ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು
| ವಚನ ಸಂಖ್ಯೆ 21 C19 |
ಪಂಚಾಶತ್‍ಕೋಟಿ ಭೂಮಂಡಲವನು,
ಒಂದು ತಲೆಯಿಲ್ಲದ ಮುಂಡ ನುಂಗಿತ್ತ ಕಂಡೆನು.
ತಲೆಯಿಲ್ಲದೆ ಕಂಡು ಬೆರಗಾದೆನು
ನವಖಂಡ ಮಂಡಲ ಭಿನ್ನವಾದಂದು
ಆ ತಲೆಯ ಕಂಡವರುಂಟೆ ಗುಹೇಶ್ವರಾ? |
29.02 |
330 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 22 C20 |
ಊರ ಮಧ್ಯದ ಕಣ್ಣ ಕಾಡಿನೊಳಗೆ, ಬಿದ್ದೈದಾವೆ ಐದು ಹೆಣನು.
ಬಂದು ಬಂದು ಅಳುವರು.
ಬಳಗ ಘನವಾದ ಕಾರಣ ಹೆಣನೂ ಬೇಯದು ಕಾಡೂ ನಂದದು.
ಮಾಡ ಉರಿಯಿತ್ತು ಗುಹೇಶ್ವರಾ. |
26.02 |
331 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 23 C21 |
ಕೆಂಡದ ಗಿರಿಯ ಮೇಲೊಂದು, ಅರಗಿನ ಕಂಬವಿದ್ದಿತ್ತು ನೋಡಯ್ಯಾ.
ಅರಗಿನ ಕಂಬದ ಮೇಲೆ ಹಂಸೆಯಿದ್ದಿತ್ತು.
ಕಂಭ ಬೆಂದಿತ್ತು ಹಂಸೆ ಹಾರಿತ್ತು ಗುಹೇಶ್ವರಾ
|
605.02 |
332 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 24 C22 |
ಭೂತ ಭೂತವ ಕೂಡಿ ಅದ್ಭುತವಾಯಿತ್ತು,
ಕಿಚ್ಚು ಕೋಡಿತ್ತು, [ನೀರು] ನೀರಡಿಸಿತ್ತು_ಅದ್ಭುತವಾಯಿತ್ತು !
ಉರಿ, ಪವನದೋಷದೊಳಡಗಿರ್ದು
ವಾಯುವಿಮ್ಮಡಿಸಿತ್ತ ಕಂಡೆ, ಗುಹೇಶ್ವರಾ. |
32.02 |
333 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 25 C23 |
ಅಂಗದ ಕೊನೆಯ ಮೇಲಣ ಕೋಡಗ ಕೊಂಬಿಗೆ ಹಾರಿತ್ತು,
ಅಯ್ಯಾ ಇದು ಸೋಜಿಗ !
ಕಯ್ಯ ನೀಡಲು ಮೈಯೆಲ್ಲವನು ನುಂಗಿತ್ತು
ಒಯ್ಯನೆ ಕರೆದಡೆ ಮುಂದೆ ನಿಂತಿತ್ತು
ಮುಯ್ಯಾಂತಡೆ ಬಯಲಾಯಿತ್ತು_ಗುಹೇಶ್ವರಾ |
31.02 |
334 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 26 C24 |
ಹಿರಿದಪ್ಪ ಜಲಧಿಯ ಮಡುವಿನೊಳಗೆ,
ಕರಿಯ ಕಬ್ಬಿಲ ಜಾಲವ ಬೀಸಿದ ನೋಡಯ್ಯಾ.
ಅರಿದ ತಲೆ ಐದು, ಅರಿಯದ ತಲೆ ಐದು, ಕರಿಯ ತಲೆ ಐದು,
ಮುಂದೈದಾವೆ ನೋಡಯ್ಯಾ.
ಕರಿಯ ಕಬ್ಬಿಲ ಜಾಲವ ಹೊತ್ತುಕೊಂಡು ಹೋದಡೆ
ನೇತ್ರದಲೋಕುಳಿಯಾಡಿತ್ತ ಕಂಡೆನು ಗುಹೇಶ್ವರಾ. |
37.02 |
335 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 27 C25 |
ಭೂಮಿಯ ಕಠಣವನು, ಆಕಾಶದ ಮೃದುವನು; ತಿಳಿವ ಗಮನ
ಅಲ್ಲಿಯೇ ನಿಂದಿತ್ತು.
