ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು
| ವಚನ ಸಂಖ್ಯೆ 31 C29 |
ಇವಳ (ಅವಳ?) ನೋಟವೆನ್ನ ಮತ್ರ್ಯಕ್ಕೆ ತಂದಿತ್ತಯ್ಯಾ.
ಇವಳ ಕೂಟ ಸವಿಯನವಗಡಿಸಿ ಕಾಡಿತ್ತಯ್ಯಾ.
ಇವಳ ಬೇಟದ ಬೇರ ಹರಿದಲ್ಲಿ
ತ್ರಿಪುರ ಹಾಳಾದುದ ಕಂಡೆನು.
ಉರಿಯ ಮೇಲೆ ಉರಿ ಎರಗಿದಡೆ
ತಂಪು ಮೂಡಿತ್ತ ಕಂಡೆನು.
ಕರಿಯ ಬೇಡನ ಕಸ್ತುರಿಯ ಮೃಗ ನುಂಗಿದಡೆ
ಹಿರಿಯ ಹೆಂಡತಿ ಓಲೆಗಳೆದುದ ಕಂಡೆನು.
ಕಾರಿರುಳ ಕೋಟೆಯಲಿ ಕಲಿಯ ಕಾಳೆಗವ ಗೆಲಿದು
ಹೂಳಿರ್ದ ನಿಧಾನವ ಕಂಡೆನು ಕಾಣಾ ಗುಹೇಶ್ವರಾ. |
940.02 |
340 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 32 C30 |
ಪುಣ್ಯವುಳ್ಳ ಕಾಲಕ್ಕೆ ಮಣ್ಣು ಹೊನ್ನಪ್ಪುದು,
ಪುಣ್ಯವುಳ್ಳ ಕಾಲಕ್ಕೆ ಪಾಷಾಣ ಪರುಷವಪ್ಪುದು ನೋಡಾ.
ಮುನ್ನ ಮುನ್ನವೆ,
ಅಚ್ಚೊತ್ತಿದ ಭಾಗ್ಯ ಎನ್ನ ಕಣ್ಣ ಮುಂದೆ ಕಾಣಬಂದಿತ್ತು ನೋಡಾ!
ಮಣ್ಣ ಮರೆಯ ದೇಗುಲದೊಳಗೊಂದು ಮಾಣಿಕ್ಯವ ಕಂಡಬಳಿಕ,
ಇನ್ನು ಮುನ್ನಿನಂತಪ್ಪುದೆ ಗುಹೇಶ್ವರಾ? |
1351.02 |
341 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 33 C31 |
ಅರಸುವ ಬಳ್ಳಿ ಕಾಲ ಸುತ್ತಿತ್ತೆಂಬಂತೆ,
ಬಯಸುವ ಬಯಕೆ ಕೈಸಾರಿದಂತೆ,
ಬಡವ ನಿಧಾನವನೆಡಹಿ ಕಂಡಂತೆ,
ನಾನರಸುತ್ತಲರಸುತ್ತ ಬಂದು
ಭಾವಕ್ಕಗಮ್ಯವಾದ ಮೂರ್ತಿಯ ಕಂಡೆ ನೋಡಾ.
ಎನ್ನ ಅರಿವಿನ ಹರುಹ ಕಂಡೆ ನೋಡಾ.
ಎನ್ನ ಒಳಹೊರಗೆ ಎಡೆದೆರಹಿಲ್ಲದೆ ಥಳಥಳಿಸಿ ಬೆಳಗಿ ಹೊಳೆವುತಿಪ್ಪ
ಅಖಂಡಜ್ಯೋತಿಯ ಕಂಡೆ ನೋಡಾ !
ಕರುಹಳಿದ ಕರಸ್ಥಲದ ನಿಬ್ಬೆರಗಿನ ನೋಟದ
ಎನ್ನ ಪರಮಗುರುವ ಕಂಡು ಬದುಕಿದೆನು ಕಾಣಾ ಗುಹೇಶ್ವರ |
821.02 |
342 |
ಅಲ್ಲಮ | ಗುಹೇಶ್ವರ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 34 C32 |
ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ ಹಿಡಿದಿಹೆನೆಂದಡೆ,
ಸಿಕ್ಕದೆಂಬ ಬಳಲಿಕೆಯ ನೋಡಾ.
