checking data baseConnected successfully! Sample Image
  •  

ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು

search:
ವಚನ ಸಂಖ್ಯೆ 41      C39
ಆದಿಯಿಂದತ್ತತ್ತಲೆನಗೆ ನೀನೆ ಗುರುವಯ್ಯಾ.
ಅನಾದಿಯಿಂದತ್ತತ್ತಲೆನಗೆ ನೀನೆ ಗುರುವಯ್ಯಾ.
ಈ ಎರಡು ನಾಮ ಹುಟ್ಟದ ಮುನ್ನ
ನಿಮಗೆ ನಾನು ಶಿಷ್ಯನಯ್ಯಾ.
ಎನ್ನ ಭಾವಕಾಯದೊಳಗಣ ಭ್ರಮೆಯ ಕಳೆದು,
ಎನ್ನ ಜ್ಞಾನಕಾಯದೊಳಗಣ ಮರಹ ಕಳೆದು,
ಎನ್ನೊಳಗೆ ತಿಳಿವಿನ ಬಗೆಯ ತೋರುತ್ತ,
ಹೊರಗೆ ನುಡಿಯದಂತಿರ್ದಡೆ ಬಿಡೆನು ನೋಡಾ ನಿಮ್ಮ ಶ್ರೀಚರಣವನು.
ಮಾಡಿದಡೆ ಅಂತು ಮಹಾಪ್ರಸಾದವೆಂದು ಕೈಕೊಂಬೆ.
ಮಾಡದಿರ್ದಡೆ ನೀವೆ ನಾನಾಗಿ ಮಹಾಪ್ರಸಾದವೆಂದು ಕೈಕೊಂಬೆನು,
ಇಂತು ಆವತೆರದಿಂದಲಾದಡೂ
ಎನ್ನೊಡಲ ನಿಮ್ಮಲ್ಲಿ ಸವೆದು ಪಡೆವೆನು ನಿಮ್ಮ ಕರುಣವ
ಗುಹೇಶ್ವರಾ ಎನ್ನ ಇರವಿನ ಪರಿ ಇಂತುಟು ನೋಡಾ
897.02 350 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 42      C40
ಜ್ಯೋತಿಯೊಳಗಣ ಕರ್ಪುರಕ್ಕೆ, ಅಪ್ಪುವಿನ ಕೈಯಲಿಪ್ಪ ಉಪ್ಪಿಂಗೆ,
ಶ್ರೀಗುರುವಿನ ಹಸ್ತದೊಳಗಿಪ್ಪ ಶಿಷ್ಯಂಗೆ ಈ ಮೂರಕ್ಕೆಯೂ
ಬೇರೆ ಕ್ರಿಯಾವರ್ತನೆಯುಂಟೆ ಗುಹೇಶ್ವರಾ?
62.02 351 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 43      C41
ಆಣವಮಲ ಮಾಯಾಮಲ ಕಾರ್ಮಿಕಮಲವೆಂಬ
ಮಲತ್ರಯಂಗಳಳಿದು ನಿರ್ಮಲನಾದ ಶಿಷ್ಯ;_
ಕಾಯಜೀವದ ಭ್ರಾಂತುಸೂತಕ ಹಿಂಗಿ
ನಿಶ್ಯಂಕನಾದ ಗುರು_
ಈ ಉಭಯ ಭಾವದೊಳಗೆ
ಆವುದು ಮುಂದು ಆವುದು ಹಿಂದೆಂದರಿಯಬಪ್ಪುದು ?
ಕರಸ್ಥಲಕ್ಕೆ ಕಾರುಣ್ಯವ ಮಾಡಿದಡೆ ಮನಸ್ಥಲಕ್ಕೆ ಹಂಗಿಲ್ಲ.
ಮನಸ್ಥಲದಲ್ಲಿ ಸೆರಗೊಡ್ಡಿ ಬೇಡಿರ್ದಡೆ
ಕರಸ್ಥಲದ ಲಿಂಗ ಕೈಸಾರಿತ್ತು !
ಗುರುಸ್ಥಲದ ನಿಲವು ಪರಸ್ಥಲದಲಡಗಿದರೆ
ಭಾವ ಬಳಲಿತ್ತಿದೇನೊ (ಬೆರಗಾಯಿತ್ತು?) ಗುಹೇಶ್ವರಾ. ?
873.02 352 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 44      C42
ನಿರ್ಣಯವನರಿಯದ ಮನವೆ, ದುಗುಡವನಾಹಾರಗೊಂಡೆಯಲ್ಲಾ
ಮಾಯಾ ಸೂತ್ರವಿದೇನೊ! ಕಂಗಳೊಳಗಣ ಕತ್ತಲೆ ತಿಳಿಯದಲ್ಲಾ!
ಬೆಳಗಿನೊಳಗಣ ಶೃಂಗಾರ ಬಳಲುತ್ತಿದ್ದುದು, ಗುಹೇಶ್ವರಾ.
45.02 353 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 45      C43
ಆಹಾ ಮನವೆ, ಮರೆದೆಯಲ್ಲಾ ನಿನ್ನ ಪೂರ್ವಾಪರವ,
ಘನ ಮನದೊಳಡಗಿ, ಆ ಮನ ಲಿಂಗದೊಳಡಗಿ,
ಆ ಲಿಂಗವೆನ್ನ ಕರಸ್ಥಲಕ್ಕೆ ಬಂದ ಬಳಿಕ
ಅಳಿಯಿತ್ತು ಅಗಲಿತ್ತು ಎಂಬ ಭಾವಭ್ರಾಂತಿ ಇದೇನೊ?
ಜನನವಿಲ್ಲದ ಘನಕ್ಕೆ ಮರಣವುಂಟೆ?
