡವಸಿದ್ಧ (ಕಡವಸದ?) ಸ್ವಾಮಿಯನು
ಹುಡುಕಿ ಹುಡುಕಿ ಅರಸುತ್ತೈದಾರೆ._ಸೊಡರು ನಂದಿ ಕಾಣದೆ !
ಅನ್ನ ಪಾನದ ಹಿರಿಯರೆಲ್ಲರು ತಮ್ಮತಾವರಿಯದೆ,
ಅಧರಪಾನವನುಂಡು ತೇಗಿ, ಸುರಾಪಾನವ ಬೇಡುತ್ತೈದಾರೆ.
ಅರಿದ ಹಾರುವನೊಬ್ಬನು ಅರಿದ ತಲೆಯ ಹಿಡಿದುಕೊಂಡು,
ಆಧ್ಯಾತ್ಮವಿಕಾರದ ನೆತ್ತರ ಕುಡಿದನು ನೋಡಾ ಗುಹೇಶ್ವರಾ.
33.02 324 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 16      C14
ಜಂಬೂದ್ವೀಪದ ವ್ಯವಹಾರಿ ಖಂಡ ಭಂಡವ ತುಂಬಿ
ಕುಂಭಿನಿಯುದರದ ಮೇಲೆ
ಪಸರವನಿಕ್ಕಿದ.
ಉಷ್ಣ ತೃಷ್ಣೆ ಘನವಾಗಿ, ಕಡಲೇಳು ಸಮುದ್ರವ ಕುಡಿದು
ನೀರಡಿಸಿದಾತ ಅರಲುಗೊಂಡು ಬೆರಗಾದ.
ಶಿಶು ತಾಯ ಹೆಣನ ಹೊತ್ತುಕೊಂಡು ಹೆಸರ ಹೇಳುತ್ತೈದಾನೆ !
ಗುಹೇಶ್ವರನೆಂಬ ನಿಲವ ವಸುಧೆಯಾಕೃತಿ ನುಂಗಿತ್ತು.
18.02 325 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 17      C15
ಗಗನದ ಮೇಲೊಂದು ಅಬ್ಥಿನವ ಗಿಳಿ ಹುಟ್ಟಿ
ಸಯ ಸಂಭ್ರಮದಲ್ಲಿ ಮನೆಯ ಮಾಡಿತ್ತು
ಬ್ರಹ್ಮನಾ ಗಿಳಿಗೆ ಹಂಜರವಾದ, ವಿಷ್ಣು ಆ ಗಿಳಿಗೆ ಕೊರೆವ ಕೂಳಾದ
ರುದ್ರನಾ ಗಿಳಿಗೆ ತಾ ಕೋಳಾದ (ಕೋಳುವೋದ?)
ಇಂತೀ ಮೂವರ ಮುಂದಣ ಕಂದನ ನುಂಗಿ
ದೃಷ್ಟನಾಮ ನಷ್ಟವಾಯಿತ್ತು_ಇದೆಂತೊ ಗುಹೇಶ್ವರಾ?
15.02 326 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ಲಿಂಗಲೀಲಾವಿಲಾಸ ಚಾರಿತ್ರ 59.08
ವಚನ ಸಂಖ್ಯೆ 18      C16
ರಕ್ಕಸಿಗಿಬ್ಬರು ಮಕ್ಕಳು, ತೊಟ್ಟಿಲ ಮೇಲೈವರು,
ರಕ್ಕಸಿ ಬಾಣತಿಯಾದಡೆ ಮಕ್ಕಳಿಗಿನ್ನೆಂತೊ!
ತೊಟ್ಟಿಲ ತೂಗುವೆ ಜೋಗುಳವಾಡುವೆ
ರಕ್ಕಸಿಬಾಣತಿಯ ತೊಟ್ಟಿಲು ನುಂಗಿತ್ತು_ಇದೇನು ಹೇಳಾ ಗುಹೇಶ್ವರಾ?
14.02 327 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 19      C17
ಆಡಂಬರದೊಳಗಾಡಂಬರವಿದೇನೊ?
ಹಾರಿತ್ತು ಬ್ರಹ್ಮನೋಲಗ, ಕೆದರಿತ್ತಿದೇನಯ್ಯಾ?
`ಸಾರು ಸಾರು' ಎನ್ನುತ್ತ ವಿಷ್ಣು ಅಜರ ನುಂಗಿ
ರುದ್ರಯೋನಿಯೊಳಡಗಿತ್ತಿದೇನೊ!
ಬೇರಿಲ್ಲದ ಮರ, ನೀರಿಲ್ಲದ ನೆಳಲೊಳಗೆ
ತೋರಿದ ಪ್ರತಿಬಿಂಬವ ನಾನೇನೆಂಬೆನು ಗುಹೇಶ್ವರಾ
24.02 328 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 20      C18
ಕೋಣನ ಕೊಂಬಿನ ತುದಿಯಲ್ಲಿ, ಏಳುನೂರೆಪ್ಪತ್ತು ಸೇದೆಯ ಬಾವಿ.
ಬಾವಿಯೊಳಗೊಂದು ಬಗರಿಗೆ, ಬಗರಿಗೆಯೊಳಗೊಬ್ಬ ಸೂಳೆ ನೋಡಯ್ಯಾ.
ಆ ಸೂಳೆಯ ಕೊರಳಲ್ಲಿ ಏಳುನೂರೆಪ್ಪತ್ತು
ಆನೆ ನೇರಿತ್ತ ಕಂಡೆ ಗುಹೇಶ್ವರಾ.
38.02 329 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????

[ಮೊದಲ ಪುಟ]  12345678910ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 121 ಇದು ಪುಟ 2 ಈ ಪುಟದಲ್ಲಿ ಪಲಿತಾಂಶಗಳು 11 ರಿಂದ 20 ವರೆಗೆ