ಕಂಡುದನೆ ಕಂಡು ಗುರುಪಾದವಿಡಿದಲ್ಲಿ,
ಕಾಣಬಾರದುದ ಕಾಣಬಹುದು ಗುಹೇಶ್ವರಾ. |
51.02 |
343 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 35 C33 |
ಕಾಯದಲಾದ ಮೂರ್ತಿಯಲ್ಲ, ಜೀವದಲಾದ ಮೂರ್ತಿಯಲ್ಲ,
ಪ್ರಾಣದಲಾದ ಮೂರ್ತಿಯಲ್ಲ, ಪುಣ್ಯದಲಾದ ಮೂರ್ತಿಯಲ್ಲ,
ಮುಕ್ತಿಯಲಾದ ಮೂರ್ತಿಯಲ್ಲ,
ಯುಗದಲಾದ ಮೂರ್ತಿಯಲ್ಲ, ಜುಗದಲಾದ ಮೂರ್ತಿಯಲ್ಲ,
ಇದೆಂತಹ ಮೂರ್ತಿಯೆಂದುಪಮಿಸುವೆ?
ಕಾಣಬಾರದ ಕಾಯ ನೋಡಬಾರದ ತೇಜ,
ಉಪಮಿಸಬಾರದ ನಿಲವು.
ಕಾರಣವಿಡಿದು ಕಣ್ಗೆ ಗೋಚರವಾದ ಸುಖವನು
ಏನೆಂದು ಹೇಳುವೆ ಗುಹೇಶ್ವರಾ? |
1095.02 |
344 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 36 C34 |
ಸ್ಫಟಿಕದ ಘಟದಂತೆ ಒಳಹೊರಗಿಲ್ಲ ನೋಡಾ !
ವಿಗಡಚರಿತ್ರಕ್ಕೆ ಬೆರಗಾದೆನು.
ನೋಡುವಡೆ ಕಾಣಬರುತ್ತಿದೆ, ಮುಟ್ಟುವಡೆ ಕೈಗೆ ಸಿಲುಕದು
ಹೊದ್ದುವಡೆ ಸಮೀಪ, ಸಾರಿದಡೆ ಅತ್ತತ್ತ ತೋರುತ್ತಿದೆ.
ಆಕಾರ ನಿರಾಕಾರವ ನುಂಗಿ
ಬಯಲ ಸಮಾಧಿಯಲ್ಲಿ ಸಿಲುಕಿತ್ತು ನೋಡಾ !
ದರ್ಶನದಿಂದ ಅಮೃತಾಹಾರವಾಯಿತ್ತು,
ಬೆರಸಿದಡೆ ಇನ್ನೆಂತೊ ಗುಹೇಶ್ವರಾ! |
1596.02 |
345 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 37 C35 |
ನಡೆ ನುಡಿಯಿಲ್ಲದ ಗುರುವ ಕಂಡು
ಉಪದೇಶವ ಪಡೆಯಲೆಂದು ಹೋದಡೆ;
ಒಡನೆ ನುಡಿಯನು ನುಡಿಸಿದಡೆ ಕೇಳನು.
ಕಡೆ ಮೊದಲ ಕಾರ್ಯ ಎಂತಪ್ಪುದೊ ಅಯ್ಯಾ?
ಮೂಗರ ಮೂಗರ ಪ್ರಸಂಗದಂತೆ ಇದೆ
ಎನ್ನೊಳಗೆ ಅರಿವಿನ ಪರಿಮಳ!
ಹೊರಗೆ ನೋಡಿದಡೆ ಮುಗ್ಧವಾಯಿತ್ತು.
ಇದನೆಂತು ಉಪಮಿಸುವೆ ಅನಿಯಮದ ಬೆಡಗ?
