checking data baseConnected successfully! Sample Image
  •  

ಮಹದೇವಯ್ಯನ 'ಶೂನ್ಯಸಂಪಾದನೆ' ವಚನಗಳು

search:
ವಚನ ಸಂಖ್ಯೆ 52      C50
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದಡೆ,
ಎನಗಿದು ಸೋಜಿಗ, ಎನಗಿದು ಸೋಜಿಗ !
ಅಹುದೆನಲಮ್ಮೆನು, ಅಲ್ಲೆನಲಮ್ಮೆನು,
ಗುಹೇಶ್ವರಲಿಂಗವು ನಿರಾಳ ನಿರಾಕಾರ ಬಯಲು ಆಕಾರವಾದಡೆ !
60.02 361 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 53      C51
ತನು ತರತರಂಬೋಗಿ, ಮನವು ನಿಮ್ಮಲ್ಲಿ ಸಿಲುಕಿತ್ತಯ್ಯಾ.
ನೋಟವೇ ಪ್ರಾಣವಾಗಿ ಅಪ್ಯಾಯನ ನಿಮ್ಮಲ್ಲಿ ಆರತುದಯ್ಯಾ.
ಸಿಲುಕಿತ್ತು ಶೂನ್ಯದೊಳಗೆ, ಗುಹೇಶ್ವರಾ ನಿರಾಳವಯ್ಯಾ !
100.02 362 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 54      C52
ನಿಮ್ಮ ನೋಡುವ ಸುಖ ಉಳ್ಳನ್ನಕ್ಕರ, ಬೆರಸಲೆಲ್ಲಿಯದಯ್ಯಾ?
ನಿಮ್ಮ ಬೆರಸುವ ತವಕ ಉಳ್ಳನ್ನಕ್ಕ ನೋಟ ಹಿಂಗದು!
ನೋಡಿ ಕೂಡಿ ಸೈವೆರಗಾದ ಸುಖವನು
ಏನೆಂದುಪಮಿಸುವೆನಯ್ಯಾ ಗುಹೇಶ್ವರಾ?
1303.02 363 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 55      C53
ಪ್ರಣತೆಯೂ ಇದೆ ಬತ್ತಿಯೂ ಇದೆ;
ಜ್ಯೋತಿಯ ಬೆಳಗುವಡೆ,
ತೈಲವಿಲ್ಲದೆ ಪ್ರಭೆ ತಾನೆಲ್ಲಿಯದೊ?
ಗುರುವಿದೆ ಲಿಂಗವಿದೆ; ಶಿಷ್ಯನ ಸುಜ್ಞಾನ
ಅಂಕುರಿಸದನ್ನಕ್ಕರ
ಭಕ್ತಿ ಎಲ್ಲಿಯದೊ?
`ಸ್ಯೋಹಂ' ಎಂಬುದಕ್ಕೆ ದಾಸೋಹವ ಮಾಡದಿರ್ದಡೆ
ಅತಿಗಳೆವೆ ನೋಡಾ ಗುಹೇಶ್ವರಾ.
78.02 364 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 56      C54
ಮುಂದು ಜಾವದಲೆದ್ದು, ಲಿಂಗದಂಘ್ರಿಯ ಮುಟ್ಟಿ,
ಸುಪ್ರಭಾತ ಸಮಯದಲ್ಲಿ ಶಿವಭಕ್ತರ ಮುಖವ
ನೋಡುವುದು.
ಹುಟ್ಟಿದುದಕ್ಕೆ ಇದೇ ಸಫಲ ನೋಡಾ,
ಸತ್ಯವಚನವಿಂತೆಂದುದು_ಇವಿಲ್ಲದವರ ನಾನೊಲ್ಲೆ ಕಾಣಾ ಗುಹೇಶ್ವರಾ.
88.02 365 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 57      C55
ಅನ್ಯ ರಜವ ಸೋಂಕದೆ, ತನ್ನ ರಜವ ಬಾಧಿಸದೆ,
ರವಿಯ ಬೆಳಸ ಬಳಸದೆ ಲಿಂಗದಲ್ಲಿ ಬೆಳೆದ ಬೆಳಸ
ತಂದು,
ಜಂಗಮದಲ್ಲಿ ಸವೆಸುತಿಪ್ಪ[ನು] ಲಿಂಗಭಕ್ತ.
ಆ ಭಕ್ತನಲ್ಲಿ ಗುಹೇಶ್ವರಲಿಂಗನಿಪ್ಪನು.