ತೆರಹಿಲ್ಲದ ನಿಜವು ತನ್ನಲ್ಲಿ ತಾನು ವೇದ್ಯವಾಗಿಪ್ಪುದಲ್ಲದೆ
ಇದಿರಿಟ್ಟು ತೋರದೆಂಬ ಅಜ್ಞಾನವಿದೇನೊ ?
`ನೀ' `ನಾ' ಎಂಬುದು ಮಾದು.
`ತಾನೆ' ಆಗೆ ಸಾಧ್ಯವಾಯಿತ್ತು! ಇದೇನೆಂಬೆ ಗುಹೇಶ್ವರಾ.
922.02 354 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 46      C44
ಕಾಣದುದನರಸುವರಲ್ಲದೆ ಕಂಡದುದನರಸುವರೆ ಹೇಳಾ !
ಘನಕ್ಕೆ ಘನವಾದ ವಸ್ತು;
ತಾನೆ ಗುರುವಾದ, ತಾನೆ ಲಿಂಗವಾದ, ತಾನೆ ಜಂಗಮವಾದ,
ತಾನೆ ಪ್ರಸಾದವಾದ, ತಾನೆ ಮಂತ್ರವಾದ, ತಾನೆ ಯಂತ್ರವಾದ
ತಾನೆ ಸಕಲವಿದ್ಯಾರೂಪನಾದ.
ಇಂತಿವೆಲ್ಲವನೊಳಕೊಂಡು ಎನ್ನ ಕರಸ್ಥಲಕ್ಕೆ ಬಂದ.
ಇನ್ನು ನಿರ್ವಿಕಾರ ಗುಹೇಶ್ವರ.
55.02 355 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 47      C45
ಕಸ್ತೂರಿಯ ಮೃಗ ಬಂದು ಸುಳಿಯಿತ್ತಯ್ಯಾ,
ಸಕಲ ವಿಸ್ತಾರದ ರೂಹು ಬಂದು ನಿಂದಿತ್ತಯ್ಯಾ,
ಆವ ಗ್ರಹ ಬಂದು ಸೋಂಕಿತ್ತೆಂದರಿಯೆನಯ್ಯಾ
ಆವ ಗ್ರಹ ಬಂದು ಹಿಡಿಯಿತ್ತೆಂಬುದ ನಾನರಿಯೆನಯ್ಯಾ.
ಹೃದಯಕಮಲಮಧ್ಯದಲ್ಲಿ ಗುರುವನರಿದು ಪೂಜಿಸಿ,
ಗುರು ವಿಖ್ಯಾತನೆಂಬುದ ನಾನರಿದೆನಯ್ಯಾ.
ಗುಹೇಶ್ವರಲಿಂಗದಲ್ಲಿಹಿಂದಣ ಹುಟ್ಟರತು ಹೋದುದ ಕಂಡೆನಯ್ಯಾ.
56.02 356 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 49      C47
ಗುರು, ಶಿಷ್ಯ ಸಂಬಂಧವನರಸಲೆಂದು ಹೋದಡೆ,
ತಾನೆ ಗುರುವಾದ ತಾನೆ ಶಿಷ್ಯನಾದ, ತಾನೆ ಲಿಂಗವಾದ.
ಗುಹೇಶ್ವರಾ_ನಿಮ್ಮ ಶರಣನ ಕಾಯದ ಕೈಯಲ್ಲಿ ಲಿಂಗವ ಕೊಟ್ಟಡೆ,
ಭಾವ ಬತ್ತಲೆಯಾಯಿತ್ತು !
63.02 358 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 50      C48
ಮುನ್ನಿನ ಪರಿಯಂತುಟಲ್ಲ.
ಆದಡೆಂತಹುದು? ಆಗದಡೆಂತಾಯಿತ್ತು ? (ಆದಡಿಂತಹುದೆ ? ಆಗದಡಿಂತಾಯಿತ್ತು)
ಹಲವು ಪರಿ ಬಗೆಯ ಬಯಕೆ ತಾರ್ಕಣೆಯಾದಂತೆ
ಗುಹೇಶ್ವರಲಿಂಗ, ತನುವ ತನ್ನತ್ತಲೊಯ್ದನು.
81.02 359 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 51      C49
ಎತ್ತಣ ಮಾಮರ ಎತ್ತಣ ಕೋಗಿಲೆ, ಎತ್ತಣಿಂದೆತ್ತ ಸಂಬಂಧವಯ್ಯಾ ?
ಬೆಟ್ಟದ ಮೇಲಣ ನೆಲ್ಲಿಯ ಕಾಯಿ ಸಮುದ್ರದೊಳಗಣ ಉಪ್ಪು,
ಎತ್ತಣಿಂದೆತ್ತ ಸಂಬಂಧವಯ್ಯಾ ?
ಗುಹೇಶ್ವರಲಿಂಗಕ್ಕೆಯೂ ನಮಗೆಯೂ ಎತ್ತಣಿಂದೆತ್ತ ಸಂಬಂಧವಯ್ಯಾ.
59.02 360 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????

[ಮೊದಲ ಪುಟ]  12345678910ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 121 ಇದು ಪುಟ 5 ಈ ಪುಟದಲ್ಲಿ ಪಲಿತಾಂಶಗಳು 41 ರಿಂದ 50 ವರೆಗೆ