ಇದು ತನ್ನಿಂದ ತಾನಪ್ಪುದಲ್ಲದೆ, ಭಿನ್ನದಲುಂಟೆ ಗುಹೇಶ್ವರಾ? |
1279.02 |
346 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 38 C36 |
ಒಂದೆಂಬೆನೆ? ಎರಡಾಗಿದೆ; ಎರಡೆಂಬೆನೆ? ಒಂದಾಗಿದೆ.
ಒಂದೆರಡೆಂಬ ಸಂದೇಹವಿದೇನೊ?
ಅಗಲಲಿಲ್ಲದ ಕೂಟಕ್ಕೆ ಬಿಚ್ಚಿ ಬೇರಾಗದ ಉಪದೇಶ!
ಗುರು ಶಿಷ್ಯರೆಂಬ ಭಾವಕ್ಕೆ ಭೇದವುಂಟೆ ಗುಹೇಶ್ವರಾ? |
1014.02 |
347 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 39 C37 |
ಕಾಣಬಾರದ ಗುರು ಕಣ್ಗೆ ಗೋಚರವಾದಡೆ;_
ಹೇಳಲಿಲ್ಲದ ಬಿನ್ನಪ್ಪ, ಮುಟ್ಟಲಿಲ್ಲದ ಹಸ್ತಮಸ್ತಕಸಂಯೋಗ.
ಹೂಸಲಿಲ್ಲದ ವಿಭೂತಿಯ ಪಟ್ಟ, ಕೇಳಲಿಲ್ಲದ ಕರ್ಣಮಂತ್ರ.
ತುಂಬಿ ತುಳುಕದ ಕಲಶಾಭಿಷೇಕ ಆಗಮವಿಲ್ಲದ ದೀಕ್ಷೆ,
ಪೂಜೆಗೆ ಬಾರದ ಲಿಂಗ, ಸಂಗವಿಲ್ಲದ ಸಂಬಂಧ.
ಸ್ವಯವಪ್ಪ ಅನುಗ್ರಹ,
ಅನುಗೊಂಬಂತೆ ಮಾಡಾ ಗುಹೇಶ್ವರಾ. |
1074.02 |
348 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
| ವಚನ ಸಂಖ್ಯೆ 40 C38 |
ಅಯ್ಯಾ ನೀನೆನಗೆ ಗುರುವಪ್ಪಡೆ, ನಾ ನಿನಗೆ ಶಿಷ್ಯನಪ್ಪಡೆ,
ಎನ್ನ ಕರಣಾದಿ ಗುಣಂಗಳ ಕಳೆದು,
ಎನ್ನ ಕಾಯದ ಕರ್ಮವ ತೊಡೆದು,
ಎನ್ನ ಪ್ರಾಣನ ಧರ್ಮವ ನಿಲಿಸಿ,
ನೀನೆನ್ನ ಕಾಯದಲಡಗಿ, ನೀನೆನ್ನ ಪ್ರಾಣದಲಡಗಿ
ನೀನೆನ್ನ ಭಾವದಲಡಗಿ, ನೀನೆನ್ನ ಕರಸ್ಥಲಕ್ಕೆ ಬಂದು
ಕಾರುಣ್ಯವ ಮಾಡಾ ಗುಹೇಶ್ವರಾ |
53.02 |
349 |
ಅಲ್ಲಮ | ಗುಹೇಶ್ವರಾ |
| ಆಕರ ಗ್ರಂಥಗಳು |
ಜಕ್ಕಣ್ಣನ ಏಕೋತ್ತರಶತಸ್ಥಲ????
|
[ಮೊದಲ ಪುಟ] 1 2 3 4 5 6 7 8 9 10 ಮುಂದಿನ 10 » [ಕೊನೆ ಪುಟ]
ಸಿಕ್ಕ ಪಲಿತಾಂಶಗಳು 121 ಇದು ಪುಟ 4 ಈ ಪುಟದಲ್ಲಿ ಪಲಿತಾಂಶಗಳು 31 ರಿಂದ 40 ವರೆಗೆ |
|
|