137.02 366 ಅಲ್ಲಮ ಗುಹೇಶ್ವರಲಿಂಗ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 58      A202
ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯನೇರ ಬಯಸುವರು,
ವೀರರೂ ಅಲ್ಲ, ಧೀರರೂ ಅಲ್ಲ, ಇದು ಕಾರಣ
ನೆರೆ ಮೂರು ಲೋಕವೆಲ್ಲವೂ ಹಲ್ಲಣವ
ಹೊತ್ತುಕೊಂಡು,
ತೊಳಲುತ್ತ ಇದ್ದಾರೆ.
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರು ?
127.02 202 ಅಲ್ಲಮ ಗುಹೇಶ್ವರ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 59      C56
ಭಕ್ತ ಭಕ್ತನೆಂಬರು,
ಪೃಥ್ವಿಯ ಪೂರ್ವಾಶ್ರಯವ ಕಳೆಯನಲರಿಯಫದನ್ನಕ್ಕ,
ಅಪ್ಪುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,
ತೇಜದ ಪೂರ್ವಾಶ್ರಯವ
ಕಳೆಯಲರಿಯದನ್ನಕ್ಕ,
ವಾಯುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,
ಆಕಾಶದ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,
ಸೋಮಸೂರ್ಯರ ಕಳೆಗಳ ಪೂರ್ವಾಶ್ರಯವ
ಕಳೆಯಲರಿಯದನ್ನಕ್ಕ,
ಆತ್ಮನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,_
ಭಕ್ತರೆಂದು ಲಿಂಗವ ಪೂಜಿಸುವವರ ಕಂಡು
ನಾನು ಬೆರಗಾದೆ ಗುಹೇಶ್ವರಾ.
136.02 367 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 60      C57
ಹರಿದು ಹತ್ತಿ ಮುಟ್ಟಿ ಹಿಡಿದೆಹೆವೆಂದು
ಜಾರಿ ಉರುಳಿ ಬಿದ್ದರು ಅನಂತರು.
ಹಿಡಿದವರೆಲ್ಲ ಹೆಣನುಂಡು ಹೋದರು.
ನಾ ಹಿಡಿದ ಬಂಡಿ(ಬಂದಿ?)
ಒಡಬಂಡಿ(ಒಡಬಂದಿ?)ಯಾಯಿತ್ತು ಗುಹೇಶ್ವರಾ.
476.02 368 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????
ವಚನ ಸಂಖ್ಯೆ 61      C58
ಅಷ್ಟವಿಧಾರ್ಚನೆ ಷೋಡಶೋಪಚಾರಂಗಳ
ಹಂಗು ಹರಿಯಿಲ್ಲದೆ ಮಾಡುವೆನು.
ನಾ ಮಾಡುವ ಕ್ರೀಗಳೆಲ್ಲವು ನೀವೆಯಾದ ಕಾರಣ
ಗುಹೇಶ್ವರಾ ನಿಮ್ಮಲ್ಲಿ ತದ್ಗತವಾಗಿದ್ದೆನು.
850.02 369 ಅಲ್ಲಮ ಗುಹೇಶ್ವರಾ
ಆಕರ ಗ್ರಂಥಗಳು
ಜಕ್ಕಣ್ಣನ ಏಕೋತ್ತರಶತಸ್ಥಲ????

[ಮೊದಲ ಪುಟ]  12345678910ಮುಂದಿನ 10 » [ಕೊನೆ ಪುಟ]


ಸಿಕ್ಕ ಪಲಿತಾಂಶಗಳು 121 ಇದು ಪುಟ 6 ಈ ಪುಟದಲ್ಲಿ ಪಲಿತಾಂಶಗಳು 51 ರಿಂದ 60 ವರೆಗೆ