ಉದಕದೊಳಗೆ ಹುಟ್ಟಿದ ತೃಷ್ಣೆ ಉದಕವನರಸಿತ್ತಲ್ಲಾ!
ಒಳಗೆ ಸತ್ತು ಹೊರಗೆ ಆಡುತ್ತದೆ !
ಗುಹೇಶ್ವರ ಬೆರಗಾಗಿ ಅಲ್ಲಿಯೇ ನಿಂದನು. |
19.02 |
336 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 28 C26 |
ಹುಲಿಯ ತಲೆಯ ಹುಲ್ಲೆ, ಹುಲ್ಲೆಯ ತಲೆಯ ಹುಲಿ
ಈ ಎರಡರ ನಡು ಒಂದಾಯಿತ್ತು ! ಹುಲಿಯಲ್ಲ ಹುಲ್ಲೆಯಲ್ಲ.
ಕೆಲದಲೊಂದು ಬಂದು ಮೆಲುಕಾಡಿತ್ತು ನೋಡಾ.
ತಲೆಯಿಲ್ಲದ ಮುಂಡ ತರಗೆಲೆಯ ಮೆದ್ದಡೆ,
ಎಲೆ ಮರೆಯಾಯಿತ್ತು ಕಾಣಾ, ಗುಹೇಶ್ವರಾ.
|
39.02 |
337 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 29 C27 |
ಅರಗಿನ ಪುತ್ಥಳಿಯನುರಿ ಕೊಂಡಡೆ, ಉದಕ ಬಾಯಾರಿ ಬಳಲುತ್ತಿದೆ
[ಅಗೆಯಿಂ ಭೋ ಬಾವಿಯನಗೆಯಿಂ ಭೋ]
ಬಾವಿಯನಗೆದಾತ ಸತ್ತ, ಬಾವಿ ಬತ್ತಿತ್ತು ಇದು ಕಾರಣ,
ಮೂರು ಲೋಕವು ಬರುಸೂರೆವೋಯಿತ್ತು ಗುಹೇಶ್ವರಾ.
|
30.02 |
338 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 30 C28 |
ಇಲ್ಲದಲ್ಲಿ ಇಲ್ಲವಿದ್ದಿತ್ತು.
ಇಲ್ಲವೆಂಬುದು ಉಂಟು ನೋಡಾ.
ಉಂಟೆಂದಲ್ಲಿ `ಇಲ್ಲ' ಉಂಟಾಯಿತ್ತು.
ಉಂಟೆಂದು ತಿಳಿದಡೆ ಅದೆ `ಇಲ್ಲ'.
ಆ `ಇಲ್ಲ'ದಲ್ಲಿ ಒಂದು ತಲೆ ಉದಿಸಿತ್ತು.
ಆ ತಲೆಯೊಳಗೆ ಮೂರು ಲಿಪಿಯ ಕಂಡೆ.
ಲಿಪಿಯೊಳಗೊಂದು ಧ್ವನಿಯ ಕಂಡೆ.
ಧ್ವನಿಯ ಬಣ್ಣ ತಲೆಯೆತ್ತದ ಮುನ್ನ,
ಐದು ಬಾಯ ರಕ್ಕಸಿ ಆಗುಳಿಸಿ ನುಂಗಿದಳು.
ಆ ರಕ್ಕಸಿಗೆ ಕೋಡಗ ಹುಟ್ಟಿ, ಕೋಣನ ಕೊರಳ ಕಚ್ಚಿತ್ತ ಕಂಡೆ.
ಕೋಣನ ಕೋಡಗ ಮುರಿದು ಈಡಾಡಿದಡೆ ಕೋಡಗ ಸಿಕ್ಕಿತ್ತು.
ಅಡವಿಯ ಸುಟ್ಟು ಆಕಾಶವ ಹೊಕ್ಕು
ಗುಹೇಶ್ವರಲಿಂಗದಲ್ಲಿ ಗುರುಕಾರುಣ್ಯವ ಪಡೆದನು |
937.02 |
339 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
[ಮೊದಲ ಪುಟ] 1 2 3 4 5 6 7 8 9 10 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 121 ಇದು ಪುಟ 3 ಈ ಪುಟದಲ್ಲಿ ಪಲಿತಾಂಶಗಳು 21 ರಿಂದ 30 ವರೆಗೆ |
|
|